One Nation One Election : ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ – ಕೇಂದ್ರ ಸಚಿವ ಸಂಪುಟದಿಂದ ಒಪ್ಪಿಗೆ
ನ್ಯೂಸ್ ಆ್ಯರೋ : ಪ್ರಧಾನಿ ಮೋದಿ ಕನಸು ನನಸಾಗುವ ಕಾಲ ಸನ್ನಿಹಿತವಾಗಿದ್ದು, ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ(One Nation One Election) ನಡೆಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಬುಧವಾರ (ಸೆ18 ) ಒಂದು ರಾಷ್ಟ್ರ ಒಂದು ಚುನಾವಣೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಿದ ನಂತರ ಈ ಮಹತ್ವದ ಬೆಳವಣಿಗೆ ನಡೆದಿದೆ.
ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಒಂದು ವೇಳೆ ಈ ಮಸೂದೆ ಅಂಗೀಕಾರವಾದರೆ ಮುಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳ ವಿಧಾನಸಭೆಗಳಿಗೂ ಚುನಾವಣೆ ನಡೆಯಲಿದೆ.
Leave a Comment