ಕೋಮು ಪ್ರಚೋದನಾಕಾರಿ ಹೇಳಿಕೆ – ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

ಕೋಮು ಪ್ರಚೋದನಾಕಾರಿ ಹೇಳಿಕೆ – ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲು

ನ್ಯೂಸ್ ಆ್ಯರೋ : ಕೋಮು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿರುವ ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಟಿ.ಎಸ್. ಶ್ರೀವತ್ಸವ ವಿರುದ್ಧ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಯು ಮೈಸೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, “ಮಹಿಷ ದಸರಾ ಆಚರಣೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಮಹಿಷ ದಸರಾ ನಡೆಸಲು ಮುಂದಾದರೆ ಸಂಘರ್ಷ ನಡೆಸಲು ಸಿದ್ದರಿರಬೆಕು” ಎಂದು ಬೆದರಿಕೆ ಮಾತುಗಳನ್ನಾಡಿದ್ದರು.

”ಮಹಿಷ ದಸರಾ ಆಚರಣೆಯನ್ನು ತಡೆಯಲು ಈಗಾಗಲೇ ರೂಪುರೇಷೆ ತಯಾರು ಮಾಡಿರುತ್ತೇವೆ. ಯಾವ ರೀತಿಯಲ್ಲಿ ಮಹಿಷ ದಸರಾ ಮಾಡುತ್ತಾರೊ ನೋಡೋಣ” ಎಂದು ಕೃಷ್ಣ ರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಅವರೂ ಹೇಳಿದ್ದಾರೆ.

ಅವರಿಬ್ಬರ ಹೇಳಿಕೆಯು ಪ್ರಚೋದನಾಕಾರಿಯಾಗಿವೆ ಮತ್ತು ಒಂದು ಸಮುದಾಯದ ವಿರುದ್ಧ ದ್ವೇಷ ಬಿತ್ತುವಂತಿವೆ ಎಂದು ಸಂಘಟನೆ ಆರೋಪಿಸಿದ್ದು, ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

Related post

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…

Leave a Reply

Your email address will not be published. Required fields are marked *