ಸ್ಯಾಂಡಲ್ ವುಡ್ ನ ಈ ನಟನ ವಿರುದ್ಧ ಜಾಮೀನು ರಹಿತ ವಾರೆಂಟ್: ಹೈಕೋರ್ಟ್ ಹೇಳಿದ್ದೇನು?
ನ್ಯೂಸ್ ಆ್ಯರೋ: ಹಿಜಾಬ್ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವಿಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಜಾರಿ ಮಾಡಲಾಗಿದ್ದ ಜಾಮೀನು ರಹಿತ ವಾರೆಂಟ್ ಅನ್ನು ಹೈಕೋರ್ಟ್ ಹಿಂಪಡೆದಿದೆ.
ಪ್ರಕರಣ ಸಂಬಂಧ ದಾಖಲಾಗಿರುವ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಕೆ ರಾಜೇಶ್ ರೈ ಅವರ ಚೇತನ್ ಪರ ವಕೀಲರು ನ್ಯಾಯಾಲಯ ಈ ಹಿಂದೆ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಅರ್ಜಿ ಕುರಿತು ನ್ಯಾಯಾಲಯದ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಚೇತನ್ ಅಹಿಂಸಾ ವಿರುದ್ಧ ಈ ಹಿಂದೆ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು.
ಅರ್ಜಿ ಇತ್ತೀಚೆಗೆ ಮತ್ತೆ ವಿಚಾರಣೆಗೆ ಬಂದಾಗ ನಟ ಚೇತನ್ ಹಾಗೂ ಅವರ ಪರ ವಕೀಲ ಜೆ.ಡಿ. ಕಾಶಿನಾಥ್ ಖುದ್ದು ಹಾಜರಾಗಿದ್ದರು. ಹೊರಡಿಸಿರುವ ಜಾಮೀನು ರಹಿತ ವಾರೆಂಟ್ ಹಿಂಪಡೆಯಬೇಕು ಎಂದು ಕೋರಿದರು.
ಆ ಮನವಿ ಪುರಸ್ಕರಿಸಿದ ನ್ಯಾಯಪೀಠವು ಚೇತನ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹಿಂಪಡೆದು, ಐದು ಸಾವಿರ ರು. ದಂಡ ವಿಧಿಸಿತು. ದಂಡ ಮೊತ್ತವನ್ನು ಹೈಕೋರ್ಟ್ ಕಟ್ಟಡದಲ್ಲಿರುವ ವಕೀಲರ ಗ್ರಂಥಾಲಯ ಘಟಕಕ್ಕೆ ಪಾವತಿಸಬೇಕು ಎಂದು ಚೇತನ್‌ಗೆ ಸೂಚಿಸಿ ವಿಚಾರಣೆ ಮುಂದೂಡಿತು.
Leave a Comment