ಆಲ್ಕೋಹಾಲ್ ಜೊತೆ ಹಾಲಿನ ಬೆಲೆಯೂ ಏರಿಸಿದ ಸರ್ಕಾರ – ಕಾಂಗ್ರೆಸಿಗರು ಜನರ ತಲೆ ಮೇಲೆ ಫ್ಲವರ್ ಪಾಟ್ ಇಡ್ತೀದಾರೆ ; HDK ಟಾಂಗ್

ಆಲ್ಕೋಹಾಲ್ ಜೊತೆ ಹಾಲಿನ ಬೆಲೆಯೂ ಏರಿಸಿದ ಸರ್ಕಾರ – ಕಾಂಗ್ರೆಸಿಗರು ಜನರ ತಲೆ ಮೇಲೆ ಫ್ಲವರ್ ಪಾಟ್ ಇಡ್ತೀದಾರೆ ; HDK ಟಾಂಗ್

ನ್ಯೂಸ್ ಆ್ಯರೋ‌ : ಹಾಲು ಗ್ರಾಹಕರಿಗೆ ರಾಜ್ಯ ಸರಕಾರ ಶಾಕ್ ನೀಡಿದೆ. ಆಗಸ್ಟ್ 1ರಿಂದ ನಂದಿನಿ ಹಾಲಿನ ದರ ಲೀಟರ್ ಗೆ 3 ರೂ. ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಈ ನಿರ್ಧಾರವನ್ನು ಖಂಡಿಸಿರುವ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ದ ಹಾರಿಹಾಯ್ದಿದ್ದಾರೆ.

ಕುಮಾರಸ್ವಾಮಿ ಹೇಳಿದ್ದೇನು?

ಬೆಲೆ ಏರಿಕೆ ಗ್ಯಾರಂಟಿ ಹ್ಯಾಶ್ ಟ್ಯಾಗ್ ನಡಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ. ಸರಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿ ಮಾಡಲು ಕಾಂಗ್ರೆಸ್ ಹೊರಟಿದೆ ಎಂದು ಟೀಕಿಸಿದ್ದಾರೆ.

ಆಲ್ಕೋಹಾಲಿನ ಬಳಿಕ ಹಾಲಿನ ಬೆಲೆಯನ್ನೂ ಸರಕಾರ ಏರಿಸಿ ಶ್ರಮಜೀವಿಗಳ ಜೇಬಿಗೆ ಕನ್ನ ಕೊರೆದಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿರುವ ಕಾಂಗ್ರೆಸಿಗರು ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಚುನಾವಣೆಗೂ ಮುನ್ನ ಬೆಲೆ ಏರಿಕೆ ವಿರುದ್ಧ ಹೋರಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದ ಹಾಗೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಆರಂಭದಲ್ಲಿಯೇ ವಿದ್ಯುತ್ ದರ ಏರಿಸಿದ್ದ ಸರಕಾರ ಇದೀಗ ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯಗಳನ್ನು ಕರುಣಿಸಿದೆ ಎಂದಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *