
Pepper Bangda Fry Recipe : ನಾನ್ ವೆಜ್ ಪ್ರಿಯರಿಗೆ ಇಷ್ಟವಾಗುತ್ತೆ ಪೆಪ್ಪರ್ ಬಂಗುಡೆ ಫ್ರೈ – ಮಾಡೋದು ಹೇಗೆ? ವಿಧಾನ ಇಲ್ಲಿದೆ..
- ನಳಪಾಕ
- August 26, 2023
- No Comment
- 85
ನ್ಯೂಸ್ ಆ್ಯರೋ : ಮೀನುಪ್ರಿಯರಿಗೆ ಬಂಗುಡೆ ಮೀನು (Bangda Fish Fry) ಅಂದರೆ ತುಂಬಾ ಇಷ್ಟ. ಅದರಲ್ಲೂ ಬಂಗುಡೆ ಫ್ರೈಯನ್ನು ಎಲ್ಲರೂ ಇಷ್ಟಪಡುತ್ತಾರೆ. ಇಂತಹ ಬಂಗುಡೆ ಫ್ರೈಯನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು. ಈ ಫಿಶ್ ಫ್ರೈ ಗರಿ ಗರಿಯಾಗಿರುತ್ತದೆ ಮತ್ತು ರುಚಿಕರವಾಗಿರುತ್ತದೆ. ಮೀನಿನ ಫ್ರೈಯನ್ನು ಈರುಳ್ಳಿ ಮತ್ತು ನಿಂಬೆ ಹಣ್ಣಿನ ಹೋಳಿನ ಜೊತೆಗೆ ಬಡಿಸಿ. ನಿಮ್ಮ ಕುಟುಂಬದ ಸದಸ್ಯರು ಖಂಡಿತವಾಗಿ ಈ ಭಾರತದ ಶೈಲಿಯ ಮೀನಿನ ಖಾದ್ಯವನ್ನು (Fish Fry Recipe)ಇಷ್ಟಪಡುತ್ತಾರೆ.
ಬೇಕಾಗುವ ಸಾಮಗ್ರಿಗಳು:
- ಬಂಗುಡೆ ಮೀನು – ಅರ್ಧ ಕೆಜಿ
- ಕಾಳುಮೆಣಸಿನ ಪುಡಿ – 1 ಚಮಚ
- ಸೋಂಪು ಪುಡಿ – 1 ಚಮಚ
- ಕರಿಬೇವು- ಸ್ವಲ್ಪ
- ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ
- ಅಡುಗೆ ಎಣ್ಣೆ- 2 ಚಮಚ
- ಗರಂ ಮಸಾಲೆ- ಅರ್ಧ ಚಮಚ
- ನಿಂಬೆರಸ – 1 ಚಮಚ
- ಅರಿಶಿಣ – ಸ್ವಲ್ಪ
- ಖಾರದಪುಡಿ – ಅರ್ಧ ಚಮಚ
- ರುಚಿಗೆ ತಕ್ಕಷ್ಟು ಉಪ್ಪು
- ಜೀರಿಗೆ ಪೌಡರ್- ಅರ್ಧ ಚಮಚ
ಮಾಡುವ ವಿಧಾನ:
ಮೊದಲು ಮೀನನ್ನು ಚೆನ್ನಾಗಿ ತೊಳೆದುಕೊಂಡಿರಬೇಕು. ಒಂದು ಬೌಲ್‍ನಲ್ಲಿ ನಿಂಬೆರಸ, ಅರಿಶಿಣ, ಖಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಜೀರಿಗೆ ಪೌಡರ್, ಕಾಳುಮೆಣಸಿನ ಪುಡಿ, ಸೋಂಪಿನ ಪುಡಿ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲೆಯನ್ನು ಹಾಕಿ ಮಸಾಲೆಯನ್ನು ತಯಾರಿಸಿಕೊಂಡಿರಬೇಕು.
ಈಗಾಗಲೇ ನಾವು ತಯಾರಿಸಿದ ಮಸಾಲೆಯಲ್ಲಿ ಮೀನಿನ ತುಂಡುಗಳನ್ನು ಸೇರಿಸಿ ಕೆಲವು ನಿಮಿಷ ಹಾಗೆ ಇಟ್ಟಿರಬೇಕು.
ಪ್ಯಾನ್ ಬಿಸಿ ಮಾಡಿ ಅದಕ್ಕೆ ಅಡುಗೆಎಣ್ಣೆ ಹಾಕಿ ಬಿಸಿಯಾದ ನಂತರ ಅದರ ಮೇಲೆ ಮೀನಿನ ತುಂಡುಗಳನ್ನು ಇರಿಸಿ. ಎರಡೂ ಕಡೆ ಚೆನ್ನಾಗಿ ಬೇಯಿಸಿ. ಅದರ ಮೇಲೆ ಸೋಂಪು ಹಾಗೂ ಕಾಳುಮೆಣಸಿನ ಪುಡಿ ಉದುರಿಸಿದರೆ ರುಚಿಯಾದ ಬಂಗುಡೆ ಫ್ರೈ ಸವಿಯಲು ಸಿದ್ಧವಾಗುತ್ತದೆ.