ಬಿಹಾರ : 1700 ಕೋಟಿ‌ ರೂಪಾಯಿ ಮೌಲ್ಯದ ನಿರ್ಮಾಣ ಹಂತದ ಸೇತುವೆ ಕುಸಿತ – ವೀಡಿಯೋ ವೈರಲ್..!!

ಬಿಹಾರ : 1700 ಕೋಟಿ‌ ರೂಪಾಯಿ ಮೌಲ್ಯದ ನಿರ್ಮಾಣ ಹಂತದ ಸೇತುವೆ ಕುಸಿತ – ವೀಡಿಯೋ ವೈರಲ್..!!

ನ್ಯೂಸ್ ಆ್ಯರೋ‌ : ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಆಗುವನಿ-ಸುಲ್ತಾನ್​ಗಂಜ್ ಸೇತುವೆ ಭಾನುವಾರ ಕುಸಿದು ಬಿದ್ದಿದ್ದು, ಈ ವೀಡಿಯೋ ವೈರಲ್ ಆಗಿದೆ.

ನದಿಯಲ್ಲಿ ಸೇತುವೆ ಕುಸಿದು ಬಿದ್ದ ಕ್ಷಣ ಸ್ಥಳೀಯರ ಮೊಬೈಲ್​ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಂಜೆ 6 ಗಂಟೆ ಸುಮಾರಿಗೆ ಸೇತುವೆ ಕುಸಿದಿದ್ದು, ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ. ಸ್ಥಳೀಯ ಆಡಳಿತದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇವೆ ಎಂದು ಭಾಗಲ್ಪುರ್ ಡಿಡಿಸಿ ಕುಮಾರ್ ಅನುರಾಗ್ ತಿಳಿಸಿದ್ದಾರೆ.

”ಈ ವರ್ಷದ ಕೊನೆಯಲ್ಲಿ, ಅಂದರೆ ನವೆಂಬರ್-ಡಿಸೆಂಬರ್ ವೇಳೆಗೆ ಸೇತುವೆಯ ಉದ್ಘಾಟನೆ ನಡೆಯಲಿದೆ ಎಂದು ನಾವು ನಿರೀಕ್ಷಿಸಿದ್ದೆವು. ಆದರೆ ಅದು ಕುಸಿದಿದ್ದು ದುರದೃಷ್ಟಕರ. ಇಲ್ಲಿ ಏನೋ ತಪ್ಪಿದೆ. ಘಟನೆಯ ಬಗ್ಗೆ ತನಿಖೆ ಆಗಬೇಕು” ಎಂದು ಸುಲ್ತಾನ್​ಗಂಜ್ ಜೆಡಿಯು ಶಾಸಕ ಲಲಿತ್ ನಾರಾಯಣ್ ಮಂಡಲ್ ಆಗ್ರಹಿಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಹಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ, “ಕಮಿಷನ್ ಕೇಳುವ ಸಂಪ್ರದಾಯವಿದೆ. ಇದು ಅವರ (ಬಿಹಾರ ಸಿಎಂ ನಿತೀಶ್ ಕುಮಾರ್) ರಾಜಕೀಯ ಅಸ್ಥಿರತೆಯ ಮನಸ್ಥಿತಿಯ ಪರಿಣಾಮವಾಗಿದೆ. ಆಡಳಿತದಲ್ಲಿ ಅರಾಜಕತೆ ಮತ್ತು ಭ್ರಷ್ಟಾಚಾರವಿದೆ, ವ್ಯವಸ್ಥೆ ಕುಸಿಯುತ್ತಿದೆ, ಆದರೆ ಅವರು ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ.

ಕಳೆದ ವರ್ಷವೂ ಕುಸಿದಿದ್ದ ಸೇತುವೆ

ಕಳೆದ ವರ್ಷ ಬಿಹಾರದ ಬೇಗುಸರಾಯ್ ಜಿಲ್ಲೆಯ ಸಾಹೇಬ್‌ಪುರ ಕಮಾಲ್‌ನಲ್ಲಿ ಬುರ್ಹಿ ಗಂಡಕ್ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಕುಸಿದು ನದಿಗೆ ಬಿದ್ದಿತ್ತು. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *