ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಫಲಾನುಭವಿಗಳಾಗಿದ್ದೀರಾ…? ಹಾಗಿದ್ದರೆ ಈ ಕೆಳಗಿನ ಎಲ್ಲಾ ಸೂಚನೆಗಳನ್ನು ಗಮನಿಸಿ…
ನ್ಯೂಸ್ ಆ್ಯರೋ : ಭಾರತ ಸರ್ಕಾರವು ದೇಶದ ಹಿಂದುಳಿದ ವರ್ಗಗಳಿಗಾಗಿ ಅನೇಕ ಯೋಜನೆಗಳನ್ನು ಕೈಗೊಂಡಿದೆ. ವಿಶೇಷವಾಗಿ ಈ ದೇಶದ ಬೆನ್ನೆಲುಬಾಗಿರುವ ರೈತರಿಗಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅನ್ನು ಜಾರಿಗೆ ತಂದಿದೆ.
ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದ ರೈತರಿಗೆ ನೆರವು ನೀಡುವ ಸಲುವಾಗಿ ಆರಂಭಿಸಲಾಗಿದೆ.
ಈ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ ನಾಲ್ಕು ತಿಂಗಳಿಗೊಮ್ಮೆ ₹ 2,000 ರೂಪಾಯಿ ಹಣವನ್ನು ಖಾತೆಗೆ ವರ್ಗಾಯಿಸಲಾಗುತ್ತದೆ. ಇವರಿಗೆ ಫಲಾನುಭವಿಗಳು 17ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ. ಇದೀಗ ಯೋಚನೆಯು ಕೆಲವೊಂದು ಬೆಳವಣಿಗೆಯನ್ನ ಪಡೆದುಕೊಂಡಿದೆ. ಅಂದರೆ ಕೆಲವು ಖಾತೆಗಳಿಗೆ ಹಣ ವರ್ಗಾವಣೆಯಾಗದೇ ಇರುವುದರ ಬಗ್ಗೆ ಇಲ್ಲಿದೆ ಮಾಹಿತಿ.
ಅರ್ಜಿದಾರರು ಅಪ್ಲಿಕೇಶನ್‌ನಲ್ಲಿ ನೀಡಲಾದ ಎಲ್ಲಾ ಮಾಹಿತಿಯು ನಿಖರವಾಗಿದೆ ಎಂದು ಪರಿಶೀಲಿಸಬೇಕು. ಹೆಸರು ನೋಂದಾವಣೆಯಲಿ ತಪ್ಪಾಗಿದ್ದರೆ ಅಥವಾ ತಪ್ಪು ಆಧಾರ್ ಸಂಖ್ಯೆ ಮತ್ತು ತಪ್ಪಾದ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ್ದಲ್ಲಿ ಈ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಿಂದ ನಿಮ್ಮ ಹೆಸರನ್ನು ತೆಗೆದುಹಾಕಬಹುದು.
ಇದರ ಜೊತೆಗೆ ಈ ಯೋಜನೆಯ ಫಲಾನುಭವಿಗಳು ಸರ್ಕಾರದ ಇ-ಕೆವೈಸಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ನೀವು ಈ ಹಣವನ್ನು ಪಡೆಯಲು ಸಾಧ್ಯವಿಲ್ಲ.
ಅದಲ್ಲದೆ ನಿಗದಿತ ಸಮಯದಲ್ಲಿ ನಿಮ್ಮ ಭೂಮಿಯ ಪರಿಶೀಲನೆ ಪೂರ್ಣಗೊಳ್ಳದಿದ್ದರೆ ಅಥವಾ ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದೆ ಇದ್ದರೆ ಇಂತಹ ಸಂದರ್ಭದಲ್ಲಿ ನಿಮ್ಮ ಖಾತೆಗೆ ಹಣ ವರ್ಗಾವಣೆ ಆಗುವುದಿಲ್ಲ. ಅದರ ಜೊತೆಗೆ ಸುಳ್ಳು ದಾಖಲೆಗಳನ್ನು ನೀಡಿ ನೀವು ಈ ಯೋಜನೆಯ ಫಲಾನುಭವಿಗಳಾಗಿದ್ದರೆ, ಈ ವಿಚಾರವು ಪರಿಶೀಲನೆ ವೇಳೆ ದೃಢಪಟ್ಟರೆ ನಿಮ್ಮ ಅರ್ಜಿಯನ್ನು ರದ್ದುಗೊಳಿಸಲಾಗುತ್ತದೆ.
ಈ ಎಲ್ಲಾ ಅರ್ಹತಮಾನದಂಡಗಳನ್ನು ಪೂರೈಸಿದರೆ ಮಾತ್ರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪರಿಪೂರ್ಣ ಲಾಭವನ್ನು ಪಡೆದುಕೊಳ್ಳಲು ಅರ್ಹರಾಗುತ್ತೀರಿ.
Leave a Comment