ಷರತ್ತು ಬದ್ಧ ಜಾಮೀನು ಸಡಿಲಿಕೆ ಕೋರ್ಟ್ ಆದೇಶ; ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ HD ರೇವಣ್ಣಗೆ ರಿಲೀಫ್..!
ನ್ಯೂಸ್ ಆ್ಯರೋ : ಮೈಸೂರು ಜಿಲ್ಲೆಯ ಕೆ ಆರ್ ನಗರದ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ರೇವಣ್ಣಗೆ ಷರತ್ತು ಬದ್ಧ ಜಾಮೀನಿನ ಸಡಿಲಿಕೆಗೆ ಕೋರ್ಟ್ ಆದೇಶ ನೀಡಿದೆ.
ಈ ಹಿಂದೆ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿತ್ತು. ಇದೀಗ ಈ ಷರತ್ತುಗಳಲ್ಲಿ ಸಡಿಲಿಕೆ ಮಾಡುವಂತೆ ಆದೇಶ ಹೊರಡಿಸಿದೆ.
ಮೈಸೂರಿನ ಕೆ ಆರ್ ನಗರದ ಮಹಿಳೆಯನ್ನು HD ರೇವಣ್ಣ ಅಪಹರಣ ಮಾಡಿದ್ದಾರೆ ಎಂದು ಅಪಹರಣಕ್ಕೆ ಒಳಗಾದ ಮಹಿಳೆಯ ಪುತ್ರ ಕೆ ಆರ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಎಸ್ ಐ ಟಿ ಅಧಿಕಾರಿಗಳು HD ರೇವಣ್ಣ ಅವರನ್ನು ಬಂಧಿಸಿದ್ದರು.
ಈ ಪ್ರಕರಣದಲ್ಲಿ HD ರೇವಣ್ಣ ಅವರು 10 ದಿನಗಳ ಕಾಲ ಪರಪ್ಪನ ಅಗ್ರಹಾರದಲ್ಲಿದ್ದರು. ಆ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.
ಇದೀಗ ಕೋರ್ಟ್ HD ರೇವಣ್ಣಗೆ ಹೊರ ರಾಜ್ಯಗಳಿಗೆ ಸಂಚರಿಸಲು ಅನುಮತಿ ನೀಡಿದೆ. ಆದರೆ ಕೋರ್ಟ್ ಅನುಮತಿ ಇಲ್ಲದೆ ದೇಶಾಂತರ ಹೋಗದಂತೆ ಷರತ್ತಿನಲ್ಲಿ ಸೂಚಿಸಲಾಗಿದೆ. ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
Leave a Comment