ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ಪ್ರೇಮಿಗಳ ಪ್ರೀತಿಗೆ ಪೋಷಕರೂ ಒಪ್ಪಿದ್ರು, ಆದರೆ ವಿಧಿಯಾಟ ಬೇರೆ ಇತ್ತು‌..!! – ಪ್ರೇಮಪಕ್ಷಿಗಳ ಬದುಕಲ್ಲಿ ಆಗಿದ್ದೇನು ಗೊತ್ತಾ?

ನ್ಯೂಸ್ ಆ್ಯರೋ : ಕರ್ನೂಲ್ ಸರ್ಕಾರಿ ಆಸ್ಪತ್ರೆಯಲ್ಲಿ ಯುವಕನ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಆತನ ಪೋಷಕರು ಇದೊಂದು ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಹೊಸ ಸಂಚಲನ ಮೂಡಿಸಿದ್ದು, ಯುವಕನ ಪ್ರೇಮಿಯ ಕಡೆಯವರು ಆತನನ್ನು ಕೊಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಪ್ರಕರಣದ ಹಿನ್ನೆಲೆ:

ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಮಂಡಲದ ನೆಲಕೋಟ ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾಗಿದ್ದಾನೆ. ಇನ್ನೂ ಮೃತ ಯುವಕ ಅನಂತಪುರ ಜಿಲ್ಲೆಯ ಉರವಕೊಂಡ ಮಂಡಲದ ವೆಂಕಟಂ ಪಲ್ಲಿ ತಾಂಡಾದ ರಮಣಮ್ಮ ಎಂಬಾಕೆ ಇಬ್ಬರು ಪ್ರೀತಿಸುತ್ತಿದ್ದರು. ಅದಲ್ಲದೆ ಈ ಜೋಡಿ ಒಟ್ಟಿಗೂ ಇದ್ದೂ, ಕೆಲ ಭಿನ್ನಾಭಿಪ್ರಾಯಗಳಿಂದ ದೂರವಾಗಿದ್ದರು. ಇಬ್ಬರ ಮಧ್ಯೆ ರಾಜಿ ಪ್ರಯತ್ನಗಳು ನಡೆದರೂ ಅವು ವಿಫಲವಾದವು. ಇವರಿಬ್ಬರ ಸಂಬಂಧ ಕುಟುಂಬಗಳ ಮಧ್ಯೆಯೂ ಮಾತುಕತೆ ನಡೆದಿತ್ತು.

ಈ ಬೆಳವಣಿಗೆ ನಂತರ ದೂರವಾಗಿದ್ದ ಜೋಡಿ ಕರ್ನೂಲ್ ನಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದ ತಮ್ಮ ಪ್ರಿಯತಮೆ ರಮಣಮ್ಮ ಭೇಟಿಯಾಗಲು ಷಣ್ಮುಖ ತಿರುಪತಿಯಿಂದ ಬಂದಿದ್ದಾನೆ.

ಏಕಾಏಕಿ ಷಣ್ಮುಖ ಪೋಷಕರಿಗೆ ಕರೆ ಮಾಡಿದ ರಮಣಮ್ಮ ಪೋಷಕರು ನಿಮ್ಮ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅವನ ಶವ ಆಸ್ಪತ್ರೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದೀಗ ಮೃತನ ಪೋಷಕರು ಇದೊಂದು ಕೊಲೆಯಾಗಿದ್ದು, ರಮಣಮ್ಮ ಪೋಷಕರು ಮಾಡಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಯುವಕನ ಕುಟುಂಬದವರು ಒತ್ತಾಯಿಸುತ್ತಿದ್ದಾರೆ.

ರಮಣಮ್ಮ ಮತ್ತು ಕುಟುಂಬಸ್ಥರು ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ನಡೆಸಲು ಸಹಿ ಹಾಕಬೇಕಿದ್ದ ರಮಣಮ್ಮ ಸದ್ಯ ತಲೆಮರೆಸಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಕರ್ನೂಲ್ 3 ಟೌನ್ ಪೊಲೀಸ್ ಠಾಣೆ ಹಾಗೂ ಧರ್ಮಾವರಂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *