ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಕೇಸ್; ಪುದುಚೇರಿಯಲ್ಲಿ ಶಿಲ್ಪಿಯ ಬಂಧನ

sculptor arrested
Spread the love

ನ್ಯೂಸ್ ಆ್ಯರೋ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಚಿನ ಮೂರ್ತಿ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್​ನನ್ನು (45) ಕಾರ್ಕಳ ಪೊಲೀಸರು ಪುದುಚೇರಿಯ ಮಾಹೆಯಲ್ಲಿ ಬಂಧಿಸಿದ್ದಾರೆ.

ಶಿಲ್ಪಿ ಕೃಷ್ಣ ನಾಯಕ್ ನಕಲಿ ಮೂರ್ತಿ ನಿರ್ಮಿಸಿದ್ದಾರೆಂದು ನಲ್ಲೂರಿನ ಕೃಷ್ಣ ಶೆಟ್ಟಿ ಎಂಬುವುರು ದೂರು ನೀಡಿದ್ದರು. ಕೃಷ್ಣಶೆಟ್ಟಿ ಅವರ ದೂರು ಆಧರಿಸಿ ಶಿಲ್ಪಿ ಕೃಷ್ಣ ನಾಯಕ್​ ಅವರನ್ನು​ ಪೊಲೀಸರು ಬಂಧಿಸಿದ್ದಾರೆ.

ಕೃಷ್ಣ ನಾಯಕ್ ಉಡುಪಿ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಉಡುಪಿ ನ್ಯಾಯಾಲಯ ಕೃಷ್ಣ ನಾಯಕ್ ಅವರ ಜಾಮೀನು ತಿರಸ್ಕರಿಸಿತ್ತು. ಜಾಮೀನು ತಿರಸ್ಕಾರ ಬೆನ್ನಲ್ಲೇ ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಇದೀಗ, ಕಾರ್ಕಳ ಠಾಣೆ ಪೊಲೀಸರು ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಬಂಧಿಸಿದ್ದಾರೆ.

ಿನ್ನು ಪರಶುರಾಮ್ ಥೀಮ್ ಪಾರ್ಕ್​ನಲ್ಲಿ ನಕಲಿ ಪ್ರತಿಮೆಯನ್ನು ನಿರ್ಮಿಸಿದ್ದ ಆರೋಪ ಕೇಳಿ ಬಂದಿದೆ. ನಿರ್ಮಾಣದ ಗುಣಮಟ್ಟದ ಜೊತೆಗೆ ಧಾರ್ಮಿಕ ಭಾವನೆಗೆ ಅಪಚಾರ ಪ್ರಕರಣದ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಸಿಐಡಿ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟು ಮಾಡುವ ಮತ್ತು ಹಸ್ತಕ್ಷೇಪ ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!