
ಚರ್ಚೆಯಾಗುತ್ತಿದೆ ಬಾಬಾ ವಂಗಾ ನುಡಿದ 2024ರ ಭವಿಷ್ಯ – ಪುಟಿನ್ ಕೊಲೆ ಯತ್ನ, ಜೈವಿಕ ದಾಳಿ, ಭಯಾನಕ ನೈಸರ್ಗಿಕ ವಿಕೋಪ..!!
- ಧಾರ್ಮಿಕ
- November 6, 2023
- No Comment
- 106
ನ್ಯೂಸ್ ಆ್ಯರೋ : ಹೊಸ ವರ್ಷಕ್ಕೆ ಆರಂಭಕ್ಕೆ ಕೆಲವೇ ದಿನಗಳು ಬಾಕಿಯಿರುವ ಸಮಯದಲ್ಲಿ ಖ್ಯಾತ ಭವಿಷ್ಯಗಾರ್ತಿ ಬಾಬಾ ವಂಗಾ ನುಡಿದಿರುವ ಭವಿಷ್ಯಗಳು ಇದೀಗ ಚರ್ಚೆಯಾಗುತ್ತಿದೆ.
ಯಾರೀ ಬಾಬಾ ವಂಗಾ?
ಇವರ ಭವಿಷ್ಯವಾಣಿ ಇದಾಗಲೇ ಜಗದ್ವಿಖ್ಯಾತಿ ಪಡೆದಿದೆ. ವರದಿಗಳ ಪ್ರಕಾರ, ಅವರು 1911ರಲ್ಲಿ ಉತ್ತರ ಮ್ಯಾಸಿಡೋನಿಯಾದ ಸ್ಟ್ರುಮಿಕಾದಲ್ಲಿ ಜನಿಸಿದರು. ಅವರ ಮೂಲ ಹೆಸರು ವಾಂಜೆಲಿಯಾ ಪಾಂಡೆವಾ ಡಿಮಿಟ್ರೋವಾ ಎಂದು. ತಮ್ಮ 12ನೇ ವಯಸ್ಸಿನಲ್ಲಿ ಭಾರೀ ಚಂಡಮಾರುತದ ಸಮಯದಲ್ಲಿ ನಿಗೂಢವಾಗಿ ದೃಷ್ಟಿ ಕಳೆದುಕೊಂಡರಂತೆ. 1996ರಲ್ಲಿ ಮೃತಪಟ್ಟಿರುವ ಬಾಬಾ ವಂಗಾ 5079ನೇ ಇಸವಿಯವರೆಗೂ ಏನೇನಾಗಲಿದೆ ಎನ್ನುವುದನ್ನು ಕಂಡು ಕೊಂಡಿದ್ದಾಗಿ ಹೇಳಿದ್ದು, ಅದನ್ನು ಸಮಾಜಕ್ಕೆ ತಿಳಿಸಿಯೇ ಕೊನೆಯುಸಿರೆಳೆದಿದ್ದರು ಎಂದು ಹೇಳಲಾಗಿದೆ.
ಈ ಹಿಂದೆ ವಂಗಾ ಅವರು ನುಡಿದ ಭವಿಷ್ಯವಾಣಿಯಂತೆ 2001ರಲ್ಲಿ ಅಮೆರಿಕದ ಅವಳಿ ಕಟ್ಟಡಗಳ ಮೇಲೆ ದಾಳಿ ನಡೆದಿತ್ತು. ಅಮೆರಿಕದ ಸಹೋದರರು ಲೋಹದ ಹಕ್ಕಿಗಳ ದಾಳಿಗೆ ಒಳಗಾಗಲಿದ್ದಾರೆ. ತೋಳಗಳು ಕೂಗಲಿವೆ, ಮುಗ್ಧರ ರಕ್ತದ ಕೋಡಿ ಹರಿಯಲಿದೆ ಎಂದು ಆಕೆ 1989ರಲ್ಲಿ ನುಡಿದಿದ್ದರು.
2021 ಮತ್ತು 2022 ಹಾಗೂ 2023ರಲ್ಲೂ ಬಾಬಾ ವಾಂಗಾರ ಕೆಲ ಭವಿಷ್ಯಗಳು ನಿಜವಾಗಿವೆ. ಇದೀಗ 2024ರಲ್ಲಿ ಘಟಿಸಲಿರುವ ಅನಾಹುತಗಳ ಬಗ್ಗೆ ಬಾಂಬಾ ವಾಂಗಾ ನುಡಿದಿರುವ ಭವಿಷ್ಯವಾಣಿ ಎಷ್ಟರ ಮಟ್ಟಿಗೆ ನಿಜವಾಗಲಿದೆ ಎಂದು ಕಾದು ನೋಡಬೇಕಿದೆ.
2024ಕ್ಕೆ ಸಂಬಂಧಿಸಿದಂತೆ ಬಾಬಾ ವಂಗಾ ಅವರು ಏಳು ಭವಿಷ್ಯವಾಣಿಗಳನ್ನು ಮಾಡಿದ್ದಾರೆ ಎಂದು ಮಾಧ್ಯಮವೊಂದು ವರದಿಮಾಡಿದೆ. ಅದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
- ಮುಂದಿನ ವರ್ಷ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಸಹ ದೇಶವಾಸಿಯಿಂದಲೇ ಹತ್ಯೆಯ ಪ್ರಯತ್ನ ನಡೆಯಲಿದೆಯಂತೆ.
- ಯುರೋಪ್ನಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಲಿವೆ ಮತ್ತು ದೊಡ್ಡ ದೇಶವೊಂದು ಜೈವಿಕ ಶಸ್ತ್ರಾಸ್ತ್ರ ಪರೀಕ್ಷೆಗಳು ಅಥವಾ ದಾಳಿಗಳನ್ನು ನಡೆಸಲಿದೆ.
- ಮುಂದಿನ ವರ್ಷ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ದೊಡ್ಡ ಆರ್ಥಿಕ ಬಿಕ್ಕಟ್ಟು ಉಂಟಾಗಲಿದೆ. ಹೆಚ್ಚುತ್ತಿರುವ ಸಾಲದ ಮಟ್ಟಗಳು ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಂತಹ ಅಂಶಗಳು ಇದಕ್ಕೆ ಕಾರಣಗಳಾಗಲಿದೆ ಎಂದು ಉಲ್ಲೇಖಿಸಲಾಗಿದೆ.
- ಮುಂದಿನ ವರ್ಷ ಭಯಾನಕ ಹವಾಮಾನ ಘಟನೆಗಳು ಮತ್ತು ನೈಸರ್ಗಿಕ ವಿಕೋಪಗಳು ಸಂಭವಿಸಲಿವೆ ಎಂದು ಬಾಬಾ ವಂಗಾ ಭವಿಷ್ಯ ನುಡಿದಿದ್ದಾರೆ.
- ಸೈಬರ್ ದಾಳಿಗಳು ಹೆಚ್ಚಾಗುತ್ತವೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಸುಧಾರಿತ ಹ್ಯಾಕರ್‌ಗಳು ಪವರ್ ಗ್ರಿಡ್‌ಗಳು ಮತ್ತು ನೀರಿನ ಸಂಸ್ಕರಣಾ ಘಟಕಗಳಂತಹ ನಿರ್ಣಾಯಕ ಮೂಲ ಸೌಕರ್ಯಗಳನ್ನು ಗುರಿಯಾಗಿಸುತ್ತಾರೆ, ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನು ಉಂಟುಮಾಡಲಿದೆಯಂತೆ.
- 2024ರಲ್ಲಿ ಆಲ್ಝೈಮರ್ (ಮರೆವಿನ ಕಾಯಿಲೆ) ಮತ್ತು ಕ್ಯಾನ್ಸರ್ ಸೇರಿದಂತೆ ಗುಣಪಡಿಸಲಾಗದ ಕಾಯಿಲೆಗಳಿಗೆ ಹೊಸ ಚಿಕಿತ್ಸೆಗಳು ಲಭ್ಯವಾಗಲಿದೆ ಎಂದು ಹೇಳಲಾಗಿದೆ.
- ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಯಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.