ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಗಳು ಒಂದೆರಡಲ್ಲ..!! – ಬ್ಲಾಕ್ ಮಾಡಿದರೂ ಮಹಿಳೆಯರನ್ನು ಕಾಡುತ್ತಿದ್ದ ಕಾಮುಕನ ಬಳಿ ಇದ್ದ ಸಿಮ್ ಗಳು ಎಷ್ಟು ಗೊತ್ತಾ?

IMG 20240628 WA0072
Spread the love

ನ್ಯೂಸ್ ಆ್ಯರೋ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯರಿಗೆ ಕರೆ ಮಾಡಲು ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಕಾರ್ಡ್ ಗಳು ಬರೋಬ್ಬರಿ 15 ಎಂದು ಇದೀಗ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆತನ ಬಳಿ ಒಂದಲ್ಲ, ಎರಡಲ್ಲ 15 ಸಿಮ್‌ಗಳಿದ್ದವು ಎಂದು ತಿಳಿದುಬಂದಿದೆ. ಬರೋಬ್ಬರಿ 15 ಸಿಮ್ ಕಾರ್ಡ್ ಹೊಂದಿದ್ದು, ಇವುಗಳ ಮೂಲಕ ಮಹಿಳೆಯರಿಗೆ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮಹಿಳೆಯರು ಬ್ಲಾಕ್ ಮಾಡಿದ್ರೆ ಮತ್ತೊಂದು ನಂಬರ್‌ನಿಂದ ಕಾಲ್ ಮಾಡಿ, ನಗ್ನ, ಅರೆನಗ್ನ ಸ್ಕ್ರೀನ್ ಶಾಟ್ ಕಳಿಸಿ ಮಹಿಳೆಯರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದನಂತೆ. ಸಹಕರಿಸದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡೋ ಬೆದರಿಕೆ ಹಾಕುತ್ತಿದ್ದನಂತೆ. ಪ್ರಜ್ವಲ್‌ಗೆ ಬೆದರಿ ಸಂತ್ರಸ್ತೆಯರು ಬೆತ್ತಲಾಗಿದ್ದರಂತೆ…!

ಕೆಲಸ ಕೇಳಿಕೊಂಡು ಬಂದವರು, ಮಕ್ಕಳಿಗೆ ಸೀಟ್‌ಗಾಗಿ ಬಂದವರು, ಕೆಲ ಪರಿಚಿತರ ಪತ್ನಿಯರೇ ಪ್ರಜ್ವಲ್ ರೇವಣ್ಣ ಟಾರ್ಗೆಟ್ ಆಗಿದ್ದರಂತೆ. ಇದೆಲ್ಲಾ ಮಾಹಿತಿ ಎಸ್ಐಟಿ ತನಿಖೆಯಲ್ಲಿ ಬಯಲಾಗಿದ್ದು, ಪೋಲಿಸರು ಪ್ರಜ್ವಲ್ ರೇವಣ್ಣ ಜನ್ಮ ಜಾಲಾಡುತ್ತಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!