Narendra Modi : 11ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ – ವಿಷನ್ 2047 ಬಗ್ಗೆ ಮೋದಿ ಹೇಳಿದ್ದೇನು? ಭಾಷಣದ ವಿಷಯಗಳೇನು?

20240815 091122
Spread the love

ನ್ಯೂಸ್ ಆ್ಯರೋ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ನಮನ ಸಲ್ಲಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು.

ಧ್ವಜಾರೋಹಣ ನೆರವೇರಿಸಿ ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು. ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ ವಿಷನ್ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಇಂದು ನಾವು 140 ಕೋಟಿ ಜನರಿದ್ದೇವೆ, ನಾವು ಸಂಕಲ್ಪ ಮಾಡಿ ಒಂದು ದಿಕ್ಕಿನಲ್ಲಿ ಒಟ್ಟಾಗಿ ಸಾಗಿದರೆ, 2047 ರ ವೇಳೆಗೆ ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ‘ವಿಕಸಿತ ಭಾರತ್’ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದರು.

ಮೋದಿ ಭಾಷಣದ ಹೈಲೈಟ್ಸ್ ಹೀಗಿದೆ…
ಹೊಸ ಕ್ರಿಮಿನಲ್ ಕಾನೂನು, ಭಾರತೀಯ ನ್ಯಾಯ ಸಂಹಿತಾ 2023, ಕಾನೂನು ವ್ಯವಸ್ಥೆಯನ್ನು ಸುಧಾರಿಸಿದೆ. ನಾವು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ.
ಭಾರತವು ಯಾವುದೇ ವಿಳಂಬವಿಲ್ಲದೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಬೇಕು
2047 ರ ವೇಳೆಗೆ ಭಾರತವನ್ನು ಅಭಿವೃದ್ಧಿಪಡಿಸಲು ಜನರು ಅನೇಕ ಸಲಹೆಗಳನ್ನು ನೀಡಿದ್ದಾರೆ. ವಿಕ್ಷಿತ್ ಭಾರತ್‌ಗಾಗಿ ಆಡಳಿತ ಸುಧಾರಣೆಗಳು, ತ್ವರಿತ ನ್ಯಾಯ ವಿತರಣಾ ವ್ಯವಸ್ಥೆ, ಸಾಂಪ್ರದಾಯಿಕ ಔಷಧಗಳನ್ನು ಉತ್ತೇಜಿಸುವುದು ಸೇರಿ ಅನೇಕ ಸಲಹೆಗಳು ಜನರಿಂದ ಬಂದಿವೆ.
ಜಲ ಜೀವನ್ ಮಿಷನ್ 15 ಕೋಟಿ ಫಲಾನುಭವಿಗಳನ್ನು ತಲುಪಿದೆ.


ಸುಧಾರಣೆಗಳ ಕಡೆಗೆ ನಮ್ಮ ಸಮರ್ಪಣೆ ಕೇವಲ ಕಾಗದಗಳಿಗೆ ಸೀಮಿತವಾಗಿಲ್ಲ, ನಾವು ಅದನ್ನು ಸಾಕಾರ ಮಾಡಿ ತೋರಿಸಿದ್ದೇವೆ.
ವೋಕಲ್‌ ಫಾರ್‌ ಲೋಕಲ್‌(ಸ್ಥಳೀಯರಿಗಾಗಿ ಧ್ವನಿ) ಎಂಬ ಪರಿಕಲ್ಪನೆ ಆರ್ಥಿಕ ವ್ಯವಸ್ಥೆಗೆ ಹೊಸ ಮಂತ್ರವಾಗಿದೆ
ಇತ್ತೀಚಿನ ದಿನಗಳಲ್ಲಿ ಅನಿಯಮಿತ ಉದ್ಯೋಗಾವಕಾಶಗಳಿವೆ. ಇದು ನಮ್ಮ ಸುವರ್ಣ ಯುಗ
ಸಶಸ್ತ್ರ ಪಡೆಗಳು ಸರ್ಜಿಕಲ್ ಮತ್ತು ವೈಮಾನಿಕ ದಾಳಿಗಳನ್ನು ನಡೆಸಿದಾಗ, ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಟ್ಟಿದ್ದಾನೆ.
ಬಾಹ್ಯಾಕಾಶ ಕ್ಷೇತ್ರವು ಅಸಂಖ್ಯಾತ ಸುಧಾರಣೆಗಳನ್ನು ಕಂಡಿದೆ.
ಕಳೆದ 10 ವರ್ಷಗಳಲ್ಲಿ 10 ಕೋಟಿ ಮಹಿಳೆಯರು ಮಹಿಳಾ ಸ್ವಸಹಾಯ ಸಂಘಗಳಿಗೆ ಸೇರ್ಪಡೆಯಾಗಿದ್ದಾರೆ. 10 ಕೋಟಿ ಮಹಿಳೆಯರು ಆರ್ಥಿಕವಾಗಿ ಸ್ವತಂತ್ರರಾಗುತ್ತಿದ್ದಾರೆ.

ಬಡವರು, ಮಧ್ಯಮ ವರ್ಗದವರು, ವಂಚಿತರು… ನಮ್ಮ ಯುವಕರ ಆಕಾಂಕ್ಷೆಗಳಿಗಾಗಿ, ಅವರ ಜೀವನದಲ್ಲಿ ಸುಧಾರಣೆಗಳನ್ನು ತರಲು ನಾವು ಸುಧಾರಣಾ ಮಾರ್ಗವನ್ನು ಕೈಗೆತ್ತಿಕೊಂಡಿದ್ದೇವೆ.

ಪ್ರವಾಸೋದ್ಯಮ, ಎಂಎಸ್‌ಎಂಇ, ಶಿಕ್ಷಣ, ಆರೋಗ್ಯ, ಸಾರಿಗೆ, ಕೃಷಿ ಅಥವಾ ಇತರ ಯಾವುದೇ ಕ್ಷೇತ್ರವಾಗಿರಲಿ, ಎಲ್ಲಾ ಕ್ಷೇತ್ರಗಳಲ್ಲಿ ಸುಧಾರಿತ ತಂತ್ರಜ್ಞಾನ ವ್ಯವಸ್ಥೆ ಇದೆ.

ಬಾಹ್ಯಾಕಾಶ ಕ್ಷೇತ್ರದಲ್ಲಿ ನೂರಾರು ಸ್ಟಾರ್ಟ್‌ಅಪ್‌ಗಳು ಬಂದಿವೆ. ‘ಖಾಸಗಿ ಉಪಗ್ರಹಗಳು ಮತ್ತು ರಾಕೆಟ್‌ಗಳನ್ನು ಉಡಾವಣೆ ಮಾಡಲಾಗುತ್ತಿದೆ
ಜಾಗತಿಕ ಸಂಸ್ಥೆಗಳಿಗೆ ಭಾರತದ ಮೇಲೆ ಅತೀವ ಭರವಸೆ ಇದೆ, ರಫ್ತು, ವಿದೇಶಿ ವಿನಿಮಯ ಪ್ರಮಾಣ ಹೆಚ್ಚಾಗಿದೆ.
ಮೆಡಿಕಲ್‌ ಸೀಟ್‌ಗಳ ಸಂಖ್ಯೆಯನ್ನು 1ಲಕ್ಷಕ್ಕೆ ಏರಿಕೆ ಮಾಡಲಾಗಿದೆ.
ರಕ್ಷಣೆ ವಿಚಾರದಲ್ಲಿ ಭಾರತ ಆತ್ಮ ನಿರ್ಭರವಾಗಿದೆ

Leave a Comment

Leave a Reply

Your email address will not be published. Required fields are marked *

error: Content is protected !!