
ಮದರಸಾಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ : ಸಚಿವ ಜಮೀರ್ ಅಹಮದ್ ಖಾನ್ – ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹೆಚ್ಚಳ
- ರಾಜಕೀಯ
- August 29, 2023
- No Comment
- 36
ನ್ಯೂಸ್ ಆ್ಯರೋ : ಮದರಸಾಗಳಲ್ಲಿ ಕನ್ನಡ, ವಿಜ್ಞಾನ, ಗಣಿತ, ಮತ್ತು ಇಂಗ್ಲೀಷ್ ಸೇರಿದಂತೆ ಎಲ್ಲಾ ವಿಷಯಗಳ ಬೋಧನೆ ಕಡ್ಡಾಯ. ಈ ಬಗ್ಗೆ ಗಮನ ಹರಿಸಬೇಕೆಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡ ಕಡ್ಡಾಯ
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸಬೇಕು ಎಂದು ಒತ್ತಿ ಹೇಳಿದರು.
ವಕ್ಫ್ ಬೋರ್ಡ್ ನಲ್ಲಿ 1,265 ಮದರಸಾಗಳು ನೋಂದಣಿಯಾಗಿವೆ. ಅಧಿಕಾರಿಗಳು ಮೊದಲು 100 ಮದರಸಾಗಳಲ್ಲಿ 5 ಸಾವಿರ ಮಕ್ಕಳಿಗೆ ಪ್ರಾಯೋಗಿಕವಾಗಿ ಕನ್ನಡ ಬೋಧನೆ ಮಾಡಬೇಕು. ಮುಂದಿನ ವರ್ಷ ಎಲ್ಲಾ ಮದರಸಾಗಳಲ್ಲಿ ಜಾರಿಗೊಳಿಸಬೇಕು. ಈ ಬಗ್ಗೆ ವಿವರವಾದ ಪ್ರಸ್ತಾವ ಸಲ್ಲಿಸಿ ಎಂದು ಸೂಚಿಸಿದರು.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಯೋಜನೆಯಡಿ ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 20 ಲಕ್ಷ ರೂ.ಯಿಂದ 30 ಲಕ್ಷ ರೂ.ಗೆ ಹೆಚ್ಚಿಸಲು ಮತ್ತು ಐ.ಐ.ಟಿ. ಮತ್ತು ಎನ್.ಐ.ಟಿ. ಸೇರಿದಂತೆ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನವನ್ನು 4 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.