
Opposition Leader : ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ – ಒಕ್ಕಲಿಗ ನಾಯಕನಿಗೊಲಿದ ವಿಪಕ್ಷ ನಾಯಕ ಸ್ಥಾನ
- ರಾಜಕೀಯ
- November 17, 2023
- No Comment
- 28
ನ್ಯೂಸ್ ಆ್ಯರೋ : ಕಳೆದ ಕೆಲ ತಿಂಗಳಿನಿಂದ ಬಹುನಿರೀಕ್ಷಿತ, ಬಹುಚರ್ಚೆಯ ವಿಷಯವಾಗಿದ್ದ ರಾಜ್ಯದ ವಿಪಕಗಷ ನಾಯಕ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಮಾಜಿ ಸಚಿವ, ಪದ್ಮನಾಭನಗರ ಶಾಸಕ ಆರ್. ಅಶೋಕ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ನಡೆದ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಅಶೋಕ್ ಹೆಸರು ಸೂಚಿಸಿದರೆ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಅನುಮೋದಿಸಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
ರಾಜ್ಯಾಧ್ಯಕ್ಷ ಸ್ಥಾನವನ್ನು ಲಿಂಗಾಯಿತ ಸಮುದಾಯಕ್ಕೆ ನೀಡಿದ್ದರಿಂದ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಒಕ್ಕಲಿಗರಿಗೆ ಕೊಡಬೇಕು ಎಂಬ ಕೂಗು ಕೇಳಿಬಂದಿತ್ತು. ಈಗ ಅಶೋಕ್ ಅವರಿಗೆ ವಿಪಕ್ಷ ಸ್ಥಾನ ದಕ್ಕಿದೆ.
ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಪ್ರತ್ಯೇಕವಾಗಿ ಎಲ್ಲ ಶಾಸಕರನ್ನು ಕರೆದು ಅಭಿಪ್ರಾಯ ಸಂಗ್ರಹಿಸಿದರು. ಆದರೆ, ಇಂದು ಬೆಳಗ್ಗೆಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಶೋಕ್‍ರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ವಿಪಕ್ಷ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧವಿರುವಂತೆ ತಿಳಿಸಿದ್ದರು ಎನ್ನಲಾಗಿದೆ.