ಕುಮಾರಸ್ವಾಮಿ ತವರಲ್ಲೇ ಕಾಂಗ್ರೆಸ್ ಆಪರೇಷನ್ ಸಕ್ಸಸ್ – 300ಕ್ಕೂ ಅಧಿಕ ಕಾರ್ಯಕರ್ತರು ಕೈ ಪಡೆಗೆ ಸೇರ್ಪಡೆ…!!

ಕುಮಾರಸ್ವಾಮಿ ತವರಲ್ಲೇ ಕಾಂಗ್ರೆಸ್ ಆಪರೇಷನ್ ಸಕ್ಸಸ್ – 300ಕ್ಕೂ ಅಧಿಕ ಕಾರ್ಯಕರ್ತರು ಕೈ ಪಡೆಗೆ ಸೇರ್ಪಡೆ…!!

ನ್ಯೂಸ್ ಆ್ಯರೋ : ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಜೆಡಿಎಸ್ ನಾಯಕರು ಪಕ್ಷ ತೊರೆಯಲು ಮುಂದಾಗಿದ್ದಾರೆ. ಹಲವು ನಾಯಕರು ಈಗಾಗಲೇ ಪಕ್ಷ ತೊರೆದಿದ್ದು, ಇದೀಗ ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು ‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್‌, ‘ಬಿಜೆಪಿ – ಜೆಡಿಎಸ್‌ನ ಮೈತ್ರಿ ಸಹಿಸಿಕೊಳ್ಳಲಾಗದೆ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿ’ ಎಂದರು.

ಇದಕ್ಕೂ ಮೊದಲು ನೀವು (ಜೆಡಿಎಸ್‌) ಕೂಡ ಕಾಂಗ್ರೆಸ್ ನಿಂದ ಅನೇಕ ನಾಯಕರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚೆಸ್, ಫುಟ್ಬಾಲ್ ಗೇಮ್ ಆಡಿಲ್ಲವೇ? ನೀವು ಯಾರನ್ನು ಬೇಕಾದರೂ ಕಟ್ಟಿಹಾಕಿಕೊಳ್ಳಿ, ಮನೆಯೊಳಗೇ ಕೂಡಿ ಹಾಕಿಕೊಳ್ಳಿ. ನಾವು ಬೇಡ ಎನ್ನುವುದಿಲ್ಲ. ಈ ಹಿಂದೆ ನಮ್ಮ ಪಕ್ಷದಿಂದ ಎಂಎಲ್ಸಿ ಆಗಿದ್ದ ಸಿ.ಎಂ ಇಬ್ರಾಹಿಂ ಅವರನ್ನು, ಅವರ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ ಕರೆದುಕೊಂಡು ಹೋಗಿ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದೀರಿ. ಅವರು ಈಗ ಏನು ಹೇಳಿದ್ದಾರೆ? ಪಕ್ಷದ ಅಧ್ಯಕ್ಷನಾದ ನನಗೇ ಮೈತ್ರಿ ವಿಚಾರ ತಿಳಿಸಲಿಲ್ಲ ಎಂದು ಹೇಳಿದ್ದಾರೆ. ನಿಮ್ಮ ಪಕ್ಷದ ಬಹುತೇಕ ಮುಖಂಡರು, ಕಾರ್ಯಕರ್ತರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅನೇಕರು ಕಾಂಗ್ರೆಸ್ ಕಡೆ ನೋಡುತ್ತಿದ್ದಾರೆ ಎಂದರು.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *