ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು – ಜಿಲ್ಲಾಧಿಕಾರಿ, ಜಿ.ಪಂ.ಸಿಇಒ ಸಭೆಯಲ್ಲಿ ಸಿಎಂ ಗರಂ

ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು – ಜಿಲ್ಲಾಧಿಕಾರಿ, ಜಿ.ಪಂ.ಸಿಇಒ ಸಭೆಯಲ್ಲಿ ಸಿಎಂ ಗರಂ

ನ್ಯೂಸ್‌ ಆ್ಯರೋ : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು. ನಿಮ್ಮ ನಿರ್ಲಕ್ಷ್ಯ ಮತ್ತು ಉಡಾಫೆಯಿಂದ ಸರ್ಕಾರಕ್ಕೆ ಕೆಟ್ಟ ಹೆಸರು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಅಧಿಕಾರಿಗಳು ಹೃದಯವಂತಿಕೆಯಿಂದ ಕೆಲಸ ಮಾಡಬೇಕು. ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡಬಾರದು. ಕೇಂದ್ರ ಸ್ಥಾನದಲ್ಲಿಯೇ ವಾಸವಿರಬೇಕು. ಜನರ ಸೇವೆಗೆ ಲಭ್ಯವಿರಬೇಕು. ಒಂದೋ ಕಚೇರಿಯಲ್ಲಿರಬೇಕು, ಇಲ್ಲವೇ ಪ್ರವಾಸದಲ್ಲಿರಬೇಕು. ಮನೆಯಿಂದ ಕೆಲಸ ಮಾಡುವುದಕ್ಕೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ. ಅಧಿಕಾರಿಗಳು ಹೃದಯವಂತಿಕೆಯಿಂದ ಕೆಲಸ ಮಾಡಬೇಕು ಎಂದರು.

ರೈತರ ಆತ್ಮಹತ್ಯೆ ಪ್ರಕರಣಗಳನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ಸೂಚನೆ

ರಾಜ್ಯದಲ್ಲಿ 251 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, 174 ಪ್ರಕರಣಗಳಷ್ಟೇ ಇತ್ಯರ್ಥವಾಗಿವೆ. ಉಳಿದ ಪ್ರಕರಣಗಳನ್ನು ಶೀಘ್ರವೇ ವಿಲೇವಾರಿ ಮಾಡಿ ಪರಿಹಾರ ವಿತರಿಸಬೇಕು. ಇದರಲ್ಲಿ ತಡ ಮಾಡುವುದು ಸರಿಯಲ್ಲ ಎಂದು ಹೇಳಿದರು.

ವೈದ್ಯರು ಕೇಂದ್ರ ಸ್ಥಾನದಲ್ಲಿಯೇ ಇದ್ದು ಜನರ ಕಷ್ಟಗಳಿಗೆ ಸ್ಪಂದಿಸಬೇಕು: ಆಸ್ಪತ್ರೆಗಳಲ್ಲಿ ವೈದ್ಯರು ಲಭ್ಯವಿರುವುದಿಲ್ಲ. ಅರೆ ವೈದ್ಯಕೀಯ ಸಿಬ್ಬಂದಿಯೇ ವೈದ್ಯರ ಪಾತ್ರ ನಿರ್ವಹಿಸುವುದು, ಔಷಧದ ಪ್ರಿಸ್ಕ್ರಿಪ್ಷನ್‌ ಬರೆಯುವುದು ಸರಿಯಲ್ಲ. ವೈದ್ಯರು ತಮ್ಮ ಕೇಂದ್ರ ಸ್ಥಾನದಲ್ಲಿಯೇ ಇದ್ದುಕೊಂಡು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದರು.

ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ:

ಇನ್ನೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರು ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವಿಸಿ ಹಲವರು ಮೃತಪಟ್ಟಿದ್ದಾರೆ. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅದಲ್ಲದೆ ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗ ತಡೆಗಟ್ಟುವ ಸೂಕ್ತ ಕ್ರಮ ಕೈಗೊಳ್ಳಲು ಹೇಳಿದರು.

ಗಣೇಶ ಹಬ್ಬದಲ್ಲಿ ಯಾವುದೇ ಧರ್ಮಕ್ಕೆ ತೊಂದರೆಯಾಗಬಾರದು: ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚನೆ

ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಈ ಸಂದರ್ಭದಲ್ಲಿ ಯಾರಿಗೂ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಪರಿಸರಕ್ಕೆ ಹಾನಿಯಾಗದಂತೆ ಹಬ್ಬವನ್ನು ಆಚರಿಸಲು ಕ್ರಮ ತೆಗೆದುಕೊಳ್ಳಬೇಕು ಮತ್ತು ಯಾವುದೇ ಧರ್ಮದವರಿಗೆ ತೊಂದರೆ ಆಗಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.

Related post

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ – ಇಲ್ಲಿದೆ ಸಂಪೂರ್ಣ ಮಾಹಿತಿ

ಕೆಪಿಎಸ್‌ಸಿ ನೇಮಕಾತಿ: 230 ಗ್ರೂಪ್​ ಸಿ ಹುದ್ದೆಗೆ ಅರ್ಜಿ ಆಹ್ವಾನ –…

ನ್ಯೂಸ್‌ ಆ್ಯರೋ : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್​ ಸಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ…
ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್…

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ…

Leave a Reply

Your email address will not be published. Required fields are marked *