ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಿಂದ 30-40 ಶಾಸಕರು ಹೊರಗೆ ಬರ್ತಾರೆ..! – ಹಸ್ತದ ಒಳಗೆ ಆಪರೇಷನ್ ಹಸ್ತ ನಡೆಯುತ್ತಿದೆ : ನಳಿನ್ ಕುಮಾರ್ ಕಟೀಲ್

ಕೆಲವೇ ದಿನಗಳಲ್ಲಿ ಕಾಂಗ್ರೆಸ್ ನಿಂದ 30-40 ಶಾಸಕರು ಹೊರಗೆ ಬರ್ತಾರೆ..! – ಹಸ್ತದ ಒಳಗೆ ಆಪರೇಷನ್ ಹಸ್ತ ನಡೆಯುತ್ತಿದೆ : ನಳಿನ್ ಕುಮಾರ್ ಕಟೀಲ್

ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆಶಿ ಮತ್ತು ಜಾರಕಿಹೊಳಿ ತಂಡ ಇಬ್ಬಾಗವಾಗ್ತಿದೆ. ಅದರ ಮಧ್ಯೆ ಮರಿಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡ್ತಾ ಇದ್ದಾರೆ, ಕಾಂಗ್ರೆಸ್ ಡಿವೈಡ್ ಆಗ್ತಿದೆ, ಹಸ್ತದ ಒಳಗೆ ಹಸ್ತದ ಆಪರೇಷನ್ ಆಗ್ತಿದೆ, ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರ್ತಾರೆ ಎಂದು ಬಾಂಬ್ ಸಿಡಿಸಿದ್ದಾರೆ‌

ಇನ್ನು ಈ ಭಯದಿಂದ ಕಾಂಗ್ರೆಸ್ ನವರು ಬಿಜೆಪಿಯಿಂದ‌ ಬರ್ತಾರೆ ಅಂತ ದಾರಿ ತಪ್ಪಿಸ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯಿಂದ ಯಾರೂ ಹೋಗ್ತಾ ಇಲ್ಲ‌. ಬೆಳಗಾವಿ ಅಧಿವೇಶನ ಮುಗಿದ ಕೂಡಲೇ ಕಾಂಗ್ರೆಸ್ ನಲ್ಲಿ ದೊಡ್ಡ ಪರಿವರ್ತನೆ ಆಗುತ್ತದೆ. ಮುಖ್ಯಮಂತ್ರಿ ಹುದ್ದೆಗೆ ಹತ್ತಾರು ಟವಲ್ ಗಳು ಬಿದ್ದಿವೆ ಎಂದರು.

ಜಾರಕಿಹೊಳಿ, ಪರಮೇಶ್ವರ್ ಜೊತೆಗೆ ದಲಿತ ಸಿಎಂ ಕಾರ್ಡ್ ಹೊರಟಿದೆ. ಪ್ರಿಯಾಂಕ್ ಖರ್ಗೆ, ಡಿಕೆಶಿ ಎಲ್ಲರೂ ಹೊರಟ ಕಾರಣ ಸರ್ಕಾರ ಬೀಳಬಹುದು. ಸರ್ಕಾರ ಟೇಕಾಫ್ ಆಗ್ತಾ ಇಲ್ಲ, ಅಭಿವೃದ್ಧಿ ಕಾರ್ಯ ಆಗ್ತಾ ಇಲ್ಲ, ಶಾಂತಿ ಸುವ್ಯವಸ್ಥೆ ಹದಗೆಟ್ಡಿದೆ, ನಾಲ್ಕು ತಿಂಗಳಲ್ಲಿ ಮುನ್ನೂರು ರೈತರ ಆತ್ಮಹತ್ಯೆ ಆಗಿದೆ. ಉಡುಪಿಯಲ್ಲಿ ಹಾಡಹಗಲೇ ನಾಲ್ವರ ಹತ್ಯೆ ಆಗಿದೆ ಎಂದು ಟೀಕಿಸಿದರು.

ಇನ್ನು ಶಾಂತಿ ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಬರ ನಿಯಂತ್ರಣ ಆಗಿಲ್ಲ. ರಾಜ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿ ತಲವಾರು ತೋರಿಸಿದ್ರೂ ಬಂಧನ ಆಗ್ತಾ ಇಲ್ಲ. ರಾಷ್ಟ್ರ ವಿರೋಧಿ ಶಕ್ತಿಗಳು ರಾಜ್ಯದಲ್ಲಿ ಎದ್ದು ನಿಂತಿದೆ. ಮೋದಿ ಸರ್ಕಾರ ಕೊಟ್ಟ ಅನುದಾನದಲ್ಲಿ ರಾಜ್ಯದಲ್ಲಿ ಕೆಲಸ ಆಗ್ತಿದೆ. ರಾಜ್ಯದಿಂದ ಒಂದು ರೂ. ಬಿಡಿಗಾಸು ಬಿಡಗಡೆಯಾಗಿಲ್ಲ ಈ ಸರ್ಕಾರ ಭ್ರಷ್ಟಾಚಾರದ ಸರ್ಕಾರ, ಅಧಿಕಾರಿಗಳ ಸಂಬಳ ಕೊಡಲು ಕೂಡ ಹಣ ಇಲ್ಲ, ಮೂರ್ನಾಲ್ಕು ತಿಂಗಳು‌ ಕಾದು ನೋಡಿ, ಎಲ್ಲವೂ ಗೊತ್ತಾಗಲಿದೆ ಎಂದು ಕಟೀಲ್ ಹೇಳಿಕೆ ನೀಡಿದರು.

ಇನ್ನು ನಾಳೆ ಬಿಜೆಪಿ ನೂತನ ರಾಜ್ಯಾಧ್ಯಕ್ಷರು ಮಂಗಳೂರಿಗೆ ಬರ್ತಾರೆ. ಅವರನ್ನು ಮಂಗಳೂರು ಏರ್ಪೋರ್ಟ್ ನಿಂದ ಸ್ವಾಗತ ಮಾಡ್ತೇವೆ. ಅಲ್ಲಿಂದ ಮೆರವಣಿಗೆ ಮಾಡಿ ಮಂಗಳೂರಿನ ಸಿ.ವಿ.ನಾಯಕ್ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ಇರಲಿದೆ. ಬಳಿಕ ಒಂದಷ್ಟು ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Related post

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 03-12-2023 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಆರೋಗ್ಯ ಪರಿಪೂರ್ಣವಾಗಿರುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಕುಟುಂಬದೊಂದಿಗೆ…
ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…

Leave a Reply

Your email address will not be published. Required fields are marked *