ಫೆ. 14 ಭಾರತೀಯರಿಗೆ ಕರಾಳ ದಿನ; ಭಾರತದ ಇತಿಹಾಸದಲ್ಲಿ ಆ ದಿನ ನಡೆದಿದ್ದೇನು?

ನ್ಯೂಸ್ ಆ್ಯರೋ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.
ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಮಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಲವತ್ತು ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.
ಫೆಬ್ರವರಿ 15, 2019 ರಂದು ಪತ್ರಿಕಾ ಪ್ರಕಟಣೆಯಲ್ಲಿ ವಿದೇಶಾಂಗ ಸಚಿವಾಲಯವು, ಪಾಕಿಸ್ತಾನವು ಭಯೋತ್ಪಾದನೆಯನ್ನು ಬೆಂಬಲಿಸುತ್ತಿದೆ ಎಂದು ಆರೋಪಿಸಿತು. ಪಾಕಿಸ್ತಾನಿ ನಿಯಂತ್ರಿತ ಪ್ರದೇಶಗಳಲ್ಲಿ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಿರ್ವಹಿಸಲು ಮತ್ತು ವಿಸ್ತರಿಸಲು, ಭಾರತ ಇತರೆಡೆ ದಾಳಿಗಳನ್ನು ನಡೆಸಲು ಜೆಎಂನ ನಾಯಕ ಮಸೂದ್ ಅಜರ್‌ಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಆರೋಪಿಸಿತು.
ಪುಲ್ವಾಮಾ ದಾಳಿಯಲ್ಲಿ ಪಾಕ್ ಭಾಗವಹಿಸಿದೆ ಎಂಬ ಆರೋಪವನ್ನು ಪಾಕಿಸ್ತಾನ ನಿರಾಕರಿಸಿತು. ಇದಕ್ಕೆ ಕಾರಣರಾದವರು ಭಾರೀ ಬೆಲೆ ತೆರಬೇಕಾಗುತ್ತದೆ ಮತ್ತು ಭಯೋತ್ಪಾದಕರನ್ನು ಎದುರಿಸಲು ಭದ್ರತಾ ಪಡೆಗಳಿಗೆ ಮುಕ್ತ ನಿಯಂತ್ರಣ ನೀಡಲಾಗುವುದು ಎಂದು ಅಂದು ಪ್ರಧಾನಿ ಮೋದಿ ಗುಡುಗಿದ್ದರು. ಇಂತಹ ದಾಳಿಗಳನ್ನು ಸಂಘಟಿಸಿ ಭಾರತವನ್ನು ದುರ್ಬಲಗೊಳಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಜಮ್ಮುವಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಯಿತು. ಮಿಲಿಟರಿ ಪಡೆಗಳ ನಿಯೋಜನೆಯಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಎತ್ತಿಹಿಡಿಯಲಾಯಿತು.
ಆದರೆ ಭಾರತವು ಮಾತ್ರ ಸುಮ್ಮನೆ ಇರಲಿಲ್ಲ. ಈ ಪಾಕ್ ಗೆ ಪ್ರತ್ಯುತ್ತರವನ್ನು ನೀಡುವ ಮೂಲಕ ಹನ್ನೆರಡು ದಿನಗಳ ಬಳಿಕ ಭಾರತೀಯ ವಾಯುಪಡೆಯ ಜೆಟ್‌ಗಳು ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾದಲ್ಲಿರುವ ಬಾಲಾಕೋಟ್‌ನಲ್ಲಿರುವ ಜೆಇಎಂ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸುವಲ್ಲಿ ಯಶಸ್ವಿಯಾಗಿತ್ತು. ಕೊನೆಗೆ ಭಾರತ ಪಾಕ್ ವಿರುದ್ಧ ನಡೆಸಿದ್ದ ದಾಳಿಯಲ್ಲಿ 250 ಪಾಕ್ ಉಗ್ರರು ಬಲಿಯಾದರು.
Leave a Comment