ಅಮರನ್ ಚಿತ್ರದ ವಿರುದ್ಧ ಪ್ರತಿಭಟನೆ; ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ನ್ಯೂಸ್ ಆ್ಯರೋ: ಶಿವಕಾರ್ತಿಕೇಯನ್ ಮತ್ತು ಸಾಯಿ ಪಲ್ಲವಿ ಅಭಿನಯದ ಸಿನಿಮಾ “ಅಮರನ್”. ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧಾರಿತ, ರಾಜ್ ಕುಮಾರ್ ಪೆರಿಯಸ್ವಾಮಿ ನಿರ್ದೇಶನದ ಚಿತ್ರ ದೀಪಾವಳಿ ಉಡುಗೊರೆಯಾಗಿ ನವೆಂಬರ್ 16 ರಂದು ಬಿಡುಗಡೆಯಾಯಿತು. ತೆಲುಗು ಮತ್ತು ತಮಿಳಿನಲ್ಲಿ ಈ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ.
ಅಮರನ್ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂಬ್ ಸ್ಫೋಟಗೊಂಡ ಘಟನೆ ಕೋಲಾಹಲಕ್ಕೆ ಕಾರಣವಾಗಿತ್ತು. ಘಟನೆ ಕುರಿತು ಪೊಲೀಸರು ಈಗಾಗಲೇ ತನಿಖೆ ಆರಂಭಿಸಿದ್ದಾರೆ. ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಸಿನಿಮಾ ಯಶಸ್ವಿಯಾಗಿ ಓಡುತ್ತಿದೆ. ಅದರಲ್ಲೂ ತಮಿಳುನಾಡಿನ ಬಹುತೇಕ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣಿಸುತ್ತಿದೆ.
ಇನ್ನು ತಮಿಳುನಾಡಿನಾದ್ಯಂತ ಅಮರನ್ ಚಿತ್ರ ಪ್ರದರ್ಶನಗೊಳ್ಳುತ್ತಿರುವ ಥಿಯೇಟರ್‌ಗಳ ಮುಂದೆ ಎಸ್‌ಟಿಬಿಐ ಪಕ್ಷ ಪ್ರತಿಭಟನೆ ನಡೆಸಿತ್ತು. ಕಾಶ್ಮೀರದಲ್ಲಿ ಮುಸ್ಲಿಮರನ್ನು ಭಯೋತ್ಪಾದಕರಂತೆ ಚಿತ್ರಿಸಿದೆ ಎಂದು ವಿರೋಧ ವ್ಯಕ್ತವಾಗಿದೆ.
ಮೇಜರ್ ಮುಕುಂದ್ ವರದರಾಜನ್ ಅವರ ಜೀವನಾಧಾರಿತ ಚಿತ್ರವನ್ನು ರಾಜ್‌ಕುಮಾರ್ ಪೆರಿಯಸ್ವಾಮಿ ನಿರ್ದೇಶಿಸಿದ್ದಾರೆ. ತಮಿಳುನಾಡಿನ ತಿರುನೆಲ್ವೇಲಿಯ ಮೇಲಪಾಳ್ಯಂ ಪ್ರದೇಶದ ಥಿಯೇಟರ್‌ನಲ್ಲಿ ಅಮರನ್ ಚಿತ್ರವನ್ನು ಪ್ರದರ್ಶನಗೊಂಡಿದೆ. ಈ ಸಂದರ್ಭ ಶನಿವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ನೆಲ್ಲೈ ಥಿಯೇಟರ್ ಮೇಲೆ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಈ ಘಟನೆ ಭಾರೀ ಸಂಚಲನ ಮೂಡಿಸಿತ್ತು. ಇದಕ್ಕೆ ಸಂಬಂಧಿಸಿದ ಸಿಸಿ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇನ್ನು ಈ ಘಟನೆಯಿಂದ ಚಿತ್ರಮಂದಿರಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಥಿಯೇಟರ್ ಆಡಳಿತವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಪೊಲೀಸ್ ಇಲಾಖೆ ಶೋಧ ನಡೆಸುತ್ತಿದೆ.
Leave a Comment