
ಡಿಕೆಶಿ ಸಿಎಂ ಆಗೋದಾದ್ರೆ JDS ನ 19 ಶಾಸಕರ ಬೇಷರತ್ ಬೆಂಬಲ – ಮಾಜಿ ಸಿಎಂ ಕುಮಾರಸ್ವಾಮಿ ಓಪನ್ ಆಫರ್
- ರಾಜಕೀಯ
- November 4, 2023
- No Comment
- 67
ನ್ಯೂಸ್ ಆ್ಯರೋ : ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂಬ ಚರ್ಚೆ ಜೋರಾಗಿರುವಂತೆ ಡಿಕೆಶಿ ಸಿಎಂ ಆಗುವುದಾದ್ರೆ ಜೆಡಿಎಸ್ ನ 19 ಶಾಸಕರ ಬೆಂಬಲ ಕೊಡುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಡಿಕೆ ಶಿವಕುಮಾರ್ ನಾಳೆ ಬೆಳಗ್ಗೆ ಸಿಎಂ ಆಗೋದಾದರೆ ನಾವು ಬೆಂಬಲ ನೀಡುತ್ತೇವೆ. ಅವರು ಸಿಎಂ ಆಗೋದಾದ್ರೆ 19 ಜೆಡಿಎಸ್ ಶಾಸಕರ ಬೆಂಬಲ ಸಿಗಲಿದೆ ಎಂದು ಓಪನ್ ಆಫರ್ ನೀಡಿದ್ದಾರೆ.
ಸಿಎಂ ಹುದ್ದೆ ವಿಚಾರ ಚರ್ಚೆಯಲ್ಲಿರುವಾಗಲೇ ಕುಮಾರಸ್ವಾಮಿ ಈ ಆಫರ್ ನೀಡಿದ್ದಾರೆ. ಈ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಐದು ವರ್ಷ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇರಲಿದೆ. ಈಗ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂಬ ಕೂಗು ಕೂಡ ಕೇಳಿಬಂದಿತ್ತು. ಕೆಲವು ನಾಯಕರು ಡಿಸಿಎಂ ಡಿಕೆಶಿ ಸಿಎಂ ಆಗಲಿ ಎಂದಿದ್ದರೆ, ಇನ್ನೂ ಕೆಲವರು ಸಿದ್ದರಾಮಯ್ಯರೇ ಸಿಎಂ ಆಗಿ ಮುಂದುವರೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ವಿಚಾರವಾಗಿ ಮಾಜಿ ಸಿಎಂ ಹೆಚ್ಡಿಕೆ ನೀಡಿರುವ ಹೇಳಿಕೆ ರಾಜ್ಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಡಿಕೆಶಿ ಅವರ ಪ್ರತಿಕ್ರಿಯೆ ಏನಿರಬಹುದು ಎಂಬ ಕುತೂಹಲ ಮೂಡಿದೆ.