ಈ ಉದ್ಯೋಗಾವಕಾಶ ಮಿಸ್ ಮಾಡ್ಲೇ ಬೇಡಿ; ಎನ್​​ಹೆಚ್​​ಎಐನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

NHAI recruitment
Spread the love

ನ್ಯೂಸ್ ಆ್ಯರೋ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್ (ಲೀಗಲ್) ಹುದ್ದೆಗಳು ಖಾಲಿಯಿದ್ದು, ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮಾಡಬಯಸುವವರು ನವೆಂಬರ್ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಈ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಇರಬೇಕಾದ ಅರ್ಹತೆಗಳು

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಲಿಯಲ್ಲಿ ಕಡ್ಡಾಯವಾಗಿ ಕಾನೂನಿನಲ್ಲಿ ಪದವಿ, ಎಲ್‌ಎಲ್‌ಪಿ ಪದವಿ ಪಡೆದಿರಬೇಕು.
  • ಅಭ್ಯರ್ಥಿಗಳ ವಯಸ್ಸು ಗರಿಷ್ಠ 56 ವರ್ಷ ಮೀರಿರಬಾರದು. ಜಾತಿ ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯಿದೆ

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

*ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯಿರುತ್ತದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವಿರುತ್ತದೆ.

  • ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ 15,600 ರಿಂದ 39,100 ರೂಪಾಯಿವರೆಗೆ ತಿಂಗಳ ವೇತನವಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತ ಅಭ್ಯರ್ಥಿಗಳು ನವೆಂಬರ್ 29 ರೊಳಗೆ ಆನ್‌ಲೈನ್ ಇಲ್ಲವೇ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ಈ ವೆಬ್ ಸೈಟ್ ಲಿಂಕ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
  • ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು DGM (HR & Admn-III) -NG, ಅದೇ ಹೈವೇಸ್ ಅಥಾರಿಟಿ ಆಫ್ ಇಂಡಿಯಾ, ಪ್ಲಾಟ್ ನಂ.ಜಿ-5&6 ಸೆಕ್ಟರ್-10, ದ್ವಾರಕಾ, ನವೆಂಬರ್-110075” ಇಲ್ಲಿಗೆ ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

    ಅಧಿಕೃತ ವೆಬ್ ಸೈಟ್: https://vacancy.nhai.org/vacancy24/UserManager/User/Index.aspx

Leave a Comment

Leave a Reply

Your email address will not be published. Required fields are marked *

error: Content is protected !!