ಇನ್ಮುಂದೆ ಬೆಂಗಳೂರು ಸೇರಿ ದಕ್ಷಿಣ ಭಾರತದಲ್ಲಿ ಓಡಲಿದೆ ಮೂರು ವಂದೇ ಮಾತರಂ ರೈಲುಗಳು – ಸೌತ್ ಮಿಶನ್ ಯೋಜನೆಯ ಹಿಂದಿದೆ ಚುನಾವಣಾ ಲೆಕ್ಕಾಚಾರ

ಇನ್ಮುಂದೆ ಬೆಂಗಳೂರು ಸೇರಿ ದಕ್ಷಿಣ ಭಾರತದಲ್ಲಿ ಓಡಲಿದೆ ಮೂರು ವಂದೇ ಮಾತರಂ ರೈಲುಗಳು – ಸೌತ್ ಮಿಶನ್ ಯೋಜನೆಯ ಹಿಂದಿದೆ ಚುನಾವಣಾ ಲೆಕ್ಕಾಚಾರ

ನ್ಯೂಸ್ ಆ್ಯರೋ : ‘ವಿಶ್ವಗುರು’ ಧ್ಯೇಯದೊಂದಿಗೆ ಭಾರತ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಕಂಡಿದೆ. ಇತರ ದೇಶಗಳಿಗೆ ಸರಿ ಸಮಾನವಾಗಿ ನಿಲ್ಲುವಂತಹ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿವೆ. ಸದ್ಯ, ಕೇಂದ್ರ ಸರ್ಕಾರ ರೈಲ್ವೆ ಕ್ಷೇತ್ರದ ಕಡೆಗೆ ಗಮನ ಹರಿಸಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದಲ್ಲಿ ಮೂರು ವಂದೇ ಮಾತರಂ ರೈಲುಗಳು ಓಡಲಿವೆಯಂತೆ. ಈ ಬಗೆಗಿನ ವರದಿ ಇಲ್ಲಿದೆ‌.

ಪ್ರಸಕ್ತ ವರ್ಷ ಕರ್ನಾಟಕ ಮತ್ತು ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆಂಧ್ರಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ಇದೆ. ಇದರೊಂದಿಗೆ ‘ಸೌತ್ ಮಿಶನ್’ ಯೋಜನೆಯಡಿ ಮುಂದಿನ ವರ್ಷದ ಲೋಕಸಭಾ ಚುನಾವಣೆ ದೃಷ್ಟಿಯಿಂದ ದಕ್ಷಿಣ ರಾಜ್ಯಗಳತ್ತ ಬಿಜೆಪಿ ಗಮನ ಕೇಂದ್ರೀಕರಿಸಿದೆ ಎನ್ನಲಾಗುತ್ತಿದೆ‌.

ಈ ವರ್ಷದ ನವೆಂಬರ್‌ನಲ್ಲಿ ಚೆನ್ನೈ– ಬೆಂಗಳೂರು– ಮೈಸೂರು ನಡುವೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಹೆಸರಿನ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದ್ದರು.

ಇತ್ತೀಚೆಗೆ ಲೋಕಾರ್ಪಣೆಗೊಂಡ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣ ನಡುವಿನ ರೈಲು ಚಾಲನೆ ಆರಂಭಿಸಿದಾಗಿನಿಂದ ನೂರರಷ್ಟು ಆಸನ ಭರ್ತಿಯೊಂದಿಗೆ ಸಂಚರಿಸುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Related post

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ – ಅತೃಪ್ತ ಬಿಲ್ಲವರ ವೋಟ್ ಬ್ಯಾಂಕ್ ಸೆಳೆಯಲು ಚಿಂತನೆ

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದ ಭರ್ಜರಿ ಪ್ರಚಾರ…

ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರ ಆರಂಭಕ್ಕೂ‌ ಮೊದಲೇ ಬಿರುಸುಗೊಂಡಿದ್ದು, ಬಿಲ್ಲವ ಸಮಯದಾಯವನ್ನು ಒಗ್ಗೂಡಿಸುವ…
ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 27-03-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಇಂದು ನಿಮ್ಮ ಹಣವನ್ನು ಅನೇಕ ವಿಷಯಗಳಿಗೆ ಖರ್ಚು ಮಾಡಬಹುದು, ನೀವು ಇಂದು ಉತ್ತಮ ಬಜೆಟ್ ಅನ್ನು ಯೋಜಿಸಬೇಕಾಗಿದೆ,…
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ – ದಕ್ಷಿಣ ಕನ್ನಡ ಜಿಲ್ಲಾದ್ಯಂತ ಈ‌ ದಿನಗಳಲ್ಲಿ ಮದ್ಯ ಮಾರಾಟ ಇಲ್ಲ..!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ –…

ನ್ಯೂಸ್ ಆ್ಯರೋ ‌: ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸಂಬಂಧಿಸಿದಂತೆ ಏಪ್ರಿಲ್ 24ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಜಿಲ್ಲಾಡಳಿತ ನಿಷೇಧ ಹೇರಿ…

Leave a Reply

Your email address will not be published. Required fields are marked *