ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ – ವಿಸ್ಮಯ ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವ ಸಾವಿರಾರು ಭಕ್ತರು

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ – ವಿಸ್ಮಯ ಕಣ್ತುಂಬಿಕೊಳ್ಳಲು ಆಗಮಿಸುತ್ತಿರುವ ಸಾವಿರಾರು ಭಕ್ತರು

ನ್ಯೂಸ್ ಆ್ಯರೋ: ದಕ್ಷಿಣ ಭಾರತದ ಪವಿತ್ರ ಕ್ಷೇತ್ರವಾಗಿರುವ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆಗೆ ಶುರುವಾಗಿದೆ.

ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ತುಲಾ ಕಾಲದಲ್ಲಿ ತೀರ್ಥೋದ್ಭವ ನಡೆಯಲಿದೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಪ್ರಧಾನ ಅರ್ಚಕ ಗುರುರಾಜ್ ಆಚಾರ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಮಧ್ಯ ರಾತ್ರಿ ತೀರ್ಥೋದ್ಭವವಾಗುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಹಾಗಾಗಿ ಬೆಳಗ್ಗೆಯಿಂದಲೇ ನಿತ್ಯ ಪೂಜಾಕರ್ಮಗಳು ನಡೆಯುತ್ತದೆ. ಸಂಜೆ 4 ಗಂಟೆಯ ಬಳಿಕ ಬ್ರಹ್ಮ ಕುಂಡಿಕೆ ಬಳಿಗೆ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ. ಕಲ್ಯಾಣಿಯ ಮೇಲ್ಭಾಗದಲ್ಲಿ ಭಕ್ತರಿಗೆ ಪವಿತ್ರ ತೀರ್ಥ ಹಂಚಲು ವ್ಯವಸ್ಥೆ ಮಾಡಲಾಗಿದೆ.

ವಿಸ್ಮಯಕಾರಿ ಕುಂಡಿಕೆ: ತಲಕಾವೇರಿಯಲ್ಲಿನ ಕುಂಡಿಕೆಯಲ್ಲಿ ಪ್ರತಿ ವರ್ಷ ಕಾವೇರಿ ತೀರ್ಥ ರೂಪದಲ್ಲಿದರ್ಶನ ನೀಡುತ್ತಾಳೆ ಎನ್ನುವುದು ಪುರಾತನ ಕಾಲದಿಂದಲೂ ಇರುವ ನಂಬಿಕೆ. ಈ ಸಂದರ್ಭ ಸಹಸ್ರಾರು ಭಕ್ತರು ತೀರ್ಥರೂಪಿಣಿ ಕಾವೇರಿ ತಾಯಿಯನ್ನು ಕಣ್ಣು ತುಂಬಿಕೊಳ್ಳುತ್ತಾರೆ. ರಾಜ್ಯದ ಮೂಲೆ ಮೂಲೆಗಳಿಂದ ಹಾಗೂ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತರು ಆಗಮಿಸಿ ತೀರ್ಥವನ್ನು ಕೊಂಡೊಯ್ಯುತ್ತಾರೆ.

ತಲಕಾವೇರಿಗೆ ವಾಹನ ಪ್ರವೇಶ ನಿಷೇಧ, ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ: ಇಂದು ಸಂಜೆ 4 ಗಂಟೆಯ ಬಳಿಕ ಭಾಗಮಂಡಲದಿಂದ ತಲಕಾವೇರಿಗೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಭಕ್ತರ ಪ್ರಯಾಣಕ್ಕೆ ಉಚಿತ ಕೆಎಸ್​ಆರ್​ಟಿಸಿ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ.

ಭಕ್ತರ ಸ್ವಾಗತಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರ ನಿಯಂತ್ರಣಕ್ಕೆ ಬ್ಯಾರಿಕೇಡ್​ಗಳನ್ನು ಹಾಕಲಾಗಿದೆ. ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು ಕಟ್ಟೆಚ್ಚರವಹಿಸಲಾಗುತ್ತದೆ. ಭದ್ರತೆಗಾಗಿ ಕೆಎಸ್​ಆರ್​ಪಿ ಮತ್ತು ಡಿಎಆರ್​ ಪೊಲೀಸರನ್ನ ನಿಯೋಜಿಸಲಾಗಿದೆ. ತಲಕಾವೇರಿಗೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಲಾಗಿದೆ. ಭಕ್ತರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ. ಅಲ್ಲದೆ ಈ ಬಾರಿ ತೀರ್ಥ ಕೊಂಡೊಯ್ಯಲು ಪ್ಲಾಸ್ಟಿಕ್ ಬಿಂದಿಗೆ ಬಾಟಲಿ ಡಬ್ಬಗಳನ್ನು ತರುವುದನ್ನು ನಿಷೇಧಿಸಲಾಗಿದೆ.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *