ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ – ಇಂದು ಮತ್ತೆ 24 ಮಂದಿ ಸಚಿವರಿಂದ ಪ್ರಮಾಣವಚನ ಸ್ವೀಕಾರ

ಸಿದ್ದರಾಮಯ್ಯ ಸಚಿವ ಸಂಪುಟ ವಿಸ್ತರಣೆ – ಇಂದು ಮತ್ತೆ 24 ಮಂದಿ ಸಚಿವರಿಂದ ಪ್ರಮಾಣವಚನ ಸ್ವೀಕಾರ

ನ್ಯೂಸ್ ಆ್ಯರೋ : ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಪೂರ್ಣ ಪ್ರಮಾಣದಲ್ಲಿ ರಚನೆಗೊಂಡಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಂಟು ಸಚಿವರು ಕಳೆದ ವಾರ ಪ್ರಮಾಣವಚನ ಸ್ವೀಕರಿಸಿದ್ದರು. ಸದ್ಯ ಬಾಕಿ ಉಳಿದಿದ್ದ 24 ಸಚಿವ ಸ್ಥಾನಗಳನ್ನು ಪೂರ್ತಿ ಮಾಡಲಾಗಿದೆ.

ರಾಜಭವನದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಜಭವನದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಆಗಮಿಸಿ ನೂತನ ಸಚಿವರಿಗೆ ಶುಭಾಶಯ ಕೋರಿದ್ದಾರೆ.

ಸಚಿವರಾಗಿ ಹೆಚ್.ಕೆ ಪಾಟೀಲ್ ಹಾಗೂ ಕೃಷ್ಣಭೈರೇಗೌಡ, ಈಶ್ವರ ಖಂಡ್ರೆ, ಹೆಚ್ಸಿ ಮಹದೇವಪ್ಪ, ಕೆ.ವೆಂಕಟೇಶ್, ಚಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಕೆಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಶಹಾಪುರ ಶಾಸಕ ಸಚಿವರಾಗಿ ಶರಣಬಸಪ್ಪ ದರ್ಶನಾಪುರ, ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್, ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎಸ್.ಮಲ್ಲಿಕಾರ್ಜುನ, ಕನಕಗಿರಿ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ, ಸೇಡಂ ಶಾಸಕ ಶರಣ ಪ್ರಕಾಶ್ ಪಾಟೀಲ್, ಭಟ್ಕಳ ಶಾಸಕ ಮಂಕಾಳು ವೈದ್ಯ, ಬೀದರ್ ಉತ್ತರ ಕ್ಷೇತ್ರದ ಶಾಸಕ ರಹೀಂ ಖಾನ್, ಹಿರಿಯೂರು ಶಾಸಕ ಡಿ.ಸುಧಾಕರ್, ಕಲಘಟಗಿ ಶಾಸಕ ಸಂತೋಷ್ ಲಾಡ್, ಎನ್. ಎಸ್.ಬೋಸರಾಜು, ಹೆಬ್ಬಾಳ ಕ್ಷೇತ್ರದ ಶಾಸಕ ಭೈರತಿ ಸುರೇಶ್, ಮಾಜಿ ಸಿಎಂ ಬಂಗಾರಪ್ಪ ಪುತ್ರ, ಸೊರಬ ಶಾಸಕ ಮಧು ಬಂಗಾರಪ್ಪ, ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರು ಪ್ರಮಾಣವಚನ ಸ್ವೀಕರಿಸಿದರು.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *