ಅಲ್ಪಸಂಖ್ಯಾತ ನಿಗಮದಿಂದ ಹಿಂದೂಗಳಿಗೆ ಅನ್ಯಾಯ : ಸುಳ್ಳು ಸುದ್ದಿ ಪ್ರಸಾರ ಆರೋಪ – ಆಜ್ ತಕ್‌ ಸುದ್ದಿ ವಾಹಿನಿ ಸಂಪಾದಕನ ವಿರುದ್ಧ ಪ್ರಕರಣ ದಾಖಲು

ಅಲ್ಪಸಂಖ್ಯಾತ ನಿಗಮದಿಂದ ಹಿಂದೂಗಳಿಗೆ ಅನ್ಯಾಯ : ಸುಳ್ಳು ಸುದ್ದಿ ಪ್ರಸಾರ ಆರೋಪ – ಆಜ್ ತಕ್‌ ಸುದ್ದಿ ವಾಹಿನಿ ಸಂಪಾದಕನ ವಿರುದ್ಧ ಪ್ರಕರಣ ದಾಖಲು

ನ್ಯೂಸ್‌ ಆ್ಯರೋ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದಡಿಯಲ್ಲಿ ಆಜ್‌ ತಕ್‌ ರಾಷ್ಟ್ರೀಯ ಸುದ್ದಿ ವಾಹಿನಿಯ ಮುಖ್ಯ ಸಂಪಾದಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಾಹಿನಿ ಪ್ರಧಾನ ಸಂಪಾದಕ ಸುದೀರ್ ಚೌಧರಿ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇವರ ವಿರುದ್ಧ ನಿಗಮದ ಸಹಾಯಕ ಆಡಳಿತಾಧಿಕಾರಿ ಶಿವಕುಮಾರ್ ಅವರು ದೂರು ನೀಡಿದ್ದರು.

ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಬದುಕಿಗೆ ಆಟೊ, ಟ್ಯಾಕ್ಸಿ ಖರೀದಿಗೆ ಗರಿಷ್ಠ ₹ 3 ಲಕ್ಷದವರೆಗೆ ಸಬ್ಸಿಡಿ ನೀಡುವ ಯೋಜನೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ಆದಿ ಜಂಬಾವ ಅಭಿವೃದ್ಧಿ ನಿಗಮದಲ್ಲೂ ಇದೆ. ಅಲ್ಪಸಂಖ್ಯಾತ ಸಮುದಾಯ ಅಷ್ಟೇ ಅಲ್ಲದೆ ಹಿಂದುಳಿದ, ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸೇರಿ ಹಿಂದೂ ಸಮುದಾಯದ ನಿರುದ್ಯೋಗಿ ಯುವಕರಿಗೂ ಅನುಷ್ಠಾನದಲ್ಲಿದೆ.

ವಾಹಿನಿಯಲ್ಲಿ ಇದನ್ನು ತಿರುಚಿ ಈ ಯೋಜನೆ ಕೇವಲ ಮುಸ್ಲಿಂ ಸಮುದಾಯಕ್ಕಷ್ಟೇ ಜಾರಿಯಲ್ಲಿದೆ. ಹಿಂದೂಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಸೆ.11ರಂದು ವರದಿ ಪ್ರಸಾರ ಮಾಡಲಾಗಿದೆ. ಇನ್ನೂ ದೂರಿನಲ್ಲಿ ಸಮಾಜದಲ್ಲಿ ಕೋಮು ಭಾವನೆ ಮೂಡಿಸುವ ಉದ್ದೇಶದಿಂದ ಈ ರೀತಿ ವರದಿ ಮಾಡಲಾಗಿದೆ ಎಂದು ಹೇಳಲಾಗಿದೆ.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *