ಅವಿವಾಹಿತ ಪ್ರೇಮಿಗಳಿಗೆ OYO ಶಾಕ್: ಚೆಕ್ ಇನ್ ನಿಯಮ ಬದಲಿಸಿದ ಓಯೋ
ನ್ಯೂಸ್ ಆ್ಯರೋ: ಓಯೋ ಸಂಸ್ಥೆ ತನ್ನ ನಿಯಮಗಳಲ್ಲಿ ಬದಲಾವಣೆ ಮಾಡುವ ಮೂಲಕ ಪ್ರೇಮಿಗಳಿಗೆ ಶಾಕ್ ನೀಡಿದೆ. ದೇಶದಲ್ಲಿ ತನ್ನದೇ ಆದ ಖ್ಯಾತಿ ಹೊಂದಿದ್ದ ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಕೆಲವು ನಿಯಮಗಳಲ್ಲಿ ಬದಲಾವಣೆ ಮಾಡಿದೆ. ಹೌದು..ಇನ್ನು ಮುಂದೆ ಪ್ರೇಮಿಗಳು ಮೊದಲಿನಂತೆ ಓಯೋ ರೂಮ್ ಸೇವೆ ಪಡೆಯುವವರು ಕಡ್ಡಾಯವಾಗಿ ಮದುವೆ ಆಗಿರಲೇಬೇಕು. ಇಂತದೊಂದು ಹೊಸ ನಿಯಮವನ್ನು ಓಯೋ ಜಾರಿಗೆ ತಂದಿದೆ. ಪ್ರೇಮಿಗಳು ಓಯೋ ತನ್ನ ಚೆಕ್ ಇನ್ ನಿಯಮ ಬದಲಿಸಿದ್ದು, ಅವಿವಾಹಿತರಿಗೆ ರೂಮ್ ನೀಡಲ್ಲ ಎಂದು ಹೇಳಿದೆ.
ಪ್ರೇಮಿಗಳು ಸಂಗಾತಿಯೊಂದಿಗೆ ಆತ್ಮೀಯ ಖಾಸಗಿ ಸಮಯ ಕಳೆಯಲು ಮೊದಲ ಆಯ್ಕೆಯಾಗಿದ್ದ ಓಯೋ ರೂಮ್. ಆದರೆ ಅದೇಓಯೋ ಸಂಸ್ಥೆ ಇದೀಗ ತನ್ನ ಗ್ರಾಹಕರಿಗೆ ಶಾಕ್ ನೀಡಿದೆ. ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್ ರೂಮ್ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ತಮ್ಮ ಸಂಸ್ಥೆಯ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಹೊಸ ನಿಯಮದ ಬಗ್ಗೆ ತಿಳಿಸಿದೆ.
ದೇಶದಲ್ಲಿ ಟ್ರಾವೆಲ್ ಬುಕ್ಕಿಂಗ್ ಕಂಪನಿಯೊಂದಿಗೆ ಓಯೋ ರೂಮ್‌ಗಳಿಗಾಗಿ ಕೆಲವು ಹೋಟೆಲ್‌ಗಳನ್ನು ತನ್ನ ಪಾಲುದಾರರನ್ನಾಗಿಸಿಕೊಂಡಿತ್ತು. ಆ ಎಲ್ಲಾ ಹೋಟೆಲ್‌ಗಳಿಗಾಗಿ ಹೊಸ ಚೆಕ್ ಇನ್ ಮಾರ್ಗಸೂಚಿಗಳನ್ನು ಹೊರಡಿಸಿದೆ. ದೇಶದಲ್ಲಿ ಮೊದಲ ಬಾರಿಗೆ ಈ ನಿಯಮವನ್ನು ಅನುಷ್ಠಾನಗೊಳಿಸುತ್ತಿದ್ದು, ಓಯೋ, ಮೊದಲಿಗೆ ಮೀರತ್‌ನಿಂದ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಹಳೆಯ ನಿಯಮಗಳಲ್ಲಿ ಬದಲಾವಣೆ ತಂದಿರುವ ಓಯೋ ಪುರುಷ ಮತ್ತು ಮಹಿಳಾ ಜೋಡಿಗಳು ಆನ್ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಸಂಬಂಧವನ್ನು ದೃಢಪಡಿಸುವ ದಾಖಲೆಗಳನ್ನು ನೀಡುವುದು ಕಡ್ಡಾಯವಾಗಿದೆ.
ಆದರೆ ಈ ಹೊಸ ನಿಯಮ ಸದ್ಯ ಮೀರತ್‌ನಿಂದ ಆರಂಭವಾಗುತ್ತಿದ್ದು, ದೇಶದ ವಿವಿಧ ರಾಜ್ಯಗಳಲ್ಲಿ ಜಾರಿಯಲಿಲ್ಲ. ಹೀಗಾಗಿ ಓಯೋ ಜೊತೆಗೆ ಪಾಲುದಾರ ಹೋಟೆಲ್‌ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದ್ದು, ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಬಹುದು ಎನ್ನಲಾಗಿದೆ.
ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್ ಬುಕ್ಕಿಂಗ್ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ತಮ್ಮ ಉತ್ತಮ ನೆಟ್‌ವರ್ಕ್ ನಿಂದ ಈ ಓಯೋ ಹೋಟೆಲ್‌ಗಳು ದೇಶದ್ಯಾಂತ ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್ ಚೆಕ್‌ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ.
Leave a Comment