ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ತಿ ಮೌಲ್ಯ ಎಷ್ಟು ಗೊತ್ತಾ? – ಕೋಟ್ಯಾಧಿಪತಿಯಾದ್ರೂ ಇವರಿಗಿದೆ ಕೋಟಿ‌ ಕೋಟಿ ಸಾಲ…!!

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ತಿ ಮೌಲ್ಯ ಎಷ್ಟು ಗೊತ್ತಾ? – ಕೋಟ್ಯಾಧಿಪತಿಯಾದ್ರೂ ಇವರಿಗಿದೆ ಕೋಟಿ‌ ಕೋಟಿ ಸಾಲ…!!

ನ್ಯೂಸ್ ಆ್ಯರೋ‌ : ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಇಂದು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪಟ್ಟ ಅವರಿಗೆ ಒಲಿದಿರುವುದು ಇದು ಎರಡನೇ ಬಾರಿ. ಹಾಗಾದರೆ ಸಿದ್ದರಾಮಯ್ಯ ಎಷ್ಟು ಮೌಲ್ಯದ ಅಸ್ತಿ ಹೊಂದಿದ್ದಾರೆ ಎನ್ನುವ ಕುತೂಹಲ ಮೂಡುವುದು ಸಹಜ. ಅಫಿಡವಿತ್ ನಲ್ಲಿ ಸಿದ್ದರಾಮಯ್ಯ ತಮ್ಮ ಆದಾಯಗಳ ವಿವರಗಳನ್ನು ಸಲ್ಲಿಸಿದ್ದು ಆ ಕುರಿತಾದ ಮಾಹಿತಿ ಇಲ್ಲಿದೆ.

ಸಿದ್ದರಾಮಯ್ಯ 2023ರ ಚುನಾವಣಾ ಅಫಿಡವಿಟ್‌ನಲ್ಲಿ ಒಟ್ಟು 51 ಕೋಟಿ ರೂ. ಆಸ್ತಿ ಹೊಂದಿರುವುದಾಗಿ ತಿಳಿಸಿದ್ದರು. ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸುಮಾರು 21 ಕೋಟಿ ರೂ. ಮೌಲ್ಯದ ಚರ ಆಸ್ತಿ ಹೊಂದಿದ್ದಾರೆ. ಸಿದ್ದರಾಮಯ್ಯ ಹೆಸರಿನಲ್ಲಿ 9 ಕೋಟಿ ರೂ., ಪತ್ನಿ ಹೆಸರಲ್ಲಿ 11 ಕೋಟಿ ರೂ. ಇದೆ. ಅದೇ ರೀತಿ ಇಬ್ಬರೂ ಸುಮಾರು 29 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ಸಿದ್ದರಾಮಯ್ಯ ಅವರ ಬಳಿ 9 ಕೋಟಿ ರೂ. ಸ್ಥಿರಾಸ್ತಿ ಇದ್ದರೆ, ಅವರ ಪತ್ನಿ ಸುಮಾರು 20 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸುಮಾರು 23 ಕೋಟಿ ರೂ. ಸಾಲ ಮಾಡಿದ್ದು ತೀರಿಸಲು ಬಾಕಿ ಇದೆ.

ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿರುವ ಸಿದ್ದರಾಮಯ್ಯ ತಮ್ಮ ಆದಾಯದ ಮೂಲವಾಗಿ ವ್ಯಾಪಾರವನ್ನೂ ಉಲ್ಲೇಖಿಸಿದ್ದಾರೆ. ಅವರ ಪತ್ನಿ ವೈಎಸ್ ಡಯಾಗ್ನೋಸ್ಟಿಕ್ಸ್ ಪ್ರೈ. ಲಿಮಿಟೆಡ್ ನಿರ್ದೇಶಕರು, ಬಿಎಂಎಂಎನ್ ಎಂಟರ್‌ಪ್ರೈಸಸ್ ಮತ್ತು ಪಿ.ಆರ್.ವೈ. ಪ್ರಾಜೆಕ್ಟ್ಸ್ ನ ಪಾಲುದಾರರೆಂದು ಉಲ್ಲೇಖಿಸಲಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *