ಪ್ರಯಾಗರಾಜ್​ನಲ್ಲಿ ಮಹಾಕುಂಭ ವೈಭವ; ಪ್ರಧಾನಿ ಮೋದಿ ಪವಿತ್ರ ಸ್ನಾನ ಯಾವಾಗ ?

Pm Modi
Spread the love

ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗ್​ರಾಜ್​​ನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ನಡೆಯುತ್ತಿದೆ. ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮಕ್ಕೆ ದೇಶ, ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಮಹಾಕುಂಭದ ಪವಿತ್ರ ಸ್ನಾನಕ್ಕೆ ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಮೋದಿ ಅವರು ಫೆಬ್ರವರಿ 5 ರಂದು ಪ್ರಯಾಗರಾಜ್​ಗೆ ಭೇಟಿ ನೀಡಲಿದ್ದಾರೆ. ಪ್ರಮುಖ ಸರ್ಕಾರಿ ಯೋಜನೆಗಳನ್ನು ಪರಿಶೀಲಿಸುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಜನವರಿ 22 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಹಾಕುಂಭ ವಿಚಾರ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 27 ರಂದು ಮಹಾಕುಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್​ ತ್ರಿವೇಣಿ ಸಂಗಮಕ್ಕೆ ಬರಲಿದ್ದಾರೆ. ಫೆಬ್ರವರಿ 10 ರಂದು ರಾಷ್ಟ್ರಪತಿಗಳು ಆಗಮಿಸುವ ನಿರೀಕ್ಷೆ ಇದೆ.

ವಿಐಪಿಗಳ ಭೇಟಿ ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ.

Leave a Comment

Leave a Reply

Your email address will not be published. Required fields are marked *