ಗ್ರಾ. ಪಂ. ಅಧ್ಯಕ್ಷರಾಗಿ ಆಯ್ಕೆಯಾದ ತೃತೀಯ ಲಿಂಗಿ, 19 ಸದಸ್ಯರ ಪೂರ್ಣ ಬೆಂಬಲ‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಬಳ್ಳಾರಿ ಜಿಲ್ಲೆಯ ಚೋರನೂರು

ಗ್ರಾ. ಪಂ. ಅಧ್ಯಕ್ಷರಾಗಿ ಆಯ್ಕೆಯಾದ ತೃತೀಯ ಲಿಂಗಿ, 19 ಸದಸ್ಯರ ಪೂರ್ಣ ಬೆಂಬಲ‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಬಳ್ಳಾರಿ ಜಿಲ್ಲೆಯ ಚೋರನೂರು

ನ್ಯೂಸ್ ಆ್ಯರೋ‌ : ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಚೋರನೂರು ಗ್ರಾಮ ಪಂಚಾಯತ್ ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿದೆ. ಇದೇ ಮೊದಲ ಬಾರಿಗೆ ತೃತೀಯ ಲಿಂಗಿ ಸಿ. ಆಂಜಿನಮ್ಮ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

19 ಸದಸ್ಯರ ಸರ್ವಾನುಮತದ ನಿರ್ಣಯ

ಪರಿಶಿಷ್ಟ ವರ್ಗಕ್ಕೆ ಮೀಸಲಾದ ಸ್ಥಾನಕ್ಕೆ ಎರಡು ಬಾರಿ ಸದಸ್ಯರಾದ ಆಂಜಿನಮ್ಮ ಅವರನ್ನು ಕಣಕ್ಕಿಳಿಸಲಾಗಿತ್ತು. ಗ್ರಾಮ ಪಂಚಾಯತ್ ನ 19 ಸದಸ್ಯರು ಸರ್ವಾನುಮತದಿಂದ ಅವರನ್ನು ಆಯ್ಕೆ ಮಾಡಿದರು.

ಮೂವರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ಅರ್ಹರಾಗಿದ್ದರೂ ಹಿರಿಯರು ಮತ್ತು ಗ್ರಾಮಸ್ಥರು ಆಂಜಿನಮ್ಮ ಅವರಿಗೆ ಒಂದು ಅವಕಾಶ ಕಲ್ಪಿ ಸಬೇಕೆಂದು ಸೂಚಿಸಿದ್ದರು. ಆಂಜಿನಮ್ಮ ಎರಡು ದಶಕಗಳಿಂದ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಹೀಗಾಗಿ ಅವರು ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಗ್ರಾಮಸ್ಥರು ಹೇಳುತ್ತಾರೆ.

ಚುನಾವಣೆಗೆ ಸ್ಪರ್ಧಿಸಲು ಇಷ್ಟವಿಲ್ಲದಿದ್ದರೂ, ಗ್ರಾಮದ ಹಿರಿಯರ ಮಾತಿಗೆ ಬೆಲೆ ಕೊಟ್ಟು ಆಂಜಿನಮ್ಮ ಸ್ಪರ್ಧಿಸಿದ್ದರಂತೆ. ಅವರ ವಿಶ್ವಾಸಕ್ಕೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುವ ಭರವಸೆ ನೀಡಿದ ಆಂಜಿನಮ್ಮ ಗ್ರಾಮದ ಅಭಿವೃದ್ಧಿ, ಮೂಲ ಸೌಕರ್ಯಗಳನ್ನು ಒದಗಿಸಲು ಶ್ರಮಿಸುವುದಾಗಿ ಹೇಳಿದ್ದಾರೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *