Kasargod : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಮೂಲದ ಉಸ್ತಾದ್ ಬಂಧನ
ನ್ಯೂಸ್ ಆ್ಯರೋ : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಆರೋಪಿಯನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಎಂದು ಗುರುತಿಸಲಾಗಿದೆ.
ಆರೋಪಿ ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು, ಶನಿವಾರ ಮಧ್ಯಾಹ್ನ ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ ಎನ್ನಲಾಗಿದೆ.
ಈ ವೇಳೆ ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮಧ್ಯ ಪ್ರವೇಶಿಸಿ ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಅಬ್ದುಲ್ ಕರೀಂ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Leave a Comment