ಸಾಲಗಾರರಿಗೆ ಬಿಗ್ ರಿಲೀಫ್ : ರೆಪೋ ದರ ಯಥಾಸ್ಥಿತಿ ಮುಂದುವರಿಕೆ

governor Shaktikanta Das.
Spread the love

ನ್ಯೂಸ್ ಆ್ಯರೋ: ಆರ್​ಬಿಐ ಬಡ್ಡಿದರ ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಸತತ 10ನೇ ಬಾರಿ ಆರ್​ಬಿಐ ನಿಲುವು ಅಚಲವಾಗಿದೆ. ಇದರೊಂದಿಗೆ ರೆಪೋ ದರ ಅಥವಾ ಬಡ್ಡಿದರ ಶೇ. 6.50ರಲ್ಲಿ ಮುಂದುವರಿಯಲಿದೆ. ಸೋಮವಾರದಿಂದ ಮೂರು ದಿನಗಳ ಕಾಲ ನಡೆದ ಎಂಪಿಸಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ಸಭೆಯ ನಿರ್ಧಾರಗಳನ್ನು ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಆರ್​ಬಿಐನ ಆರು ಎಂಪಿಸಿ ಸದಸ್ಯರಲ್ಲಿ ಐವರು ಸದಸ್ಯರು ರೆಪೋ ದರ ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದರು ಎಂದು ಶಕ್ತಿಕಾಂತದಾಸ್ ಹೇಳಿದ್ದಾರೆ. ಎಂಎಸ್​ಎಲ್​ಆರ್ ಇತ್ಯಾದಿ ಇತರ ದರಗಳೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ.

ರಿಪೋ ದರ ಎಂದರೆ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ವಿಧಿಸಲಾಗುವ ಬಡ್ಡಿದರವಾಗಿದೆ. ರಿವರ್ಸ್ ರಿಪೋ ಎಂದರೆ ಆರ್​ಬಿಐನಲ್ಲಿ ಬ್ಯಾಂಕುಗಳು ಇಡುವ ಠೇವಣಿಗೆ ಸಿಗುವ ಬಡ್ಡಿಯಾಗಿದೆ. ಆರ್​ಬಿಐನ ಈ ದರಗಳು ಬ್ಯಾಂಕುಗಳ ಬಡ್ಡಿದರ ನೀತಿಗೆ ಪ್ರಭಾವ ಬೀರುತ್ತವೆ. ರಿಪೋ ದರಗಳು ಹೆಚ್ಚಾದರೆ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ಹೆಚ್ಚಿಸಬಹುದು. ಹೀಗಾಗಿ, ಆರ್​ಬಿಐನ ರಿಪೋದರ ದೇಶದ ಹಣಕಾಸು ಮಾರುಕಟ್ಟೆಯಲ್ಲಿ ಪರಿಣಾಮ ಬೀರುತ್ತದೆ. ಆಹಾರ ಮತ್ತು ಲೋಹಗಳ ಬೆಲೆಗಳಲ್ಲಿ ಇತ್ತೀಚೆಗೆ ಆಗಿರುವ ಹೆಚ್ಚಳವು ಹಣದುಬ್ಬರ ಹೆಚ್ಚಳಕ್ಕೆ ಎಡೆ ಮಾಡಿಕೊಡಬಹುದು ಎನ್ನುವ ಆತಂಕವನ್ನು ಶಕ್ತಿಕಾಂತ ದಾಸ್ ವ್ಯಕ್ತಪಡಿಸಿದ್ದಾರೆ.

ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಆರ್ಥಿಕತೆ ಬಗ್ಗೆ ಆಶಾದಾಯಕವಾಗಿದ್ದಾರೆ. 2024-25ರ ಹಣಕಾಸು ವರ್ಷದಲ್ಲಿ ಆರ್ಥಿಕತೆ ಶೇ. 7.2ರಷ್ಟು ಬೆಳೆಯಬಹುದು ಎಂದಿದ್ದಾರೆ. ಈ ಹಣಕಾಸು ವರ್ಷದ ಎರಡು, ಮೂರು ಮತ್ತು ನಾಲ್ಕನೇ ಕ್ವಾರ್ಟರ್​ನಲ್ಲಿ ಜಿಡಿಪಿ ಕ್ರಮವಾಗಿ ಶೇ. 7.0, ಶೇ. 7.4, ಮತ್ತು ಶೇ. 7.4ರ ದರದಲ್ಲಿ ಬೆಳೆಯಬಹುದು ಎಂದಿದ್ದಾರೆ. ಮುಂದಿನ ಹಣಕಾಸು ವರ್ಷದ ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು ಎಂದೂ ಅಂದಾಜಿಸಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!