ಶ್ವಾನಕ್ಕಾಗಿ ಮಿಡಿದ ರತನ್ ಮನ; ಬ್ರಿಟನ್​ನ ಪ್ರತಿಷ್ಠಿತ ಪ್ರಶಸ್ತಿಯನ್ನೇ ತಿರಸ್ಕರಿಸಿದ್ದ ದಿಗ್ಗಜ

Ratan Tata
Spread the love

ನ್ಯೂಸ್ ಆ್ಯರೋ: ನಗರದ ಬೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಖ್ಯಾತ ವಾಣಿಜ್ಯೋದ್ಯಮಿ ರತನ್ ಟಾಟಾ ಬುಧವಾರ (ಅ 9) ತಡರಾತ್ರಿ ನಿಧನ ಹೊಂದಿದ್ದಾರೆ. ಆ ಮೂಲಕ, ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಂತಿದ್ದ ಮಹಾನ್ ಚೇತನವೊಂದನ್ನು ದೇಶ ಕಳೆದುಕೊಂಡಿದೆ.

ಬ್ರಿಟನ್​ನ ರಾಜಮನೆತನ ನೀಡುವ ಪ್ರತಿಷ್ಠಿತ ಪ್ರಶಸ್ತಿಯನ್ನು ಅಂದು ತಮ್ಮ ಸಾಕು ನಾಯಿಗೋಸ್ಕರ ತಿರಸ್ಕರಿಸಿದ್ದರು. ಹೌದು. . 2018ರ ಫೆಬ್ರವರಿ 6ರಂದು ಬ್ರಿಟನ್​ನ ರಾಜಮನೆತನ ಬಕಿಂಗ್​ಹ್ಯಾಮ್ ಅರಮನೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಸಮಾರಂಭದಲ್ಲಿ ಬ್ರಿಟನ್ ರಾಯಲ್ ಪ್ರಿನ್ಸ್​​ ಚಾರ್ಲ್ಸ್​ ಅವರು ಭಾರತೀಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಲೋಕೋಪಕಾರಿ ಕೆಲಸಕ್ಕೆ ಜೀವಮಾನದ ಸಾಧನೆ ಪ್ರಶಸ್ತಿ ನೀಡಲು ಬಯಸಿದ್ದರು.

ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ, ಆದರೆ ಅದಕ್ಕೆ ಕಾರಣ ಅವರ ಸಾಕು ನಾಯಿ ಎಂದು ಹೇಳಿದರೆ ನಿಮಗೆಲ್ಲಾ ಆಶ್ಚರ್ಯವಾಗಬಹುದು. ಅಂಕಣಕಾರ ಸುಹೇಲ್ ಸೇಠ ಈ ಘಟನೆಯನ್ನು ಕೆಲವು ಸಮಯಗಳ ಹಿಂದೆ ಯೂಟ್ಯೂಬ್ ವಿಡಿಯೋದಲ್ಲಿ ನೆನಪಿಸಿಕೊಂಡಿದ್ದರು , ಇಷ್ಟು ದೊಡ್ಡ ಕಾರ್ಯಕ್ರಮಕ್ಕೆ ರತನ್ ಟಾಟಾ ಏಕೆ ಹೋಗಿರಲಿಲ್ಲ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದ್ದರು.

ಬ್ರಿಟಿಷ್ ಏಷ್ಯನ್ ಟ್ರಸ್ಟ್ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿತ್ತು ಎಂದು ಅವರು ಹೇಳಿದರು. ಕಾರ್ಯಕ್ರಮಕ್ಕೆ ಹಾಜರಾಗಲು ತಾನು ಫೆಬ್ರವರಿ 2 ಅಥವಾ ಫೆಬ್ರವರಿ 3 ರಂದು ಲಂಡನ್ ತಲುಪಿದ್ದೆ ಎಂದು ಸುಹೇಲ್ ಹೇಳಿದರು.

ಸುದೀರ್ಘ ವಿಮಾನ ಪ್ರಯಾಣದ ನಂತರ ಲಂಡನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ತಮ್ಮ ಫೋನ್‌ನಲ್ಲಿ ರತನ್​ ಟಾಟಾ ಅವರ 11 ಮಿಸ್ಡ್​ ಕಾಲ್ ಇದ್ದಿದ್ದು ನೋಡಿ ಆಶ್ಚರ್ಯವಾಯಿತು. ಅವರ ಒಂದು ಸಾಕು ನಾಯಿಗೆ ತೀವ್ರ ಅನಾರೋಗ್ಯ ಕಾಡಿತ್ತು, ಅದಕ್ಕೆ ಕಾಯಿಲೆ ಇದೆ ಅದನ್ನು ಬಿಟ್ಟುಬರಲು ಸಾಧ್ಯವಿಲ್ಲ ಎಂದು ರತನ್ ಹೇಳಿದ್ದರು. ಅವರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ, ಆ ಕಾರ್ಯಕ್ರಮಕ್ಕೆ ಪ್ರಶಸ್ತಿ ಸ್ವೀಕರಿಸಲು ಅವರು ಬಂದಿರಲಿಲ್ಲ.ರಾಜಕುಮಾರ ಚಾರ್ಲ್ಸ್ ಅವರು, ಮನುಷ್ಯನೆಂದರೆ ಹೀಗಿರಬೇಕು, ರತನ್ ಟಾಟಾ ಅದ್ಭುತ ವ್ಯಕ್ತಿ ಎಂದು ಹೇಳಿದ್ದರು.

Leave a Comment

Leave a Reply

Your email address will not be published. Required fields are marked *

error: Content is protected !!