ನವೆಂಬರ್ ನಲ್ಲಿ ಪಂಚರಾಜ್ಯಗಳ ಚುನಾವಣೆ ಸಾಧ್ಯತೆ – ಚುನಾವಣಾ ಆಯೋಗದ ಅಂಗಳದಲ್ಲಿ ಚೆಂಡು..!

ನವೆಂಬರ್ ನಲ್ಲಿ ಪಂಚರಾಜ್ಯಗಳ ಚುನಾವಣೆ ಸಾಧ್ಯತೆ – ಚುನಾವಣಾ ಆಯೋಗದ ಅಂಗಳದಲ್ಲಿ ಚೆಂಡು..!

ನ್ಯೂಸ್ ಆ್ಯರೋ : ಪಂಚರಾಜ್ಯಗಳ ವಿಧಾನಸಭಾ ಕ್ಷೇತ್ರದ ಚುನಾವಣೆ ಪ್ರಕ್ರಿಯೆಗಳು ನವೆಂಬರ್ ಎರಡನೇ ವಾರದಿಂದ ಪ್ರಾರಂಭಗೊಳ್ಳಲಿದ್ದು, ಈ ಕುರಿತು ಅಕ್ಟೋಬರ್ 10ರೊಳಗೆ ಅಧಿಕೃತ ಮಾಹಿತಿ ಘೋಷಣೆಯಾಗಲಿದೆ.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ, ಮಿಜೋರಾಂ ಈ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆ ದಿನಾಂಕವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಘೋಷಣೆ ಮಾಡುವ ಸಾಧ್ಯತೆ ಇದೆ.

ನವೆಂಬರ್ ಎರಡನೇ ವಾರದಲ್ಲಿ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಿ ಡಿಸೆಂಬರ್ ಮೊದಲ ವಾರದೊಳಗೆ ಮುಗಿಯುವ ನಿರೀಕ್ಷೆ ಇದೆ.

ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಯಾಕೆಂದರೆ ಇಲ್ಲಿ 2018 ರಲ್ಲೂ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು.

2018ರಲ್ಲಿ ಛತ್ತೀಸ್​​ಗಢದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆದಿತ್ತು. ಹೀಗಾಗಿ ಈ ಬಾರಿಯೂ ಇಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಮಿಜೋರಾಂನಲ್ಲಿ ಎಂಎನ್​ಎಫ್ ನೇತೃತ್ವದಲ್ಲಿ ಮೈತ್ರಿ ಮಾಡಿಕೊಂಡು ಬಿಜೆಪಿ ಅಧಿಕಾರದಲ್ಲಿದ್ದು, ಡಿಸೆಂಬರ್ 17ರಂದು ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ರಾಜಸ್ಥಾನ, ತೆಲಂಗಾಣ, ಛತ್ತೀಸಗಢದ ವಿಧಾನಸಭೆಯ ಅವಧಿ ಜನವರಿಗೆ ಕೊನೆಯಾಗಲಿದೆ. ಹೀಗಾಗಿ ಅದಕ್ಕೂ ಮೊದಲೇ ಚುನಾವಣಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ.

Related post

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ ಸಂಬಳ

ಡೈರೆಕ್ಟರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ UIDAI; ತಿಂಗಳಿಗೆ 2 ಲಕ್ಷಕ್ಕೂ ಅಧಿಕ…

ನ್ಯೂಸ್ ಆರೋ: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​ ಹುದ್ದೆಗಳು…
ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಿ ಸುಪ್ರೀಂ ಕೋರ್ಟ್ ಆದೇಶ

ನ್ಯೂಸ್ ಆ್ಯರೋ : ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡಿ ಇಂದು…
ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ ನ್ಯಾಯಾಲಯ

ಆರೋಗ್ಯ ಸಮಸ್ಯೆ; 14 ತಿಂಗಳ ಬಳಿಕ ಸ್ಯಾಂಟ್ರೋ ರವಿಗೆ ಜಾಮೀನು ನೀಡಿದ…

ನ್ಯೂಸ್ ಆ್ಯರೋ : ಅತ್ಯಾಚಾರ, ಕೊಲೆ ಬೆದರಿಕೆ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಗೆ ಮೈಸೂರಿನ ಆರನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದಲ್ಲಿ ಬಂಧಿತನಾಗಿ…

Leave a Reply

Your email address will not be published. Required fields are marked *