ಕೇಂದ್ರದ ‘ಒಂದು ದೇಶ ಒಂದು ಚುನಾವಣೆ’ ಕನಸು ನನಸಾಗುತ್ತಾ? – ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ನೇತೃತ್ವದ ಸಮಿತಿಯ ಮುಂದಿದೆ ಭಾರೀ ಸವಾಲು..

ಕೇಂದ್ರದ ‘ಒಂದು ದೇಶ ಒಂದು ಚುನಾವಣೆ’ ಕನಸು ನನಸಾಗುತ್ತಾ? – ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ ನೇತೃತ್ವದ ಸಮಿತಿಯ ಮುಂದಿದೆ ಭಾರೀ ಸವಾಲು..

ನ್ಯೂಸ್ ಆ್ಯರೋ : ‘ಒಂದು ದೇಶ ಒಂದು ಚುನಾವಣೆ’ ಬಗ್ಗೆ ಆಸಕ್ತಿ ಹೊಂದಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬಗ್ಗೆ ತೆರೆಮರೆಯಲ್ಲಿ ಕೆಲಸ ಆರಂಭಿಸಿದೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪರಿಕಲ್ಪನೆಯ ಸಾಧಕ, ಬಾಧಕ ಅಧ್ಯಯನ ಮಾಡಿ ವರದಿಯನ್ನು ಸಲ್ಲಿಸಲು ಕೇಂದ್ರ ಸರ್ಕಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಿದ್ದರಿಂದ ಈಗ ಈ ಪ್ರಶ್ನೆ ಎದ್ದಿದೆ.

ಸಮಿತಿಯ ಸದಸ್ಯರ ಬಗ್ಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಚುನಾವಣೆ ಕಲ್ಪನೆಯ ಬಗ್ಗೆ ಜನರ ಅಭಿಪ್ರಾಯ ಏನು? ಪಕ್ಷಗಳ ನಿಲುವು ಏನು? ಕೇಂದ್ರಾಡಳಿತ ಪ್ರದೇಶಗಳಲ್ಲಿ ಹೇಗೆ ಕಾರ್ಯನಿರ್ವಹಿಸುತ್ತದೆ? ಎಂಬುದರ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ.

ಸೆಪ್ಟೆಂಬರ್ 18 ರಿಂದ 22 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲಾಗುತ್ತದೆ ಎಂದು ಘೋಷಣೆ ಮಾಡಿದ ಮರು ದಿನ ಕೇಂದ್ರದಿಂದ ಈ ಅಚ್ಚರಿಯ ನಿರ್ಧಾರ ಪ್ರಕಟವಾಗಿದೆ.

ಈ ನಿರ್ಧಾರವೇ ಅಧಿವೇಶನದಲ್ಲಿ ʼಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಮಸೂದೆಯನ್ನು ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಮಾತಿದೆ. ಆದರೆ ಸರ್ಕಾರ ಈ ಬಗ್ಗೆ ಖಚಿತಪಡಿಸಿಲ್ಲ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ದೇಶಾದ್ಯಂತ ಏಕಕಾಲದಲ್ಲಿ ನಡೆಸುವುದಕ್ಕೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂದು ಕರೆಯಲಾಗುತ್ತದೆ. ಹಿಂದೆಯೂ ಈ ಬಗ್ಗೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಒಲವನ್ನು ವ್ಯಕ್ತಪಡಿಸಿದರು.

1967 ರವರೆಗೆ ಭಾರತದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿತ್ತು. ನಾಲ್ಕು ಚುನಾವಣೆಗಳು ಈ ರೀತಿ ನಡೆದಿದ್ದವು. 1968-69ರಲ್ಲಿ ಕೆಲವು ರಾಜ್ಯಗಳ ವಿಧಾನಸಭೆ ಅಕಾಲಿಕವಾಗಿ ವಿಸರ್ಜಿಸಲ್ಪಟ್ಟ ನಂತರ ಈ ಪದ್ಧತಿ ಸ್ಥಗಿತವಾಗಿದೆ. ಲೋಕಸಭೆಯು ಮೊದಲ ಬಾರಿಗೆ 1970 ರಲ್ಲಿ ನಿಗದಿತ ಅವಧಿಗಿಂತ ಒಂದು ವರ್ಷ ಮುಂಚಿತವಾಗಿ ವಿಸರ್ಜನೆಯಾಗಿತ್ತು ಮತ್ತು 1971 ರಲ್ಲಿ ಮಧ್ಯಂತರ ಚುನಾವಣೆಗಳು ನಡೆದಿತ್ತು.

2016ರಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು ಮಾತನಾಡಿದ್ದ ಪ್ರಧಾನಿ ಮೋದಿ, 2019ರ ಲೋಕಸಭೆ ಚುನಾವಣೆ ಬಳಿಕ ಈ ವಿಷಯದ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದ್ದರು. ಸಭೆಯನ್ನು ಹಲವು ವಿರೋಧ ಪಕ್ಷಗಳು ವಿರೋಧಿಸಿದ್ದವು.

ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ಸಾಕಾರಗೊಳಿಸಲು ಸಾಂವಿಧಾನಿಕ ತಿದ್ದುಪಡಿ ಮತ್ತು ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮೂರನೇ ಎರಡರಷ್ಟು ಸದಸ್ಯರ ಬೆಂಬಲದ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಹಿಂದೆ ಹಲವು ಬಾರಿ ವಿವಿಧ ಕಾರ್ಯಕ್ರಮಗಳಲ್ಲಿ ʼಒಂದು ದೇಶ, ಒಂದು ಚುನಾವಣೆʼಯ ಪರ ಬ್ಯಾಟಿಂಗ್‌ ಮಾಡಿದ್ದರು. ಈ ಚುನಾವಣೆ ಪರಿಕಲ್ಪನೆ ಕೇವಲ ಚರ್ಚೆಯ ವಿಷಯವಲ್ಲ. ಅದು ದೇಶದ ಪರಿಕಲ್ಪನೆಯಾಗಿದೆ. ಪ್ರತಿ ಕೆಲ ತಿಂಗಳುಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ಚುನಾವಣೆಗಳು ನಡೆಯುತ್ತಿರುತ್ತವೆ. ಇದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತವೆ. ಇದು ನಿಮಗೆ ತಿಳಿದಿರುವ ವಿಚಾರವೇ ಆಗಿದೆ. ಆದ್ದರಿಂದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಆಳವಾದ ಅಧ್ಯಯನ ಹಾಗೂ ಚರ್ಚೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದರು.

Related post

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು ರದ್ದು, ಹೊಸ ಟಿಸಿಎಸ್ ನಿಯಮ ಜಾರಿ

ಅಕ್ಟೋಬರ್‌ನಲ್ಲಿ ಹಣಕಾಸಿನ ನಿಯಮಗಳಲ್ಲಿ ಭಾರೀ ಬದಲಾವಣೆ – ₹ 2000 ನೋಟು…

ನ್ಯೂಸ್‌ ಆ್ಯರೋ : ತಿಂಗಳಿಗೊಮ್ಮೆ ಹಣಕಾಸಿನ ವ್ಯವಹಾರಗಳ ನಿಯಮಗಳಲ್ಲಿ ಬದಲಾವಣೆ ಆಗುವುದು ಸಹಜ ಪ್ರಕ್ರಿಯೆ. ಇದೀಗ ಅಕ್ಟೋಬರ್‌ ತಿಂಗಳು ಪ್ರಾರಂಭಕ್ಕೆ ಕೆಲ ದಿನವಿರುವಾಗಲೇ ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳಲ್ಲಿ…
ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!! – ಕೋಟ್ಯಾಂತರ ರೂಪಾಯಿ ಒಡೆಯ ಈ ತಾತ ಮಾಡೋದೇನು?

ಏನೂ ಕೆಲಸ ಮಾಡದೇ ಈ ತಾತ ವರ್ಷಕ್ಕೆ 6.5 ಲಕ್ಷ ದುಡೀತಾರೆ..!!…

ನ್ಯೂಸ್ ಆ್ಯರೋ : ಎಷ್ಟು ದುಡಿದರೂ ವರ್ಷಕ್ಕೆ 5- 6 ಲಕ್ಷ ಸಂಪಾದಿಸೋದೇ ಕಷ್ಟ ಎನ್ನುವವರ ಮಧ್ಯೆ ಏನೂ ಕೆಲಸವಿಲ್ಲದ ವೃದ್ಧರೊಬ್ಬರು 10 ಕೋಟಿ ರೂ. ಆದಾಯ ಗಳಿಸಿದ್ದಾರೆ.…
ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ ಮೇಲೆ ಕಾಳಜಿ ಇರುವವರು ಈ ವರದಿ ಓದಿ..

ಖಾಲಿ ಹೊಟ್ಟೆಯಲ್ಲಿ ಕರಿಬೇವು ತಿಂದ್ರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? – ಆರೋಗ್ಯದ…

ನ್ಯೂಸ್ ಆ್ಯರೋ : ಕರಿಬೇವಿನ ಎಲೆಗಳನ್ನು ಭಾರತೀಯ ಅಡುಗೆಮನೆಯಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳಲ್ಲಿ ಕರಿಬೇವು ಮುಖ್ಯ. ಕರಿಬೇವಿನ ಎಲೆಗಳು ಯಾವುದೇ ಆಹಾರದ ರುಚಿಯನ್ನು…

Leave a Reply

Your email address will not be published. Required fields are marked *