ಗೃಹ ಸಚಿವ ಪರಮೇಶ್ವರ್ ಮಗ ತಮಾಷೆಗೆ ಲಿಂಗ ಪರಿವರ್ತಿಸಿದ್ದಿರಬಹುದು – ಶಾಸಕ ಯಶ್ ಪಾಲ್ ಸುವರ್ಣ ಹೀಗೆ ಹೇಳಿದ್ಯಾಕೆ?

ಗೃಹ ಸಚಿವ ಪರಮೇಶ್ವರ್ ಮಗ ತಮಾಷೆಗೆ ಲಿಂಗ ಪರಿವರ್ತಿಸಿದ್ದಿರಬಹುದು – ಶಾಸಕ ಯಶ್ ಪಾಲ್ ಸುವರ್ಣ ಹೀಗೆ ಹೇಳಿದ್ಯಾಕೆ?

ನ್ಯೂಸ್ ಆ್ಯರೋ‌ : ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಿರುವ ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಉಡುಪಿಯಲ್ಲಿ ಬಿಜೆಪಿ ಕರೆದಿದ್ದ ಬೃಹತ್ ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ದ ಆಡಿದ ಮಾತಿಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.

ಯಶ್ ಪಾಲ್ ಸುವರ್ಣ ಹೇಳಿದ್ದೇನು?

ಗೃಹ ಸಚಿವರ ಮಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದು ತಮಾಷೆಗೆ ಆಗಿರಬಹುದು ಎಂದು ಯಶ್ ಪಾಲ್ ಸುವರ್ಣ ಹೇಳಿದ್ದಾರೆ. ವೀಡಿಯೋ ಪ್ರಕರಣ ತಮಾಷೆಯ ವಿಚಾರವಲ್ಲ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಯಶ್ ಪಾಲ್ ತನ್ನನ್ನು ಸಮರ್ಥಿಸಿಕೊಂಡು, ವೀಡಿಯೋ ಪ್ರಕರಣದ ಸಂತ್ರಸ್ತರ ನೋವು ಅರ್ಥವಾಗಲಿ ಎಂದು ಹೇಳಿದ್ದು, ಇದು ವೈಯಕ್ತಿಕ ನಿಂದನೆಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇನ್ನು ಈ ಕುರಿತು ಮಾತನಾಡಲು ಪರಮೇಶ್ವರ್ ನಿರಾಕರಿಸಿದ್ದಾರೆ. ಅವರು ಏನೂ ಬೇಕಾದರೂ ಹೇಳಿಕೊಳ್ಳಲಿ, ಹೇಳಿಕೆ ಬಗ್ಗೆ ನಾನ್ಯಾಕೆ ಪ್ರತಿಕ್ರಿಯಿಸಬೇಕು ಎಂದು ಪ್ರಶ್ನಿಸಿದ್ದಾರೆ.

ವೀಡಿಯೋ ಪ್ರಕರಣದ ಬಗ್ಗೆ ಹಗುರವಾಗಿ ಮಾತನಾಡಿದ್ದ ಕೆಲವರು ಇದು ಕೇವಲ ತಮಾಷೆಗೆ ಮಾಡಿದ್ದು ಎಂದು ಸಮರ್ಥಿಸಿ ಘಟನೆ ಬಗ್ಗೆ ಹಗುರವಾಗಿ ಮಾತನಾಡಿದ್ದರು.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *