ಸುಪ್ರೀ ಕೋರ್ಟ್ ಚಾಟಿಗೆ ಬೆದರಿದ SBI – ಚುನಾವಣಾ ಬಾಂಡ್ ಗಳ ಡಾಟಾ ಸಲ್ಲಿಕೆ : ಆಯೋಗದ ಮುಂದೆ ಪಕ್ಷಗಳ ಜಾತಕ ಬಯಲು

ಸುಪ್ರೀ ಕೋರ್ಟ್ ಚಾಟಿಗೆ ಬೆದರಿದ SBI – ಚುನಾವಣಾ ಬಾಂಡ್ ಗಳ ಡಾಟಾ ಸಲ್ಲಿಕೆ : ಆಯೋಗದ ಮುಂದೆ ಪಕ್ಷಗಳ ಜಾತಕ ಬಯಲು

ನ್ಯೂಸ್ ಆ್ಯರೋ : ಭಾರತದಲ್ಲಿನ ರಾಜಕೀಯ ಪಕ್ಷಗಳು ಕಳೆದ 2019ರ ಏಪ್ರಿಲ್‌ 12ರಿಂದ ಇಲ್ಲಿಯವರೆಗೆ ಚುನಾವಣಾ ಬಾಂಡ್‌ಗಳನ್ನು ನಗದು ಮಾಡಿಕೊಂಡಿರುವ ಸಂಪೂರ್ಣ ಮಾಹಿತಿಯನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮಂಗಳವಾರ ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

ಮಂಗಳವಾರ ಸಂಜೆ 5:30ರ ವೇಳೆಗೆ ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಇಸಿಐಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಸ್‌ಬಿಐಗೆ ನಿರ್ದೇಶಿಸಿದ್ದು ಅದನ್ನು ಅನುಪಾಲನೆ ಮಾಡಲಾಗಿದೆ. ಎಲ್ಲವನ್ನೂ ಹೊಂದಿಸಿ ಅದನ್ನು ಮಾರ್ಚ್‌ 15ರ ಒಳಗೆ ವೆಬ್‌ಸೈಟ್‌ನಲ್ಲಿ ಪ್ರಕಟಿಸುವಂತೆ ಇಸಿಐಗೆ ನ್ಯಾಯಾಲಯ ಸೂಚಿಸಿದೆ.

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಕಳುಹಿಸಿರುವ ದತ್ತಾಂಶವು ಕಚ್ಚಾ ರೂಪದಲ್ಲಿದ್ದು, ಇಸಿಐ ವೆಬ್‌ಸೈಟ್‌ಗೆ ಮಾರ್ಚ್‌ 15ರೊಳಗೆ ಸಿದ್ಧಪಡಿಸಿ ಅಪ್‌ಲೋಡ್‌ ಮಾಡುವುದು ಸವಾಲಿನಿಂದ ಕೂಡಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಮಾಹಿತಿಯನ್ನು ಇಸಿಐಗೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿ ಎಸ್‌ಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾ ಮಾಡಿತ್ತು.

ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಫೆಬ್ರವರಿ 15ರಂದು ಚುನಾವಣಾ ಬಾಂಡ್‌ ಯೋಜನೆಯನ್ನು ವಜಾ ಮಾಡಿದ್ದಲ್ಲದೇ 2019ರ ಏಪ್ರಿಲ್‌ 12ರಿಂದ ಇಲ್ಲಿಯವರೆಗೆ ರಾಜಕೀಯ ಪಕ್ಷಗಳು ಸ್ವೀಕರಿಸಿರುವ ದೇಣಿಗೆಯ ಮಾಹಿತಿಯನ್ನು ಇಸಿಐಗೆ ಸಲ್ಲಿಸುವಂತೆ ನಿರ್ದೇಶಿಸಿತ್ತು. ಅಲ್ಲದೇ, ರಾಜಕೀಯ ಪಕ್ಷಗಳು ಪ್ರತಿ ಚುನಾವಣಾ ಬಾಂಡ್‌ ಅನ್ನು ನಗದು ಮಾಡಿಕೊಂಡಿರುವ ವಿವರವನ್ನು ಮಾರ್ಚ್‌ 6ರ ವೇಳೆಗೆ ಇಸಿಐಗೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

ಪ್ರತಿ ಚುನಾವಣಾ ಬಾಂಡ್‌ ಖರೀದಿಸಿರುವ ವಿವರ; ಅದನ್ನು ಖರೀದಿಸಿರುವವರು ಯಾರು; ಎಷ್ಟು ಮೊತ್ತದ ಚುನಾವಣಾ ಬಾಂಡ್‌; ಚುನಾವಣಾ ಬಾಂಡ್‌ ಅನ್ನು ರಾಜಕೀಯ ಪಕ್ಷಗಳು ಎಂದು ನಗದು ಮಾಡಿಕೊಂಡಿವೆ ಎಂಬ ಮಾಹಿತಿಯನ್ನು ಎಸ್‌ಬಿಐ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು. ಎಸ್‌ಬಿಐನಿಂದ ಮಾಹಿತಿ ಪಡೆದ ಒಂದು ವಾರದಲ್ಲಿ ಇಸಿಐ ತನ್ನ ವೆಬ್‌ಸೈಟ್‌ನಲ್ಲಿ ಅದನ್ನು ಪ್ರಕಟಿಸಬೇಕು ಎಂದು ಹೇಳಲಾಗಿತ್ತು.

ನಿನ್ನೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದಿದ್ದ ಅರ್ಜಿ ವಿಚಾರಣೆ ವೇಳೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎರಡೂ ಕಡೆಯ ಗೌಪ್ಯತೆಯನ್ನು ಕಾಪಾಡಿಕೊಳ್ಳಲು ಎರಡು ಸಿಲೋಸ್‌ಗಳಲ್ಲಿ ಸಂಗ್ರಹಿಸಲಾದ ಡೇಟಾವನ್ನು, ಕ್ರಾಸ್-ಚೆಕ್ ಮಾಡಿ ಬಿಡುಗಡೆ ಮಾಡಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಜೂ. 30ರವರೆಗೆ ಸಮಯ ಬೇಕು ಎಂದು ಬ್ಯಾಂಕ್ ಕೇಳಿತ್ತು.

ಈ ಡೇಟಾವನ್ನು ಬಿಡುಗಡೆ ಮಾಡಲು ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ಸುಪ್ರೀಂ ಕೋರ್ಟ್‌ ತೀರಸ್ಕರಿಸಿತ್ತು. ಜೊತೆಗೆ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಕ್ರಾಸ್‌ ಚೆಕ್‌ ಮಾಡುವಂತೆ ನಾವು ನಿಮಗೆ ಹೇಳಿರಲಿಲ್ಲ. ಸರಳವಾಗಿ ಬಹಿರಂಗಪಡಿಸಲು ನಾವು ಕೇಳಿದ್ದೇವೆ ಎಂದು ತರಾಟೆ ತೆಗೆದುಕೊಂಡಿದ್ದರು. ಜೊತೆಗೆ ಈ ನಿಮ್ಮ ನಡತೆ ಉದ್ದೇಶಪೂರ್ವಕ ಅಸಹಕಾರ ಎಂದು ನಾವ್ಯಾಕೆ ಪರಿಗಣಿಸಬಾರದು ಎಂದು ಎಸ್‌ಬಿಐಗೆ ಎಚ್ಚರಿಕೆ ನೀಡಿ 1 ದಿನದ ಗಡುವು ನೀಡಿತ್ತು. ಈ ಬೆನ್ನಲ್ಲೇ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಡೇಟಾವನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *