
ಸಿಎಂ ಸಿದ್ದು ಸರ್ಕಾರದ ಕಾರ್ಯಗಳಿಗೆ ಹೊಗಳಿಕೆ ಹಿನ್ನೆಲೆ – ವಿದ್ಯಾರ್ಥಿನಿಯನ್ನು ಭೇಟಿಯಾದ ಸಿಎಂ ಹೇಳಿದ್ದೇನು?
- ರಾಜಕೀಯ
- September 9, 2023
- No Comment
- 85
ನ್ಯೂಸ್ ಆ್ಯರೋ : ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿ ಪತ್ರ ಬರೆದಿದ್ದ ವಿದ್ಯಾರ್ಥಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಭೇಟಿ ಮಾಡಿದರು.
ಧಾರವಾಡ ಜಿಲ್ಲೆ ಕುಂದಗೋಳದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವುದೂ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಶ್ಲಾಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಳು.
ಧಾರವಾಡಕ್ಕೆ ಕೃಷಿ ಮೇಳ ಉದ್ಘಾಟನೆಗೆಂದು ಆಗಮಿಸಿದ್ದ ಸಿಎಂ ವಿದ್ಯಾರ್ಥಿನಿಯನ್ನು ಭೇಟಿಯಾಗಿ ಮಾತನಾಡಿಸಿದರು. ಇದು ತಮಗೆ ಅತೀ ಹೆಚ್ಚು ಖುಷಿ ಕೊಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.
ಇಂತಹ ಮುಗ್ಧ ಮಕ್ಕಳ ಭವಿಷ್ಯದ ಕನಸುಗಳು ನಮ್ಮ ಸರ್ಕಾರದ ಕೈಗಳಲ್ಲಿ ಸುರಕ್ಷಿತವಾಗಿದೆ. ಈ ಮಕ್ಕಳ ಕನಸನ್ನು ನನಸು ಮಾಡುವುದು ನಮ್ಮ ಕರ್ತವ್ಯವೆಂದು ಭಾವಿಸಿ, ಆ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದೇವೆ ಎಂದು ಸಿಎಂ ತಮ್ಮ ಟ್ವೀಟ್ ನಲ್ಲಿ ಹೇಳಿದ್ದಾರೆ.