
DVS : ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳು ಎನ್.ಡಿ.ಎ. ಪಾಲಿಗೆ – ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿಕೆ
- ರಾಜಕೀಯ
- November 4, 2023
- No Comment
- 40
ನ್ಯೂಸ್ ಆ್ಯರೋ : ದ.ಕ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ರವರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳಲಿದೆ. ಈ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆಯಾಗಿದೆ. ನರೇಂದ್ರ ಮೋದಿ ನೇತೃತ್ವದ ಆಡಳಿತ ಅತ್ಯಂತ ಯಶಸ್ವಿಯಾಗಿದೆ, ಅವರಿಂದ ಈ ದೇಶದಲ್ಲಿ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದರು.
ಬಿಜೆಪಿ ಪಕ್ಷ ನನಗೆ ಎಲ್ಲವನ್ನು ನೀಡಿದೆ ಎನ್ನುವುದು ಸತ್ಯ. ಎಂಎಲ್ಎ, ಎಂಪಿ, ಎಂಎಲ್ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ಇನ್ನು ನಾನು ಏನಾದರೂ ಪಕ್ಷಕ್ಕೆ ನೀಡಬೇಕಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.