ಸಿಎಂ ಸಿದ್ದರಾಮಯ್ಯರ ಪತ್ನಿ ಹಾಗೂ ಸೊಸೆ ಬಗ್ಗೆ ಅವಹೇಳನಕಾರಿ ಟ್ವೀಟ್ – ರಾಜ್ಯ ಬಿಜೆಪಿ ನಾಯಕಿ ಶಕುಂತಲಾ ಅರೆಸ್ಟ್..!

ಸಿಎಂ ಸಿದ್ದರಾಮಯ್ಯರ ಪತ್ನಿ ಹಾಗೂ ಸೊಸೆ ಬಗ್ಗೆ ಅವಹೇಳನಕಾರಿ ಟ್ವೀಟ್ – ರಾಜ್ಯ ಬಿಜೆಪಿ ನಾಯಕಿ ಶಕುಂತಲಾ ಅರೆಸ್ಟ್..!

ನ್ಯೂಸ್ ಆ್ಯರೋ : ಉಡುಪಿಯ ಖಾಸಗಿ ಕಾಲೇಜಿನ ಮುಸಲ್ಮಾನ್ ವಿದ್ಯಾರ್ಥಿನಿಯರು, ಹಿಂದೂ ವಿದ್ಯಾರ್ಥಿನಿಯರು ಬಳಸುವ ಶೌಚಾಲಯದಲ್ಲಿ ವಿಡಿಯೋ ಕ್ಯಾಮೆರಾ ಇರಿಸಿದ್ದರು ಎಂಬ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇದೀಗ ಇದೇ ವಿಚಾರವಾಗಿ ರಾಜ್ಯ ಬಿಜೆಪಿ ನಾಯಕಿ ಶಕುಂತಲಾ ಅವರು ಸಿಎಂ ಸಿದ್ದರಾಮಯ್ಯ ಅವರ ಪತ್ನಿ‌ ಹಾಗೂ ಸೊಸೆಯ ಬಗ್ಗೆ ಅವಹೇಳನಕಾರಿ ಟ್ವೀಟ್ ಮಾಡಿದ್ದು ಪೊಲೀಸರು ಅವರನ್ನು ಬಂಧಿಸಿದ್ದಾರೆ. ಅಷ್ಟಕ್ಕೂ ಶಕುಂತಲಾ ಮಾಡಿದ ಟ್ವೀಟ್ ಏನು? ಇಲ್ಲಿದೆ ವರದಿ.

ಕಾಂಗ್ರೆಸ್ ಟ್ವೀಟ್ ನಲ್ಲಿ ಏನಿತ್ತು?

ಉಡುಪಿಯ ಖಾಸಗಿ ಕಾಲೇಜಿ ನಲ್ಲಿ ನಡೆದ ವಿಡಿಯೋ ಚಿತ್ರೀಕರಣ ವಿವಾದಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಜುಲೈ 25 ರಂದು, ‘ ಉಡುಪಿಯ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಎಂದು ನಕಲಿ ಸುದ್ದಿ ಸೃಷ್ಟಿಸಿ ಕೋಮು ಪ್ರಚೋದನೆಗೆ ಮುಂದಾಗಿರುವ ಬಿಜೆಪಿ, ತೀರ್ಥಹಳ್ಳಿಯಲ್ಲಿ ಹಿಂದೂ ವಿದ್ಯಾರ್ಥಿನಿಯರ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಎಬಿವಿಪಿ ಅಧ್ಯಕ್ಷನ ಅಸಲಿ ಸುದ್ದಿಯ ಬಗ್ಗೆ ಮೌನ ಮುರಿಯುವುದು ಯಾವಾಗ?

ವಿದ್ಯಾರ್ಥಿನಿಯರ ಮಕ್ಕಳಾಟವನ್ನು ರಾಜಕೀಯ ಕಳ್ಳಾಟಕ್ಕೆ ಬಳಸಿಕೊಳ್ಳಲು ಅಪ್ಪು, ಖಾಸ, ಮಸಾಲೆಗಳನ್ನು ಬೆರಸಿ ಚಪ್ಪರಿಸಲು ಹೊರಟಿದ್ದ ಬಿಜೆಪಿ ಕರ್ನಾಟಕಕ್ಕೆ ದಕ್ಷ ಪೊಲೀಸರು ತಡ ಮಾಡದೇ ತನಿಖೆ ಮಾಡಿ ಸತ್ಯಾಂಶವನ್ನು ಬಯಲಿಗೆಳೆದು ನಿರಾಸೆ ಮೂಡಿಸಿದ್ದಾರೆ’ ಎಂದು ಟ್ವೀಟ್ ಮಾಡಿತ್ತು.

ಶಕುಂತಲಾ ಮಾಡಿದ ಟ್ವೀಟ್ ಏನು?

ಕಾಂಗ್ರೆಸ್ ಮಾಡಿದ ಟ್ವೀಟ್​ನ ಸ್ಕ್ರೀನ್​ ಶಾಟ್​​ ತೆಗೆದು ಟ್ವೀಟ್ ಮಾಡಿದ್ದ ಶಕುಂತಲಾ, ‘ಮುಸ್ಲಿಂ ಯುವತಿಯರು ಟಾಯ್ಲೆಟ್​ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್​ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಎಂದು ಒಪ್ಕೋತೀರಾ? ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ವಿರುದ್ಧ ದೂರು ದಾಖಲಿಸಿಕೊಂಡ ಹೈಗ್ರೌಂಡ್ಸ್ ಠಾಣೆ ಪೊಲೀಸರು ಶಕುಂತಲಾ ಅವರನ್ನು ಅರೆಸ್ಟ್ ಮಾಡಿದ್ದಾರೆ.

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *