ಕರ್ನಾಟಕ ಸೇರಿ 9 ಕಡೆ ಎನ್‌ಐಎ ದಾಳಿ; ಹಲವು ದಾಖಲೆಗಳು ವಶಕ್ಕೆ

NIA
Spread the love

ನ್ಯೂಸ್ ಆ್ಯರೋ: ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೋಮವಾರ (ನ.11) ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿ, ಶೋಧ ಕಾರ್ಯಾಚರಣೆ ನಡೆಸಿತು. ಭಾರತವನ್ನು ಅಸ್ಥಿರಗೊಳಿಸುವ ಅಲ್​ಖೈದಾ ಉಗ್ರ ಸಂಘಟನೆಯ ಸಂಚಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ನೆಲೆಸಿರುವ ಬಾಂಗ್ಲಾದೇಶ ಪ್ರಜೆಗಳು ಅಲ್ ಖೈದಾ ಜೊತೆಗೆ ನಂಟು ಹೊಂದಿದ್ದಾರೆ. ಜೊತೆಗೆ ಅಲ್ ಖೈದಾ ಉಗ್ರ ಸಂಘಟನೆ ಕುರಿತು ಪ್ರಚಾರ, ಚಟುವಟಿಕೆಗಳನ್ನು ಬೆಂಬಲಿಸುವ ಮತ್ತು ಧನಸಹಾಯ ಮಾಡುವ ವ್ಯಕ್ತಿಗಳ ವಿರುದ್ದ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಆಸ್ಸಾಂನ 9 ಕಡೆ ದಾಳಿ ಮಾಡಲಾಗಿದೆ.

ಎನ್​ಐಎ ಅಧಿಕಾರಿಗಳು ಕಾರ್ಯಾಚಾರಣೆ ವೇಳೆ ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್, ಡಿಜಿಟಲ್ ಸಾಧನಗಳು ಮತ್ತು ಭಯೋತ್ಪಾದಕ ನಿಧಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡರು.

2023ರ ನವೆಂಬರ್‌ನಲ್ಲಿ, ಮೊಹಮ್ಮದ್ ಎಂದು ಗುರುತಿಸಲಾದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೋಜಿಬ್ಮಿಯಾನ್, ಮುನ್ನಾ ಖಾಲಿದ್ ಅನ್ಸಾರಿ ಅಲಿಯಾಸ್​ ಮುನ್ನಾ ಖಾನ್, ಅಜರುಲ್ ಇಸ್ಲಾಂ ಅಲಿಯಾಸ್​ ಜಹಾಂಗೀರ್ ಅಥವಾ ಆಕಾಶ್ ಖಾನ್, ಅಬ್ದುಲ್ ಲತೀಫ್ ಅಲಿಯಾಸ್​ ಮೊಮಿನುಲ್ ಅನ್ಸಾರಿ ಮತ್ತು ಐದನೇ ಆರೋಪಿ ಫರೀದ್ ಭಾರತೀಯ ಪ್ರಜೆಯಾನ್ನು ಬಂಧಿಸಲಾಗಿತ್ತು ಎಂದು ಎನ್​ಐಎ ತಿಳಿಸಿದೆ.

ಪ್ರಮುಖವಾಗಿ ಐವರು ಆರೋಪಿಗಳು ತಮ್ಮ ಚಟುವಟಿಕೆಗಳನ್ನು ಗೌಪ್ಯವಾಗಿ ನಡೆಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದರು ಎಂಬುದು ಅವರ ಪೂರ್ವಾಪರದ ಬಗ್ಗೆ ಎನ್‌ಐಎ ತನಿಖೆ ನಡೆಸಿದಾಗ ತಿಳಿದು ಬಂದಿತ್ತು. ಭಾರತದಲ್ಲಿನ ಮುಸ್ಲಿಂ ಯುವಕರನ್ನು ಪ್ರೇರೇಪಿಸುವಲ್ಲಿ ಇವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅಲ್-ಖೈದಾದ ಹಿಂಸಾತ್ಮಕ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದ್ದರು. ಹಣ ಸಂಗ್ರಹಿಸಿ ಅದನ್ನು ಅಲ್-ಖೈದಾಕ್ಕೆ ಕಳುಹಿಸುತ್ತಿದ್ದರು ಎಂದು ಎನ್​ಐಎ ಮಾಹಿತಿ ನೀಡಿದೆ.

Leave a Comment

Leave a Reply

Your email address will not be published. Required fields are marked *

error: Content is protected !!