ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ದೇವರ ನಾಡಿನಲ್ಲಿ ಮತ್ತೊಮ್ಮೆ ವೈರಸ್ ಆತಂಕ; ಕೊರೊನಾ, ನಿಫಾ ಬಳಿಕ ಆತಂಕ ಹೆಚ್ಚಿಸಿದ ವೆಸ್ಟ್‌ನೈಲ್‌

ನ್ಯೂಸ್ ಆರೋ: ಕೊರೋನಾ ವೈರಸ್ ನ ಆತಂಕ ಮುಗಿಯುತ್ತಿದ್ದಂತೆ ಇದೀಗ ಮತ್ತೆ ಹೊಸದೊಂದು ವೈರಸ್ ಪತ್ತೆಯಾಗಿದೆ. ದಿನಕಳೆದಂತೆ ನಾನಾರೀತಿಯ ವೈರಸ್‌ಗಳು ಸೃಷ್ಠಿಯಾಗುತ್ತಿದ್ದು ಆತಂಕ ಹೆಚ್ಚಾಗುತ್ತಿದೆ. ಕೆಲವು ದಿನಗಳ ಹಿಂದಷ್ಟೇ ನೆರೆಯ ರಾಜ್ಯವಾದ ಕೇರಳದಲ್ಲಿ ಹಕ್ಕಿಜ್ಚರ ಕಾಣಿಸಿಕೊಂಡಿತ್ತು. ಅದು ಮಾಸುವ ಮುನ್ನವೇ  ವೆಸ್ಟ್‌ನೈಲ್‌ ಎಂಬ ವೈರಸ್‌ ಕೇರಳದ ಜನರನ್ನು ಕಾಡುತ್ತಿದ್ದು, ಈಗಾಗಲೇ ಮಕ್ಕಳು ಸೇರಿದಂತೆ ಕನಿಷ್ಟ ಐವರಲ್ಲಿ ಸೋಂಕು ದೃಢಪಟ್ಟಿದೆ.

ಹೌದು, ಕೇರಳದ ತ್ರಿಶೂರ್‌, ಮಲಪ್ಪುರಂ ಹಾಗೂ ಕೋಝಿಕ್ಕೋಡ್‌ನಲ್ಲಿ ವೆಸ್ಟ್‌ನೈಲ್‌ ಜ್ವರ ಹರಡುತ್ತಿದ್ದು ಇದು ಸೊಳ್ಳೆಯಿಂದ ಹರಡುವ ರೋಗವಾಗಿದೆ. ಸೊಳ್ಳೆಗಳ ನಿಯಂತ್ರಣಕ್ಕೆ ರಾಜ್ಯದಾದ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಾಗಿದೆ. ಮುಂಗಾರು ಪೂರ್ವ ಸಮಯದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗುವ ಕಾರಣ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ವೆಸ್ಟ್‌ನೈಲ್‌ ವೈರಸ್‌ 1937ರಲ್ಲಿ ಮೊದಲ ಬಾರಿಗೆ ಉಗಾಂಡಾದ ವೆಸ್ಟ್‌ನೈಲ್‌ ಜಿಲ್ಲೆಯಲ್ಲಿ ಮಹಿಳೆಯೊಬ್ಬರಲ್ಲಿ ಕಾಣಿಸಿಕೊಂಡಿತು. ಕೇರಳವು 2011ರಲ್ಲಿ ವೆಸ್ಟ್‌ನೈಲ್ ಜ್ವರದ ಮೊದಲ ಪ್ರಕರಣವನ್ನು ವರದಿ ಮಾಡಿದೆ. 2019 ರಲ್ಲಿ ಮಲಪ್ಪುರಂನ ಆರು ವರ್ಷದ ಬಾಲಕ ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾನೆ. 2022ರಲ್ಲಿ, ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿಯೊಬ್ಬರು ಈ ರೋಗದಿಂದ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ಈ ವೈರಸ್ ಮಾನವರಲ್ಲಿ ಮಾರಣಾಂತಿಕ ನರವೈಜ್ಞಾನಿಕ ಕಾಯಿಲೆಗೆ ಕಾರಣವಾಗಬಹುದು. ಆದರೆ, ಕೆಲವೊಮ್ಮೆ ಸೋಂಕಿಗೆ ಒಳಗಾದ ಹೆಚ್ಚಿನ ವ್ಯಕ್ತಿಗಳಲ್ಲಿ ಯಾವುದೇ ರೋಗಲಕ್ಷಣಗಳು ಕಂಡುಬರುವುದಿಲ್ಲ. ಇದು ಮುಖ್ಯವಾಗಿ ಸೋಂಕಿತ ಸೊಳ್ಳೆಗಳ ಕಡಿತದ ಮೂಲಕ ಮನುಷ್ಯರಿಗೆ ಹರಡುತ್ತದೆ. 

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ವೆಸ್ಟ್‌ನೈಲ್ ವೈರಸ್ ಮುಖ್ಯವಾಗಿ ಆಫ್ರಿಕಾ, ಯುರೋಪ್, ಮಧ್ಯಪ್ರಾಚ್ಯ, ಉತ್ತರ ಅಮೆರಿಕ ಮತ್ತು ಪಶ್ಚಿಮ ಏಷ್ಯಾದಲ್ಲಿ ಕಂಡುಬರುತ್ತದೆ.  ಈ ಜ್ವರವು ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳಿಂದ ಹರಡುತ್ತದೆ.

ರೋಗಲಕ್ಷಣಗಳು:

ಸಾಮಾನ್ಯವಾಗಿ ಮೊಟ್ಟಮೊದಲ ಬಾರಿಗೆ ಈ ಸೋಂಕಿಗೆ ಒಳಗಾದ 80% ಜನರಲ್ಲಿ ಯಾವುದೇ ಬಗೆಯ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಕೆಲವರಲ್ಲಿ ಜ್ವರ, ತಲೆನೋವು, ಸುಸ್ತು, ದೇಹದ ನೋವು, ವಾಕರಿಕೆ, ವಾಂತಿ, ಚರ್ಮದ ದದ್ದುಗಳು ಮತ್ತು ಊದಿಕೊಂಡ ದುಗ್ಧರಸ ಗ್ರಂಥಿಗಳು ಮುಂತಾದ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಇದಲ್ಲದೆ, ಕೆಲವು ರೋಗಿಗಳಲ್ಲಿ ಕುತ್ತಿಗೆ ಬಿಗಿತ, ಮೂರ್ಖತನ, ದಿಗ್ಭ್ರಮೆ, ಕೋಮಾ, ನಡುಕ, ಸೆಳೆತ, ಸ್ನಾಯು ದೌರ್ಬಲ್ಯ ಮತ್ತು ಪಾರ್ಶ್ವವಾಯು ಸೇರಿದಂತೆ ತೀವ್ರವಾದ ರೋಗಲಕ್ಷಣಗಳು ಸಹ ಕಾಣಿಸಿಕೊಳ್ಳಬಹುದು.

ಚಿಕಿತ್ಸೆಯಿಲ್ಲದ ರೋಗ:
ವೆಸ್ಟ್‌ನೈಲ್ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ ಎಂದು ಡಾ ಗುಪ್ತಾ ತಿಳಿಸಿದ್ದಾರೆ. ಸೌಮ್ಯವಾದ ಪ್ರಕರಣಗಳಲ್ಲಿ, ನೋವು ಮತ್ತು ಜ್ವರ ಪರಿಹಾರಕ್ಕಾಗಿ ಪ್ರತ್ಯಕ್ಷವಾದ ಔಷಧಿಗಳ ಮೂಲಕ ರೋಗಲಕ್ಷಣಗಳನ್ನು ನಿರ್ವಹಿಸಬಹುದು.

ತೀವ್ರತರವಾದ ಪ್ರಕರಣಗಳಿಗೆ ಆಸ್ಪತ್ರೆಗೆ ಸೇರಿಸುವುದು, ಅಭಿದಮನಿ ದ್ರವಗಳು, ಉಸಿರಾಟದ ಬೆಂಬಲ ಮತ್ತು ದ್ವಿತೀಯಕ ಸೋಂಕುಗಳ ತಡೆಗಟ್ಟುವಿಕೆ ಅಗತ್ಯವಾಗಬಹುದು.

ಅನಾರೋಗ್ಯದಿಂದ ಚೇತರಿಸಿಕೊಳ್ಳುವುದು ವ್ಯಕ್ತಿಯ ವಯಸ್ಸು ಮತ್ತು ಒಟ್ಟಾರೆ ಆರೋಗ್ಯ ಸ್ಥಿತಿಯನ್ನು ಅವಲಂಬಿಸಿರುತ್ತದೆ, ವಯಸ್ಸಾದ ವಯಸ್ಕರು ಮತ್ತು ದುರ್ಬಲಗೊಂಡ ರೋಗನಿರೋಧಕ ಶಕ್ತಿ ಹೊಂದಿರುವವರು ತೀವ್ರ ತೊಡಕುಗಳಿಗೆ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *