ಅನಂತಪುರ : ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ – ಭಕ್ತರಲ್ಲಿ ಅಚ್ಚರಿ ಮೂಡಿಸಿದ ದೇವರ ಪವಾಡ..!!

ಅನಂತಪುರ : ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಹೊಸ ಮೊಸಳೆ ಪ್ರತ್ಯಕ್ಷ – ಭಕ್ತರಲ್ಲಿ ಅಚ್ಚರಿ ಮೂಡಿಸಿದ ದೇವರ ಪವಾಡ..!!

ನ್ಯೂಸ್ ಆ್ಯರೋ : ಕೇರಳದ ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಸಸ್ಯಹಾರಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ಇದು ಭಕ್ತರಲ್ಲಿ ಅಚ್ಚರಿಗೆ ಕಾರಣವಾಗಿದೆ.

ಕುಂಬಳೆ ಸಮೀಪದ ಅನಂತಪುರ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬ್ರಿಟೀಷರ ಗುಂಡೇಟಿಗೆ ಬಲಿಯಾಗಿದ್ದ ಮೊಸಳೆಯ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿತ್ತು. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಈ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿತ್ತು. ಆದರೆ, 2022 ರ ಅಕ್ಟೋಬರ್ 9 ರಂದು ಇದು ಮೃತಪಟ್ಟಿತ್ತು.

ಬಬಿಯಾ ಮೃತಪಟ್ಟು ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ.

ಬಬಿಯಾ ಮೊಸಳೆ

ಹಲವಾರು ದೇವಸ್ಥಾನಗಳಲ್ಲಿ ಆನೆ, ಬಸವ, ಇತ್ಯಾದಿ ಪ್ರಾಣಿಗಳು ದೇವರ ಪ್ರಾಣಿಗಳಾಗಿರುತ್ತವೆ. ಆದರೆ ಅನಂತಪದ್ಮನಾಭ ದೇವಸ್ಥಾನದಲ್ಲಿನ ಮೊಸಳೆ ದೇವರ ಮೊಸಳೆಯಾಗಿದೆ. ಕ್ಷೇತ್ರದ ಕೆರೆಯಲ್ಲಿ ನೀರಿನ ಮಧ್ಯೆಯೇ ಇದ್ದುಕೊಂಡಿದ್ದ ಬಬಿಯಾ ಮೊಸಳೆಗೆ ಪ್ರತಿನಿತ್ಯ ಪೂಜೆಯ ಬಳಿಕ ನೈವೇದ್ಯ ಅರ್ಪಿಸಲಾಗುತ್ತಿತ್ತು. ಈ ನೈವೇದ್ಯವೇ ಮೊಸಳೆಯ ಆಹಾರವಾಗಿತ್ತು. ಈ ಮೊಸಳೆಯು ಯಾರಿಗೂ ತೊಂದರೆ, ನೋವು ಉಂಟು ಮಾಡಿಲ್ಲ.

ಈ ಮೊಸಳೆಯು ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

Related post

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ – ಇನ್ಸ್ಟಾಗ್ರಾಮ್ ನಲ್ಲಿ ಪ್ರಧಾನಿ ಮೋದಿ ಬಗ್ಗೆ ಹೇಳಿದ್ದೇನು?

ಮೋದಿ ನನ್ನ ಜೀವದ ಗೆಳೆಯ ಎಂದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ…

ನ್ಯೂಸ್ ಆ್ಯರೋ : ಮನುಷ್ಯ ಅಂದ ಮೇಲೆ ಆತ ಸಂಘಜೀವಿ. ವ್ಯಕ್ತಿ ಅದೆಷ್ಟೇ ದೊಡ್ಡ ಮಟ್ಟದ ಸ್ಥಾನದಲ್ಲಿದ್ದರೂ ಅವನಿಗೂ ಒಬ್ಬ ಸ್ನೇಹಿತ, ಸ್ನೇಹ ಸಂಬಂಧ ಇದ್ದೇ ಇರುತ್ತದೆ‌. ಇದೀಗ…
20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ – ಅರೆಸ್ಟ್ ‌ಮಾಡಿದ್ಯಾರು‌ ಗೊತ್ತಾ?

20 ಲಕ್ಷ ಲಂಚ ಪೀಕುತ್ತಿದ್ದ ED ಅಧಿಕಾರಿ ರೆಡ್ ಹ್ಯಾಂಡ್ ಆಗಿ…

ನ್ಯೂಸ್ ಆ್ಯರೋ : ಹಣದ ದಾಹ ಯಾರಿಗಿಲ್ಲ ಹೇಳಿ. ಆದರೆ ಒಂದಂತೂ ಸತ್ಯ. ಅತ್ಯಂತ ಉತ್ತಮ ವೃತ್ತಿಯಲ್ಲಿರುವ, ದೊಡ್ಡ ಮೊತ್ತದ ವೇತನ ಸಂಪಾದಿಸುತ್ತಿರುವವರಿಗಂತೂ ಧನದಾಹ ದುಪ್ಪಟ್ಟು ಇರುತ್ತದೆ. ಇದಕ್ಕೆ…
ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ ಇವ್ರಿಗೆ ಲವ್ ಆಗಿದ್ದು ಹೇಗೆ ಗೊತ್ತಾ..?

ನೆದರ್ಲೆಂಡ್ಸ್‌ ಗೆಳತಿಯನ್ನು ಹಿಂದೂ ಸಂಪ್ರದಾಯದಂತೆ ಮದ್ವೆಯಾದ ಹಳ್ಳಿ ಹೈದ…! – ಅಷ್ಟಕ್ಕೂ…

ನ್ಯೂಸ್ ಆ್ಯರೋ : ‘ಪ್ರೀತಿಗೆ ಕಣ್ಣಿಲ್ಲ’ ಅಂತಾರೆ. ಜಾತಿ, ಧರ್ಮ, ದೇಶ ಇದ್ಯಾವುದರ ಮಾನದಂಡವೂ ಪ್ರೀತಿಗಿಲ್ಲ. ಅದೆಲ್ಲಕ್ಕಿಂತಲೂ ಪರಿಶುದ್ಧವಾದ ಸಂಬಂಧ ಅಂದ್ರೆ ಅದು ಪ್ರೀತಿ ಸಂಬಂಧ. ಪ್ರೀತಿಸಿದ ವ್ಯಕ್ತಿಗಾಗಿ…

Leave a Reply

Your email address will not be published. Required fields are marked *