ಉದಯನಿಧಿ ವಿರುದ್ಧ ಯಾಕೆ ಸುಮೊಟೊ ಕೇಸ್ ಹಾಕಿಲ್ಲ? – ‘ಸಿಜೆಐ’ಗೆ ಪತ್ರ ಬರೆದ 262 ಗಣ್ಯ ವ್ಯಕ್ತಿಗಳು..!!

ಉದಯನಿಧಿ ವಿರುದ್ಧ ಯಾಕೆ ಸುಮೊಟೊ ಕೇಸ್ ಹಾಕಿಲ್ಲ? – ‘ಸಿಜೆಐ’ಗೆ ಪತ್ರ ಬರೆದ 262 ಗಣ್ಯ ವ್ಯಕ್ತಿಗಳು..!!

ನ್ಯೂಸ್‌ ಆ್ಯರೋ : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಯಾಕೆ ಸುಮೋಟೋ ಕೇಸ್ ದಾಖಲಿಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ 262 ಗಣ್ಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ.

ಸನಾತನ ಧರ್ಮ ಡೆಂಘೆ, ಮಲೇರಿಯಾ ಇದ್ದ ರೀತಿ. ಇದನ್ನು ವಿರೋಧಿಸುವುದು ಮಾತ್ರವಲ್ಲ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ಗೆ ಭಾರೀ ವಿರೋಧ ವ್ಯಕ್ತವಾಗಿದೆ.

ದ್ವೇಷ ಭಾಷಣ ಮಾಡಿದ ಎಂಕೆ ಸ್ಟ್ಯಾಲಿನ್‌ ಅವರ ಪುತ್ರ ಉದಯನಿಧಿ ಸ್ಟ್ಯಾಲಿನ್‌ ವಿರುದ್ಧ ಈವರೆಗೂ ಯಾಕೆ ಸುಮೋಟೋ ದ್ವೇಷ ಭಾಷಣದ ಕೇಸ್‌ ಯಾಕಾಗಿ ದಾಖಲು ಮಾಡಲಾಗಿಲ್ಲ ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್‌ ಅವರಿಗೆ ದೇಶದ 262 ಗಣ್ಯ ವ್ಯಕ್ತಿಗಳು ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲಿಯೇ ಸ್ಟ್ಯಾಲಿನ್‌ ತಾನು ನೀಡಿರುವ ಹೇಳಿಕೆಯ ಬಗ್ಗೆ ಕ್ಷಮೆ ಕೇಳುವ ಮಾತೇ ಇಲ್ಲ ಎಂದಿದ್ದಾರೆ.

ನ್ಯಾಯಮೂರ್ತಿ ಎಸ್‌ಎನ್ ಧಿಂಗ್ರಾ ಮತ್ತು ನಿವೃತ್ತ ಐಎಎಸ್ ಗೋಪಾಲ್ ಕೃಷ್ಣ ಸೇರಿದಂತೆ 262 ಗಣ್ಯ ವ್ಯಕ್ತಿಗಳು ಸಹಿ ಮಾಡಿದ್ದು ಇದರಲ್ಲಿ 14 ನ್ಯಾಯಾಧೀಶರು, 130 ನಿವೃತ್ತ ಐಎಎಸ್‌ ಅಧಿಕಾರಿಗಳು, 20 ರಾಯಭಾರಿಗಳು, 118 ನಿವೃತ್ತ ಸಶಸ್ತ್ರ ಪಡೆ ಅಧಿಕಾರಿಗಳು ಇದ್ದಾರೆ. ದ್ವೇಷದ ಭಾಷಣದ ಸುಮೋಟೋ ಅರಿಯಲು ಸಿಜೆಐಗೆ ಮನವಿ ಮಾಡಿದ್ದಾರೆ.

ಭಾನುವಾರ ತಮಿಳುನಾಡಿನ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದು ರಾಷ್ಟ್ರ ರಾಜಕಾರಣದಲ್ಲೂ ಸದ್ದು ಮಾಡಿದೆ.

ಈ ಕುರಿತಾಗಿ ದೇಶದ 262 ಗಣ್ಯ ವ್ಯಕ್ತಿಗಳು ಸಿಜೆಐಗೆ ಪತ್ರ ಬರೆದಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ, ಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದು, “ಉದಯನಿಧಿ ಸ್ಟಾಲಿನ್ ಅವರು ಕೋಮು ಸೌಹಾರ್ದತೆ ಮತ್ತು ಮತೀಯ ಹಿಂಸಾಚಾರವನ್ನು ಪ್ರಚೋದಿಸುವ ದ್ವೇಷದ ಭಾಷಣವನ್ನು ಸ್ವಯಂಪ್ರೇರಿತವಾಗಿ ಅರಿಯಬೇಕು” ಎಂದು ಒತ್ತಾಯ ಮಾಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *