ಟಿಡಿಪಿ ಪಕ್ಷದ ಚಂದ್ರಬಾಬು ನಾಯ್ಡು ಬಂಧನ ಹಿನ್ನೆಲೆ – ಆಂಧ್ರಪ್ರದೇಶದಲ್ಲಿ ಇಂದು ರಾಜ್ಯಾದ್ಯಂತ ಬಂದ್‌, ಪ್ರಮುಖ ಪಕ್ಷಗಳ ಬೆಂಬಲ

ಟಿಡಿಪಿ ಪಕ್ಷದ ಚಂದ್ರಬಾಬು ನಾಯ್ಡು ಬಂಧನ ಹಿನ್ನೆಲೆ – ಆಂಧ್ರಪ್ರದೇಶದಲ್ಲಿ ಇಂದು ರಾಜ್ಯಾದ್ಯಂತ ಬಂದ್‌, ಪ್ರಮುಖ ಪಕ್ಷಗಳ ಬೆಂಬಲ

ನ್ಯೂಸ್ ಆ್ಯರೋ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ಪಕ್ಷದ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಕಾನೂನು ಬಾಹಿರ ಎಂದು ಆರೋಪಿಸಿ ಟಿಡಿಪಿ ನಾಯಕರು ರಾಜ್ಯದಲ್ಲಿ ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಆಂಧ್ರಪ್ರದೇಶದಲ್ಲಿ ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಸೆಪ್ಟೆಂಬರ್ 9ರಂದು ಸಿಐಡಿ ಬಂಧಿಸಿದ್ದು 14 ದಿನಗಳ ಕಾಲ ಅಂದರೆ ಸೆಪ್ಟೆಂಬರ್ 23ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತೆಲುಗು ದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ವಿರೋಧಿಸಿ ಸೋಮವಾರ ತೆಲುಗು ದೇಶಂ ಪಕ್ಷವು ಕರೆ ನೀಡಿರುವ ರಾಜ್ಯ ಬಂದ್‌ಗೆ ಜನಸೇನಾ ಪಕ್ಷವು ಬೆಂಬಲ ನೀಡಿದೆ.

ಈ ಬಂಧನವನ್ನು ಖಂಡಿಸಿರುವ ಜೆಎಸ್‌ಪಿ ಮುಖ್ಯಸ್ಥ ಪವನ್ ಕಲ್ಯಾಣ್, ಆಡಳಿತ ಪಕ್ಷ ವೈಎಸ್‌ಆರ್‌ಸಿಪಿ ರಾಜ್ಯದಲ್ಲಿ ಸಮಾಜವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದೆ. ವೈಎಸ್‌ಆರ್‌ಸಿಪಿ ಸರ್ಕಾರವು ವಿರೋಧ ಪಕ್ಷಗಳಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.

ಟಿಡಿಪಿ ರಾಷ್ಟ್ರೀಯ ವಕ್ತಾರ ಪ್ರೇಮ್ ಕುಮಾರ್ ಜೈನ್, ಜಗನ್ ಮೋಹನ್ ರೆಡ್ಡಿ ಅವರೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಪಿಸಿ) ಚಂದ್ರಬಾಬು ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ಅವರಿಗೆ ಅರೆಸ್ಟ್ ವಾರೆಂಟ್ ಅನ್ನು ಮೊದಲು ನೀಡಿಲ್ಲ ಎಂದು ಆರೋಪಿಸಿದರು.

ಬಂದ್ ಹಿನ್ನೆಲೆಯಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದೆ ಮತ್ತು ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಶಂಖ ಬ್ರತಾ ಬಾಗ್ಚಿ ತಿಳಿಸಿದ್ದಾರೆ.

Related post

ಕೊಡಗು ವಿದ್ಯಾರ್ಥಿನಿಯ ತಲೆ ಕಡಿದು ಹತ್ಯೆ ಮಾಡಿದ ಆರೋಪಿ ಅಂದರ್..!

ಕೊಡಗು ವಿದ್ಯಾರ್ಥಿನಿಯ ತಲೆ ಕಡಿದು ಹತ್ಯೆ ಮಾಡಿದ ಆರೋಪಿ ಅಂದರ್..!

ನ್ಯೂಸ್ ಆ್ಯರೋ: ಎಸ್ಎಸ್ಎಲ್ಸಿ ಫಲಿತಾಂಶದ ಉತ್ತಮ ಅಂಕಗಳಿಸಿ ಪಾಸಾಗಿದ್ದ ವಿದ್ಯಾರ್ಥಿನಿಯನ್ನು ಭೀಕರವಾಗಿ ರುಂಡ ಕಡಿದು ಕೊಲೆ ಮಾಡಿದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯವೆಸಗಿ ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ನನ್ನು ಸೋಮವಾರಪೇಟೆ…
ದಿನ‌ ಭವಿಷ್ಯ 11-05-2024 ಶನಿವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 11-05-2024 ಶನಿವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ ತಾಳ್ಮೆಯಿಂದಿರಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಇದಕ್ಕಾಗಿ ನೀವು ನಿಮ್ಮ…
ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…

Leave a Reply

Your email address will not be published. Required fields are marked *