ನಟಿ ಲೀಲಾವತಿ ಆಸ್ಪತ್ರೆಗೆ ದಾಖಲಾದರೆ ಸಂಪೂರ್ಣ ವೆಚ್ಚ ಸರ್ಕಾರದ್ದೇ.. – ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ನಟಿ ಲೀಲಾವತಿ ಆಸ್ಪತ್ರೆಗೆ ದಾಖಲಾದರೆ ಸಂಪೂರ್ಣ ವೆಚ್ಚ ಸರ್ಕಾರದ್ದೇ.. – ಸಿಎಂ ಸಿದ್ಧರಾಮಯ್ಯ ಮಹತ್ವದ ಹೇಳಿಕೆ

ನ್ಯೂಸ್ ಆ್ಯರೋ : ಒಂದು ಕಾಲದಲ್ಲಿ ಅದ್ಭುತ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ನಟಿಸಿ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದ ನಟಿ ಲೀಲಾವತಿ ಅವರು ಇದೀಗ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ (ಡಿ.3) ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, “ನಟಿ ಲೀಲಾವತಿ ಆಸ್ಪತ್ರೆಗೆ ದಾಖಲಾದರೆ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದೆ” ಎಂದಿದ್ದಾರೆ.

ಸದ್ಯ ಅವರಿಗೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಇಂದು (ಡಿ.3) ಲೀಲಾವತಿ ಅವರನ್ನು ಭೇಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. “ಹಿರಿಯ ಕಲಾವಿದೆ ಲೀಲಾವತಿ ಅವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ, ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ” ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲಿದೆ:

ಅವರು ಇಂದು (ಡಿ.3) ಸೋಲದೇವನಹಳ್ಳಿಯಲ್ಲಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಮಾಧ್ಯಮದವರೊಂದಿಗೆ ಮಾತನಾಡಿದರು. “ನಟಿ ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು.

ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಆಸ್ಪತ್ರೆಗೆ ಸೇರಿಸಿದರೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದರು.

ಆರೋಗ್ಯ ವಿಚಾರಿಸಿದ್ದ ಡಿಕೆ ಶಿವಕುಮಾರ್

ಈಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಲೀಲಾವತಿ ಅವರ ಮನೆಗೆ ಆಗಮಿಸಿ, ಅವರ ಆರೋಗ್ಯ ವಿಚಾರಿಸಿದ್ದಾರೆ. ಜೊತೆಗೆ ಲೀಲಾವತಿ ಅವರು ಕಟ್ಟಿಸಿರುವ ಪಶು ವೈದ್ಯಕೀಯ ಆಸ್ಪತ್ರೆಯನ್ನು ಉದ್ಘಾಟಿಸಿದ್ದರು. “ಲೀಲಾವತಿ ಅವರ ಸೇವೆ ಚಿಕ್ಕದು, ದೊಡ್ಡದು ಎನ್ನುವುದಕ್ಕಿಂತ ಅವರ ಆಲೋಚನೆಯೇ ಮಾದರಿಯಾದುದು. ಶ್ರೀಮಂತರನ್ನು ನೋಡಿದ್ದೇವೆ. ಆದರೆ ಸೇವೆ ಮಾಡುವ ಮನೋಭಾವನೆ ಎಷ್ಟೋ ಜನರಲ್ಲಿ ನೋಡಿಲ್ಲ.

‘ನಾನು ಬದುಕಿರುವಾಗಲೇ ಬಂದು ಈ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕು’ ಎಂದು ಲೀಲಾವತಿ ಅವರು ನನ್ನ ಮನೆಗೆ ಬಂದು ಮನವಿ ಮಾಡಿದ್ದರು. ಅವರ ಪ್ರೀತಿ, ಮಮತೆಗೆ ಕಟ್ಟುಬಿದ್ದು ಇಲ್ಲಿಗೆ ಬಂದಿದ್ದೇನೆ. ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ, ಆದರೆ ಹಣ ಮಾಡಿಲ್ಲ. ಆದರೂ ಇವರ ಸಮಾಜಮುಖಿ ಕೆಲಸಗಳನ್ನು ನೋಡಿ ಆಶ್ಚರ್ಯನಾಗಿದ್ದೇನೆ” ಎಂದು ಹೇಳಿದರು.

ಶಿವಣ್ಣ ಕೂಡ ಆಗಮಿಸಿದ್ರು

ಇತ್ತೀಚೆಗಷ್ಟೇ ನಟ ಶಿವರಾಜ್‌ಕುಮಾರ್ ಮತ್ತು ಗೀತಾ ಶಿವರಾಜ್‌ಕುಮಾರ್ ಅವರು ಲೀಲಾವತಿ ಅವರ ಮನೆಗೆ ಭೇಟಿ ನೀಡಿದ್ದರು. ಲೀಲಾವತಿ ಅವರ ಆರೋಗ್ಯದ ಕುರಿತಂತೆ ವಿನೋದ್ ರಾಜ್ ಬಳಿ ಮಾತನಾಡಿದ್ದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿ, “ಅಮ್ಮ ನನ್ನ ಧ್ವನಿಯನ್ನು ಕಂಡುಹಿಡಿದ್ರು. ಅವ್ರು ಚೆನ್ನಾಗಿದ್ದಾರೆ, ಇನ್ನು ಚೆನ್ನಾಗಿ ಇರ್ತಾರೆ. ವಿನೋದ್ ರಾಜ್ ಧೈರ್ಯವಾಗಿ ಇರಬೇಕು. ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ” ಎಂದು ಹೇಳಿದ್ದರು. ನಟ ದರ್ಶನ್ ಅವರು ಕೂಡ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

ರೈತರ ಪರ ಗಟ್ಟಿ ನಿಲುವು ಹೊಂದಿದ್ದ ನಟಿ ಲೀಲಾವತಿ

“ನಟಿ ಲೀಲಾವತಿ ಅವರು ಒಬ್ಬ ನೈಜ ಪ್ರತಿಭೆ ಇದ್ದ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು. ರೈತರ ಪರವಾಗಿ ಲೀಲಾವತಿ ಗಟ್ಟಿಯಾದ ನಿಲುವು ಹೊಂದಿದ್ದರು. ಈಗಾಲೂ ಅವರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *