ನಕಲಿ ದಾಖಲೆ ಸೃಷ್ಟಿಸಿ ಭಾರತಕ್ಕೆ ಎಂಟ್ರಿ: ಮಲ್ಪೆಯಲ್ಲಿ 9 ಮಂದಿ ಬಾಂಗ್ಲಾದೇಶಿಯರು ವಶಕ್ಕೆ
ನ್ಯೂಸ್ ಆ್ಯರೋ: ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಆರಿಸಿಕೊಂಡು ಬಂದಿದ್ದ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ಘಟನೆ ನಡೆದಿದ್ದು, ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿಚಾರಣೆಯನ್ನು ಮಲ್ಪೆ ಪೊಲೀಸರು ನಡೆಸುತ್ತಿದ್ದಾರೆ.
ವಶಕ್ಕೆ ಪಡೆದವರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂದು ಗುರುತಿಸಲಾಗಿದೆ. ನಕಲಿಯಾಗಿ ಭಾರತೀಯ ದಾಖಲಾತಿ ಸೃಷ್ಟಿಸಿ ದೇಶಕ್ಕೆ ಪ್ರವೇಶ ಮಾಡಿರುವುದು ಬೆಳಕಿಗೆ ಬಂದಿದ್ದು, ಆರೋಪಿಗಳು ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿವುದು ತಿಳಿದು ಬಂದಿದೆ.
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಮಹಮ್ಮದ್ ಮಾಣಿಕ್ ಎಂಬಾತ ಪ್ರಯತ್ನಿಸಿದ್ದನಂತೆ. ಬಾಂಗ್ಲಾದೇಶದ ಇಮಿಗ್ರೆಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಮತ್ತೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.
ಇತ್ತೀಚಿಗೆ ಜಿಗಣಿಯಲ್ಲಿ ಪಾಕಿಸ್ತಾನಿ ಪ್ರಜೆ ಮತ್ತು ಆತನ ಪತ್ನಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖರ ಮಾಹಿತಿ ಮೇರೆಗೆ ಮತ್ತೆ ಮೂವರು ಪಾಕ್ ಪ್ರಜೆಗಳನ್ನು ಬೆಂಗಳೂರಿನ ಪೀಣ್ಯದಲ್ಲಿ ಬಂಧಿಸಲಾಗಿತ್ತು. ಪ್ರಕರಣದ ಕಿಂಗ್‌ಪಿನ್ ಪರ್ವೇಜ್ ಮಾಹಿತಿ ಆಧರಿಸಿ ಮತ್ತೆ 14 ಪಾಕಿಸ್ತಾನಿಗಳನ್ನ ಅರೆಸ್ಟ್ ಮಾಡಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಬಾಂಗ್ಲಾದೇಶ ಪ್ರದೇಶಗಳ ಬಂಧನ ಭಾರೀ ಆತಂಕವನ್ನು ಸೃಷ್ಟಿಸಿದೆ.
Leave a Comment