ಪೊಲೀಸರ ಮೇಲೆ ಚಪ್ಪಲಿ-ಕಲ್ಲು ತೂರಾಟ; ಪಂಚಮಸಾಲಿ ಹೋರಾಟದಿಂದ ಕುಂದಾನಗರಿ ಧಗ-ಧಗ

ನ್ಯೂಸ್ ಆ್ಯರೋ: ಪಂಚಮಸಾಲಿಗೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆಯುತ್ತಿದ್ದ ಹೋರಾಟ ಹಿಂಸಾರೂಪ ಪಡೆದಿದೆ. ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿದ್ದ ಹೋರಾಟದ ಇದೀಗ ಹಿಂಸಾರೂಪ ಪಡೆದಿದೆ.
ಪ್ರತಿಭಟನೆ ವೇಳೆ ಉದ್ರಿಕ್ತರು ಪೊಲೀಸರ ಮೇಲೆ ಚಪ್ಪಲಿ, ಕಲ್ಲುಗಳನ್ನು ತೂರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಉದ್ರಿಕ್ತರು ಪೊಲೀಸರ ಮೇಲೆ ಚಪ್ಪಲಿ, ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ನಿಷೇಧದ ನಡುವೆಯೂ ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಸುವರ್ಣಸೌಧ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಚಪ್ಪಲಿ, ಕಲ್ಲು ತೂರಾಟ ನಡೆದಿದೆ. ಆಗ ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಇನ್ನು ಈ ವೇಳೆ ಹೋರಾಟ ವಿಕೋಪಕ್ಕೆ ತಿರುಗಿದೆ. ಬಸವ ಜಯ ಮೃತ್ಯುಂಜಯ ಸ್ವಾಮೀಜಿಗೆ ಬೆಂಬಲ ಘೋಷಿಸಿ, ಹೋರಾಟದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದ್ರು.
ಪ್ರತಿಭಟನಾ ಸಮಾವೇಶ ಬಳಿಕ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧ ಮುತ್ತಿಗೆಗೆ ಪ್ಲ್ಯಾನ್ ಮಾಡಲಾಗಿತ್ತು. ಟ್ರ್ಯಾಕ್ಟರ್ ಮೂಲಕ ಕೊಂಡಸಕೊಪ್ಪಗೆ ಆಗಮಿಸುತ್ತಿದ್ದ ಸಮಾಜದ ಮುಖಂಡರನ್ನು ವಶಕ್ಕೆ ಪಡೆದ್ರು. ಟ್ರ್ಯಾಕ್ಟರ್ಗಳನ್ನು ಸೀಜ್ ಮಾಡಿ, ಸಮಾಜದ ಮುಖಂಡರು ಪೊಲೀಸರ ವಶಕ್ಕೆ ಪಡೆದರು.
ಹಲವು ದಿನಗಳಿಂದ ಶಾಂತಿಯುತವಾಗಿ ಪ್ರತಿಭಟನೆ ನಡೆಯುತ್ತಿದ್ದ ಪಂಚಮಸಾಲಿ ಮೀಸಲಾತಿ ಹೋರಾಟ, ಇಂದು ಹಿಂಸಾರೂಪ ಪಡೆದುಕೊಂಡಿದೆ. ಸುವರ್ಣಸೌಧ ಮುತ್ತಿಗೆ ಹಾಕಲು ಆಗಮಿಸುತ್ತಿದ್ದ ಪಂಚಮಸಾಲಿ ಹೋರಾಟಗಾರರನ್ನು ಪೋಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ-ನೂಕಾಟ ನಡೆದಿದೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಗುಂಪು ಪೊಲೀಸರ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ ನಡೆಸಿದೆ. ಇದರಿಂದ ಪೊಲೀಸರು ಕೂಡ ಉದ್ರಿಕ್ತರ ಗುಂಪನ್ನು ಚದುರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ.
Leave a Comment