ಮತ್ತೊಂದು ವಿವಾದದಲ್ಲಿ ಸಿಲುಕಿದ ಶಕುಂತಲಾ ನಟರಾಜ್ – ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ, ಪೊಲೀಸರಿಂದ ಸ್ವಯಂಪ್ರೇರಿತ ಎಫ್‌ಐಆರ್

ಮತ್ತೊಂದು ವಿವಾದದಲ್ಲಿ ಸಿಲುಕಿದ ಶಕುಂತಲಾ ನಟರಾಜ್ – ರಾಷ್ಟ್ರಧ್ವಜಕ್ಕೆ ಅವಮಾನ ಆರೋಪ, ಪೊಲೀಸರಿಂದ ಸ್ವಯಂಪ್ರೇರಿತ ಎಫ್‌ಐಆರ್

ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ಅವರ ಕುಟುಂಬವನ್ನು ಅವಹೇಳನ ಮಾಡಿ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ಮಾಧ್ಯಮ ವಿಭಾಗದ ಶಕುಂತಲಾ ನಟರಾಜ್ ಅವರು ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ.

ಕೊಚ್ಚಿಯ ಲುಲು ಮಾಲ್‌ನಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಲಾಗಿದೆ ಎಂದು ಟ್ವಿಟರ್ ನಲ್ಲಿ ಫೇಕ್ ಪೊಸ್ಟ್ ಹಂಚಿಕೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರೇ ಸ್ವಯಂಪ್ರೇರಿತರಾಗಿ ಶಕುಂತಲಾ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಫೋಟೊ ಜೊತೆಗೆ ಪೋಸ್ಟ್ ಹಂಚಿಕೊಂಡಿದ್ದರು ಶಕುಂತಲಾ ನಟರಾಜ್‌. ಆದರೆ, ಇದೊಂದು ಸುಳ್ಳು ಸುದ್ದಿ ಎಂದು ಫ್ಯಾಕ್ಟ್‌ ಚೆಕ್‌ ವೇಳೆ ಬಯಲಾಗಿದೆ. ಹೀಗಾಗಿ ಪೊಲೀಸರು ಶಕುಂತಲಾ ನಟರಾಜ್‌ ಮೇಲೆ ಕೇಸು ದಾಖಲಿಸಿದ್ದಾರೆ.

ಶಕುಂತಲಾ ಹಂಚಿಕೊಂಡ ಪೋಸ್ಟ್‌ನಲ್ಲಿ ಏನಿದೆ?

ʻʻಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ನವರಿಗೆ.? @ಡಿ.ಕೆ. ಶಿವಕುಮಾರ್‌ #ಬಾಯ್ಕಾಟ್ ಲುಲುಮಾಲ್‌’ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.‌‌

ಮೊದಲನೆಯದಾಗಿ ಇದು ಫೇಕ್‌ ಫೋಟೊ ಆಗಿತ್ತು. ಅಲ್ಲಿ ವಿಶ್ವಕಪ್‌ ಕ್ರಿಕೆಟ್‌ ಹಿನ್ನೆಲೆಯಲ್ಲಿ ಪ್ರತಿನಿಧಿಸುವ ಎಲ್ಲ ತಂಡಗಳ ದೇಶಗಳ ಬಾವುಟವನ್ನು ಒಂದೇ ಗಾತ್ರದಲ್ಲಿ ಹಾಕಲಾಗಿತ್ತು. ಆದರೆ, ಅವುಗಳನ್ನು ಬೇರೆ ಬೇರೆ ಕೋನದಲ್ಲಿ ಫೋಟೊ ತೆಗೆದು ಭಾರತದ ಧ್ವಜ ಪಾಕಿಸ್ತಾನಕ್ಕಿಂತ ಸಣ್ಣದಾಗಿದೆ ಎಂಬಂತೆ ಬಿಂಬಿಸಲಾಗಿದೆ. ಇಲ್ಲವೇ ಉದ್ದೇಶಪೂರ್ವಕವಾಗಿ ಎಡಿಟ್‌ ಮಾಡಿ ಪ್ರಕಟಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹೀಗಾಗಿ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆಂಬ ಆರೋಪದಡಿ ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ವಿಚಾರಣೆಗೆ ಬರುವಂತೆ ಶಕುಂತಲಾ ಅವರಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಉಡುಪಿಯಲ್ಲಿ ನಡೆದ ವಿಡಿಯೋ ಚಿತ್ರೀಕರಣ ಸುದ್ದಿಯಲ್ಲಿದ್ದಾಗ ಶಕುಂತಲಾ ನಟರಾಜ್‌ ಅವರು ಸಿದ್ದರಾಮಯ್ಯ ಕುಟುಂಬವನ್ನು ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್‌ ಹಾಕಿದ್ದರು. ಈ ಪ್ರಕರಣದಲ್ಲಿ ಶಕುಂತಲಾ ನಟರಾಜ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದ್ದರು.

Related post

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮೂವರ ಬಂಧನ – ಸುಳ್ಯ ಮೂಲದ ಒಬ್ಬ, ಸೋಮವಾರಪೇಟೆಯ ಇಬ್ಬರು ‌ಎನ್ಐಎ ಬಲೆಗೆ..!!

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸೇರಿದಂತೆ ಮೂವರ ಬಂಧನ…

ನ್ಯೂಸ್ ಆ್ಯರೋ : ಬೆಳ್ಳಾರೆಯ ಬಿಜೆಪಿ ಯುವನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ತಂಡ ಮೂವರು ಆರೋಪಿಗಳನ್ನು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆಮಹಲ್‌…

Leave a Reply

Your email address will not be published. Required fields are marked *