ರಜನಿಕಾಂತ್​ಗೆ ಹೃದಯ ಸಮಸ್ಯೆ: ಆಸ್ಪತ್ರೆಯಿಂದ ಮಹತ್ವದ ಮಾಹಿತಿ

thalaivar rajinikanth
Spread the love

ಚೆನ್ನೈ: ನಟ ರಜನಿಕಾಂತ್​ ಅವರು ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿದು ಅಭಿಮಾನಿಗಳಿಗೆ ಆತಂಕ ಆಗಿದೆ. ಅವರ ಆರೋಗ್ಯದ ಬಗ್ಗೆ ಹಲವು ಬಗೆಯ ವರದಿಗಳು ಪ್ರಕಟ ಆಗಿವೆ. ನಿಜಕ್ಕೂ ರಜನಿಕಾಂತ್ ಅವರಿಗೆ ಎದುರಾಗಿರುವ ಆರೋಗ್ಯ ಸಮಸ್ಯೆ ಏನು ಎಂಬ ಬಗ್ಗೆ ಈಗ ಆಸ್ಪತ್ರೆಯ ಕಡೆಯಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ.

‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದೆ. ಅದಕ್ಕೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ತನಾಳ ಉಬ್ಬಿದ್ದರಿಂದ ಸ್ಟೆಂಟ್​ ಹಾಕಲಾಗಿದೆ ಎಂದು ವರದಿಯಾಗಿದೆ.

‘ರಜನಿಕಾಂತ್​ ಅವರನ್ನು ಅಪೋಲೋ ಆಸ್ಪತ್ರೆಗೆ ಸೆಪ್ಟೆಂಬರ್​ 30ರಂದು ದಾಖಲಿಸಲಾಗಿತ್ತು. ಅವರ ರಕ್ತನಾಳದಲ್ಲಿ ಊತ ಕಾಣಿಸಿಕೊಂಡಿತ್ತು. ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಹಿರಿಯ ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್​ ಅವರಿಗೆ ಸ್ಟೆಂಟ್​ ಹಾಕಿದ್ದಾರೆ. ಅಂದುಕೊಂಡ ರೀತಿಯೇ ಚಿಕಿತ್ಸೆ ಫಲಕಾರಿ ಆಗಿದೆ ಎಂದು ಅಭಿಮಾನಿಗಳಿಗೆ ಮತ್ತು ಹಿತೈಷಿಗಳಿಗೆ ತಿಳಿಸುತ್ತೇವೆ. ರಜನಿಕಾಂತ್​ ಆರೋಗ್ಯ ಸ್ಥಿರವಾಗಿದೆ.

ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ಎರಡು ದಿನಗಳಲ್ಲಿ ಅವರು ಮನೆಗೆ ತೆರಳಲಿದ್ದಾರೆ’ ಎಂದು ಕೂಡ ಆಸ್ಪತ್ರೆಯ ಕಡೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ಕಡೆಯಿಂದ ಹೆಲ್ತ್​ ಅಪ್​ಡೇಟ್​ ನೀಡಲಾಗಿದೆ.

Leave a Comment

Leave a Reply

Your email address will not be published. Required fields are marked *